ಬೆಂಗಳೂರು:ಬಜೆಟ್ ಪೂರ್ವಭಾವಿ ಸಿದ್ಧತೆಗಾಗಿ ಫೆ.7 ರಿಂದ ಇಲಾಖಾವಾರು ಚರ್ಚೆಯ ವೇಳಾಪಟ್ಟಿ ನಿಗದಿ ಮಾಡಲಾಗಿದ್ದು, ಫೆ.10 ಮಧ್ಯಾಹ್ನ 12ಕ್ಕೆ ಸಚಿವ ಸಭೆ ನಡೆಯಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಅವರು ಇಂದು ತಮ್ಮ ನಿವಾಸದ ಬಳಿ ಮಾಧ್ಯಮದವರೊಂದಿಗೆ ಮಾತನಾಡುತ್ತಿದ್ದರು. ವಿವಿಧ ಇಲಾಖೆಗಳೊಂದಿಗೆ ಆಯವ್ಯಯ ಪೂರ್ವಭಾವಿ ಸಭೆಗಳನ್ನು ಮುಂದಿನ ವಾರದಿಂದ ನಡೆಸಲಾಗುವುದು. ಕೇಂದ್ರ ಸರ್ಕಾರದಿಂದ ರಾಜ್ಯಕ್ಕೆ ದೊರೆಯಲಿರುವ ಸಾಲ ಹಾಗೂ ಅನುದಾನಗಳ ಆಧಾರದ ಮೇಲೆ ರಾಜ್ಯ ಸರ್ಕಾರದ ಆಯವ್ಯಯದ ನಿರ್ಣಯಗಳನ್ನು ಕೈಗೊಳ್ಳಲಾಗುವುದು ಎಂದು ಅವರು ಹೇಳಿದರು.
ನಾಳೆ ದೆಹಲಿ ಪ್ರವಾಸ: ಆಯವ್ಯಯಕ್ಕೂ ಮುನ್ನ ರಾಜ್ಯದ ಎಲ್ಲಾ ಸಂಸದರೊಂದಿಗೆ ಸಭೆ ಸೇರುವ ವಾಡಿಕೆಯಿದೆ. ಈ ಸಭೆಗೆ ಸಮಯ ನಿಗದಿಯಾಗುತ್ತಿದೆ. ಅಂತರರಾಜ್ಯ ಜಲವಿವಾದಗಳಲ್ಲಿ ರಾಜ್ಯವನ್ನು ಪ್ರತಿನಿಧಿಸುವ ವಕೀಲರನ್ನೂ ಭೇಟಿಯಾಗಲಿದ್ದು, ಬಹುತೇಕವಾಗಿ ನಾಳೆ ದೆಹಲಿಗೆ ಪ್ರಯಾಣ ಬೆಳೆಸುವ ಸಾಧ್ಯತೆಗಳಿವೆ ಎಂದು ಮುಖ್ಯಮಂತ್ರಿಗಳು ತಿಳಿಸಿದರು.


ಶಿವಧಾಮದಲ್ಲಿ ಪವಾಡ: ರಾತ್ರಿ ಶಿವಲಿಂಗದ ಸುತ್ತಲೂ ಪ್ರದಕ್ಷಿಣೆ ಹಾಕಿದ ನಾಗರಹಾವು- ಸಿಸಿಟಿವಿಯಲ್ಲಿ ಸೆರೆ

ಪೊಲೀಸ್‌ ಠಾಣೆ ಮೆಟ್ಟಿಲೇರಿದ ಐಎಎಸ್‌ ದಂಪತಿ ಫಸ್ಟ್‌ನೈಟ್ ಕೇಸ್‌! 32 ವರ್ಷಗಳ ಬಳಿಕ ದೂರು

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:three − 2 =
Remember me
