ಬೆಂಗಳೂರು:ಪ್ರಸಕ್ತ ಸಾಲಿನ ಕೇಂದ್ರ ಸಾಹಿತ್ಯ ಅಕಾಡೆಮಿಯ ಪ್ರಶಸ್ತಿ ಪ್ರಕಟವಾಗಿದೆ. ಬಳ್ಳಾರಿ ಜಿಲ್ಲೆಯ ಹಗರಿಬೊಮ್ಮನಹಳ್ಳಿಯ ದಾದಾಪೀರ್ ಜೈಮನ್ ಅವರು ಕೇಂದ್ರ ಸಾಹಿತ್ಯ ಅಕಾಡೆಮಿಯ ಯುವ ಸಾಹಿತ್ಯ ಪ್ರಶಸ್ತಿಗೆ ಭಾಜನರಾಗಿದ್ದು, ಶಿರಸಿ-ಸಿದ್ದಾಪುರದ ತಮ್ಮಣ್ಣ ಬೀಗಾರ ಅವರು ಕೇಂದ್ರ ಸಾಹಿತ್ಯ ಅಕಾಡೆಮಿಯ ಬಾಲ ಸಾಹಿತ್ಯ ಪ್ರಶಸ್ತಿಗೆ ಆಯ್ಕೆಗೊಂಡಿದ್ದಾರೆ.
ಕೇಂದ್ರ ಸಾಹಿತ್ಯ ಅಕಾಡೆಮಿ ನೀಡುವ ಈ ಪ್ರಶಸ್ತಿಯು 50 ಸಾವಿರ ರೂಪಾಯಿ ಹಾಗೂ ಸನ್ಮಾನವನ್ನು ಒಳಗೊಂಡಿರುತ್ತದೆ.
ದಾದಾಪೀರ್ ಅವರ ‘ನೀಲಕುರಿಂಜಿ ‘ ಕಥಾ ಸಂಕಲನಕ್ಕೆ ಯುವ ಸಾಹಿತ್ಯ ಪ್ರಶಸ್ತಿ ಬಂದಿದ್ದರೆ ತಮ್ಮಣ್ಣ ಬೀಗಾರ ಅವರ ‘ ಬಾವಲಿ ಗುಹೆ ‘ ಮಕ್ಕಳ ಕಾದಂಬರಿಗೆ ಬಾಲ ಸಾಹಿತ್ಯ ಪ್ರಶಸ್ತಿ ಸಂದಿದೆ. ‘ನೀಲಕುರಿಂಜಿ ‘ಯನ್ನು ರಾಯಚೂರು ಜಿಲ್ಹೆಯ ಕೆ.ಗುಡುದಿನ್ನಿಯ ವೈಷ್ಣವಿ ಪ್ರಕಾಶನ ಹಾಗೂ ‘ಬಾವಲಿ ಗುಹೆ ‘ಯನ್ನು ಬೆಂಗಳೂರಿನ ಅಭಿನವ ಪ್ರಕಾಶನವು ಪ್ರಕಟಿಸಿವೆ.
ಯುವ ಸಾಹಿತ್ಯ ಪ್ರಶಸ್ತಿಯ ಜ್ಯೂರಿಗಳಾಗಿ ಉಷಾ, ನಗರಗೆರೆ ರಮೇಶ್ ಹಾಗೂ ಎನ್.ಎಸ್. ಗುಂಡೂರ ಕಾರ್ಯ ನಿರ್ವಹಿಸಿದ್ದರೆ ಬಾಲ ಸಾಹಿತ್ಯ ಪ್ರಶಸ್ತಿಗೆ ಶಿವಲಿಂಗಪ್ಪ ಹಂದಿಹಾಳು , ಲೋಹಿತ್ ನಾಯ್ಕರ್ ಹಾಗೂ ಎಂ.ಎಚ್ ನಾಗರಾಜ್ ಅವರು ಜ್ಯೂರಿಗಳಾಗಿದ್ದರು. ಪುಸ್ತಕ ಆಯ್ಕೆ ಪ್ರಕ್ರಿಯೆಯು ಕೇಂದ್ರ ಸಾಹಿತ್ಯ ಅಕಾಡೆಮಿಯ ಕನ್ನಡ ಸಲಹಾ ಸಮಿತಿಯ ಸಂಯೋಜಕರಾದ ಡಾ ಸರಜೂ ಕಾಟ್ಕರ್ ಅವರ ಉಸ್ತುವಾರಿಯಲ್ಲಿ ನಡೆಯಿತು.
ಪ್ರಶಸ್ತಿಗಳನ್ನು ಡಿಸೆಂಬರ್ ತಿಂಗಳಲ್ಲಿ ದೆಹಲಿಯಲ್ಲಿ ನಡೆಯುವ ಸಮಾರಂಭದಲ್ಲಿ ಪ್ರದಾನ ಮಾಡಲಾಗುವುದು.
ಅಬ್ಬಬ್ಬಾ…! ಚತುರ್ಥಿಗೆ ಕುಳಿತುಕೊಳ್ಳಲು ರೆಡಿಯಾದ ಈ ಗಣಪನಿಗೆ 316.40 ಕೋಟಿ ರೂ. ವಿಮೆ!

ಶಿಕ್ಷಣ ತಜ್ಞ ಅನಿಲಕುಮಾರಗೆ ವಿಜಯರತ್ನ ಗರಿ; ಸಮಾಜಮುಖಿ ಸಾಧಕರಿಗೆ ವಿಜಯವಾಣಿ- ದಿಗ್ವಿಜಯ ವಾಹಿನಿ ಪ್ರತಿಷ್ಠಿತ ಗೌರವ ಪ್ರದಾನ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:five × three =
Remember me
