ಬೆಂಗಳೂರು:ಕಾಂಗ್ರೆಸ್ ಹಿರಿಯ ನಾಯಕ ಯು.ಟಿ ಖಾದರ್ ಅವರನ್ನು ವಿಧಾನಸಭೆ ಕಾಂಗ್ರೆಸ್ ಶಾಸಕಾಂಗ ಪಕ್ಷದ ಉಪ ನಾಯಕರಾಗಿ ನೇಮಕ ಮಾಡಲಾಗಿದೆ.
ಇದುವರೆಗೂ ಕಾಂಗ್ರೆಸ್ ಪಕ್ಷದ ಶಾಸಕಾಂಗ ನಾಯಕರಾಗಿ ಹಾಗೂ ಪ್ರತಿಪಕ್ಷ ನಾಯಕರಾಗಿ ಸಿದ್ದರಾಮಯ್ಯ ಕಾರ್ಯನಿರ್ವಹಿಸುತ್ತಿದ್ದರು. ಆದರೆ ಇದೀಗ ಇನ್ನೊಂದು ವರ್ಷದಲ್ಲಿ ರಾಜ್ಯ ವಿಧಾನಸಭೆ ಚುನಾವಣೆ ನಡೆಯಲಿರುವ ಕಾರಣ, ಕಾರ್ಯದೊತ್ತಡ ನಿಭಾಯಿಸುವ ಉದ್ದೇಶದಿಂದ ಶಾಸಕಾಂಗ ಪಕ್ಷದ ಉಪನಾಯಕರ ನೇಮಕ ಮಾಡಲಾಗಿದೆ.
ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಆದೇಶದ ಮೇರೆಗೆ ನೇಮಕ ಮಾಡಲಾಗಿದೆ ಎಂದು ಅಖಿಲ ಭಾರತ ಕಾಂಗ್ರೆಸ್ ಪಕ್ಷದ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ವಿಧಾನ ಪರಿಷತ್‌ನಲ್ಲಿ ವಿಪಕ್ಷ ನಾಯಕ ಸ್ಥಾನ ಮುಸ್ಲಿಂ ಸಮುದಾಯದ ನಾಯಕನಿಗೆ ತಪ್ಪಿದ ಹಿನ್ನೆಲೆ ವಿಧಾನ ಸಭೆಯಲ್ಲಿ ವಿಪಕ್ಷ ಉಪನಾಯಕನ ಸ್ಥಾನ ಮುಸ್ಲಿಂ ಸಮುದಾಯಕ್ಕೆ ಕಾಂಗ್ರೆಸ್ ಹೈಕಮಾಂಡ್ ನೀಡಿದೆ ಎನ್ನಲಾಗಿದೆ. ಸಿದ್ದರಾಮಯ್ಯ ಸಂಪುಟದಲ್ಲಿ ಸಚಿವರಾಗಿದ್ದ ಯು.ಟಿ ಖಾದರ್ ಅವರನ್ನೇ ನಾಯಕನನ್ನಾಗಿ ಘೋಷಿಸಲಾಗಿದ್ದು, ಇದರ ಹಿಂದೆ ಅಲ್ಪಸಂಖ್ಯಾತ ಮುಸಲ್ಮಾನ್ ಸಮುದಾಯದವರಿಗೆ ಪಕ್ಷದಲ್ಲಿ ಹೆಚ್ಚಿನ ಪ್ರಾತಿನಿಧ್ಯ ನೀಡಲಾಗಿದೆ ಎಂಬುದನ್ನು ತಿಳಿಸುವ ಪ್ರಯತ್ನ ಮಾಡಲಾಗಿದೆ ಎಂದೇ ವಿಶ್ಲೇಷಿಸಲಾಗುತ್ತಿದೆ.
Congratulations to@utkhaderfor being appointed as Deputy Leader of Congress Legislative Party in Karnataka Legislative Assembly.pic.twitter.com/Xx8aPAZqQC
— Karnataka Congress (@INCKarnataka)January 30, 2022

ವಿವಾಹೇತರ ಸಂಬಂಧದಿಂದ ಮಗು ಆದರೆ ಆಕೆ ಪುರುಷನ ಪತ್ನಿ ಎನಿಸಿಕೊಳ್ತಾಳಾ? ಕಾನೂನು ಏನು ಹೇಳುತ್ತದೆ?

ನಟಿಯರಿಬ್ಬರ ಜಟಾಪಟಿ: ಜಾಲತಾಣದಲ್ಲಿ ಬಿಸಿಬಿಸಿ ವಾತಾವರಣ ಸೃಷ್ಟಿಸಿದ ‘ಶಮಿತಾ ಆಂಟಿ’!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:5 × 3 =
Remember me
