ನವದೆಹಲಿ:ಮರಾಠಾ ಸಮುದಾಯಕ್ಕೆ ಪ್ರತ್ಯೇಕ ಪ್ರಾಧಿಕಾರ ರಚನೆ ಮಾಡಲು ನಿರ್ಧರಿಸಿರುವುದರ ವಿರುದ್ಧ ಬರುವ ಡಿಸೆಂಬರ್​ 5ರಂದು ಕರ್ನಾಟಕ ಬಂದ್​ಗೆ ಕೆಲ ಸಂಘಟನೆಗಳು ಕರೆ ಕೊಟ್ಟಿರುವ ಬೆನ್ನಲ್ಲೇ ಈ ಕುರಿತು ಮುಖ್ಯಮಂತ್ರಿ ಬಿ,ಎಸ್​.ಯಡಿಯೂರಪ್ಪ ಖಾರವಾಗಿ ಪ್ರತಿಕ್ರಿಯೆ ನೀಡಿದ್ದಾರೆ.
ರಾಜ್ಯದಲ್ಲಿರುವ ಮರಾಠಾ ಸಮುದಾಯದವರೂ ಕನ್ನಡಿಗರೇ. ಮರಾಠಾ ಅಭಿವೃದ್ಧಿ ಪ್ರಾಧಿಕಾರ ರಚನೆ‌ಗೆ ಏನಾದರೂ ಬಲವಂತದಿಂದ ಬಂದ್ ಮಾಡಿಸಿದರೆ ಅಂಥವರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಲಾಗುವುದು ಎಂದಿದ್ದಾರೆ. ಅಣ್ಣ- ತಮ್ಮಂದಿರಂತೆ ಇರುವ‌ ಮರಾಠಾ ಮತ್ತು ಕನ್ನಡಿಗರ ನಡುವೆ ದ್ವೇಷ ಭಾವ‌ ಹುಟ್ಟು ಹಾಕುವುದನ್ನು ಸಹಿಸಲಾಗದು ಎಂದಿದ್ದಾರೆ.
ಯಾವುದೇ ಕಾರಣಕ್ಕೂ ಕರ್ನಾಟಕ ಬಂದ್‌ಗೆ ಅವಕಾಶ ನೀಡುವುದಿಲ್ಲ. ಮರಾಠಾ ಸಮುದಾಯದವರು ಬೆಳಗಾವಿಯಲ್ಲಿ ಮಾತ್ರ ಇಲ್ಲ. ಎಲ್ಲೆಡೆಯೂ ಇದ್ದಾರೆ. ಬೆಳಗಾವಿಯ ಮರಾಠಿಗರು ವಿಶ್ವ ಕನ್ನಡ ಸಮ್ಮೇಳನಕ್ಕೆ ಸಂಪೂರ್ಣ ಬೆಂಬಲವನ್ನೂ ನೀಡಿದ್ದರು ಎನ್ನುವುದನ್ನು ಮರೆಯಬಾರದು. ಮರಾಠಾ ಸಮುದಾಯದಲ್ಲಿನ ಹಿಂದುಳಿದವರ ನೆರವಿಗೆ‌ ಪ್ರಾಧಿಕಾರ ಸ್ಥಾಪಿಸಲಾಗಿದೆ ಎಂದು ಸ್ಪಷ್ಟನೆ ನೀಡಿದರು.
ಇದನ್ನೂ ಓದಿ:ನಾಳೆ ಡಿಕೆಶಿ ಪುತ್ರಿ-ಎಸ್​.ಎಂ.ಕೃಷ್ಣ ಮೊಮ್ಮಗನ ಮದುವೆ ನಿಶ್ಚಿತಾರ್ಥ
ಮಹಾಜನ್ ತೀರ್ಪು ಅಂತಿಮ ಎಂಬುದು ಇಡೀ ಜಗತ್ತಿಗೆ ಗೊತ್ತಿದೆ, ಮರಾಠಿಗರು ಸಹ ನಮ್ಮ ರಾಜ್ಯದ ಕನ್ನಡಿಗರೇ. ಇದು ಮರಾಠಾ ಅಭಿವೃದ್ಧಿಗಾಗಿ ಮಾಡಿರುವ ಪ್ರಾಧಿಕಾರ. ಮರಾಠಿಗರು ಕೂಡ ಕಟ್ಟಾ ಹಿಂದುತ್ವ ವಾದಿಗಳು. ಜನರಲ್ಲಿ ವಿನಾಕಾರಣ ಗೊಂದಲ ಸೃಷ್ಟಿಸುವ ಕೆಲಸ ಮಾಡಬೇಡಿ ಎಂದು ಎಚ್ಚರಿಕೆ ನೀಡಿದರು.
ಮರಾಠ ಅಭಿವೃದ್ಧಿ ಪ್ರಾಧಿಕಾರ ರಚಿಸಿರುವ ರಾಜ್ಯ ಸರ್ಕಾರದ ವಿರುದ್ಧ ಪ್ರತಿಭಟನೆಗೆ ಇಳಿದಿರುವ ಕನ್ನಡ ಸಂಘಟನೆಗಳು ಈ ತೀರ್ಮಾನವನ್ನು ಹಿಂದಕ್ಕೆ ಪಡೆಯಲು ನವೆಂಬರ್​ 27ರವರೆಗೂ ಸರ್ಕಾರಕ್ಕೆ ಗಡುವು ನೀಡಿವೆ. ಅಷ್ಟರೊಳಗೆ ನಿರ್ಧಾರ ಹಿಂಪಡೆಯದೇ ಹೋದರೆ ಕರ್ನಾಟಕ ಬಂದ್ ನಡೆಸುವುದಾಗಿ ಎಚ್ಚರಿಸಿವೆ.
ಹೈಕೋರ್ಟ್​ ಕೆಂಗಣ್ಣಿಗೆ ಗುರಿಯಾದ ಕೆಪಿಸಿಸಿ ಕಾರ್ಯಾಧ್ಯಕ್ಷ- ₹5 ಲಕ್ಷ ದಂಡ

ಕಂಗನಾ v/s ಡಿ. ರೂಪಾ- ಹೊತ್ತಿ ಉರಿತಿದೆ ಪಟಾಕಿಯ ಕಿಡಿ: ಮೀಸಲಾತಿ ಅಡ್ಡ ಪರಿಣಾಮ ಅಂದ್ರು ನಟಿ!

ಪ್ರಧಾನಿ ಮೋದಿ ಆಯ್ಕೆಯನ್ನು ಪ್ರಶ್ನಿಸಿ ಅರ್ಜಿ ಸಲ್ಲಿಸಿ ಗೋಳೋ ಎನ್ನುತ್ತಿರುವ ಯೋಧ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:1 × 4 =
Remember me
