ನವದೆಹಲಿ:ಕಾವೇರಿ, ಪೆನ್ನಾರ್ ಸೇರಿದಂತೆ 5 ನದಿಗಳ ಜೋಡಣೆಗೆ ಕೇಂದ್ರ ಸರ್ಕಾರ ಸಮ್ಮತಿ ಸೂಚಿಸಿದ್ದು ಈ ಕುರಿತು ಕೇಂದ್ರ ಬಜೆಟ್‌ನಲ್ಲಿ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಘೋಷಣೆ ಮಾಡಿದ್ದಾರೆ. ಕೃಷ್ಣಾ-ಪೆನ್ನಾರ್ ನದಿ, ನರ್ಮದಾ-ಗೋದಾವರಿ, ಗೋದಾವರಿ-ಕೃಷ್ಣ ಜೋಡಣೆಗೆ ಈ ಅನುಮೋದನೆ ನೀಡಲಾಗಿದೆ.
ಈ ನದಿಗಳ ಜೋಡಣೆಗೆ 44,605 ಕೋಟಿ ರೂಪಾಯಿ ಅನುದಾನ ಮೀಸಲಿಡಲಾಗುತ್ತದೆ ಎಂದು ಸಚಿವೆ ಘೋಷಿಸಿದ್ದಾರೆ. ಈ ಮೂಲಕವಾಗಿ ನದಿ ನೀರಿನ ಹಂಚಿಕೆಗೆ ರಾಜ್ಯ ರಾಜ್ಯಗಳ ನಡುವೆ ಇರುವ ವಿವಾದಕ್ಕೆ ಭಾರಿ ತೆರೆ ಬೀಳುವ ನಿರೀಕ್ಷೆ ಇದೆ.
ಪೆನ್ನಾರ್‌ ನದಿ ಚಿಕ್ಕಬಳ್ಳಾಪುರ ಜಿಲ್ಲೆಯ ನಂದಿ ಬೆಟ್ಟಗಳಲ್ಲಿ ಉಗಮಿಸುವ ಇದು ಆಂಧ್ರ ಪ್ರದೇಶದ ಮೂಲಕ ಹರಿದು ಬಂಗಾಳ ಕೊಲ್ಲಿ ಸೇರುತ್ತದೆ. ಚನ್ನಕೇಶವ ಬೆಟ್ಟದಲ್ಲಿ ಹುಟ್ಟುವ ಈ ನದಿಯ ಉದ್ದ ಸುಮಾರು 597 ಕಿ.ಮೀ. ಇದ್ದು, ಕರ್ನಾಟಕದಲ್ಲಿ 61 ಕಿ.ಮೀ. ಹರಿಯುತ್ತದೆ. ವಾಯುವ್ಯದಲ್ಲಿರುವ ಚಿಕ್ಕಬಳ್ಳಾಪುರ, ತುಮಕೂರು ಜಿಲ್ಲೆಯಲ್ಲಿ 48 ಕಿ.ಮೀ. ದೂರ ಹರಿದು ಆಂಧ್ರ ಪ್ರದೇಶವನ್ನು ಪ್ರವೇಶಿಸುತ್ತದೆ. ಹಿಂದೂಪುರ ಮತ್ತು ಪಾವಗಡ ತಾಲೂಕಿನಲ್ಲಿ ಹರಿದು ನೆಲ್ಲೂರು ಜಿಲ್ಲೆ ಮೂಲಕ ಬಂಗಾಳ ಕೊಲ್ಲಿಯನ್ನು ಸೇರುತ್ತದೆ.
ಆಂಧ್ರ, ತಮಿಳುನಾಡು ಹಾಗೂ ಕರ್ನಾಟಕದ ಕೋಲಾರ, ಚಿಕ್ಕಬಳ್ಳಾಪುರ ಹಾಗೂ ಬೆಂಗಳೂರು ಗ್ರಾಮಾಂತರ ಪ್ರದೇಶದಲ್ಲಿ ಜಲಾನಯನ ಪ್ರದೇಶ ಹೊಂದಿರುವ ಪಾಲಾರ್ ಮತ್ತು ಪೆನ್ನಾರ್ ನದಿಯ ನೀರನ್ನು ಕರ್ನಾಟಕ ಬಳಸಿಕೊಳ್ಳಲು ಬ್ರಿಟಿಷರ ಕಾಲದ 1892ರ ಕಾಯ್ದೆ ಅಡ್ಡಿಯಾಗಿದೆ. ಈ ಕಾಯ್ದೆ ರದ್ದತಿ ಕುರಿತು ಮೂರೂ ರಾಜ್ಯಗಳು ಸರ್ಕಾರದ ಮೇಲೆ ಮೊದಲಿನಿಂದಲೂ ಒತ್ತಡ ಹೇರುತ್ತಿರುವುದು ಇಲ್ಲಿ ಉಲ್ಲೇಖಾರ್ಹ.
ಎಸ್‌ಬಿಐ ಸೇರಿದಂತೆ ಕೆಲವು ಬ್ಯಾಂಕ್‌ಗಳ ವಹಿವಾಟು ಬದಲಾವಣೆ: ಆನ್‌ಲೈನ್‌ ಹಣ ವರ್ಗಾವಣೆಗೆ ಶುಲ್ಕ

5ಜಿ ನಿರೀಕ್ಷೆಯಲ್ಲಿರುವವರಿಗೆ ಗುಡ್‌ನ್ಯೂಸ್: ವರ್ಷದೊಳಗೆ ಸಿಗಲಿದೆ ಸೇವೆ- ಬಜೆಟ್‌ನಲ್ಲಿ ಘೋಷಣೆ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:12 − 1 =
Remember me
