ಬೆಂಗಳೂರು:ವಿಧಾನ ಪರಿಷತ್ ಉಪಸಭಾಪತಿ ಎಸ್​.ಎಲ್. ಧರ್ಮೇಗೌಡರ ನಿಧನಕ್ಕೆ ತೀವ್ರ ಸಂತಾಪ ವ್ಯಕ್ತಪಡಿಸಿರುವ ರಾಜ್ಯ ಸರ್ಕಾರ, ಅವರ ಅಂತ್ಯಸಂಸ್ಕಾರವನ್ನು ಸರ್ಕಾರಿ ಗೌರವದೊಂದಿಗೆ ನಡೆಸುವುದಕ್ಕೆ ಅಧಿಸೂಚನೆ ಪ್ರಕಟಿಸಿದೆ.
ಕನಿಷ್ಠ ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಿ, ಸಾಮಾಜಿಕ ಅಂತರ ಕಾಪಾಡಿಕೊಂಡು ಕೋವಿಡ್ ನಿಯಮ ಪಾಲಿಸುತ್ತ ಅಂತ್ಯಸಂಸ್ಕಾರ ನೆರವೇರಿಸುವುದಕ್ಕೆ ಸರ್ಕಾರ ಆದೇಶ ನೀಡಿದೆ. ಈ ನಡುವೆ, ವಿಧಾನ ಪರಿಷತ್ ಸಚಿವಾಲಯವೂ ಉಪ ಸಭಾಪತಿ ಎಸ್.ಎಲ್.ಧರ್ಮೇಗೌಡ ನಿಧನಕ್ಕೆ ಸಂತಾಪ ವ್ಯಕ್ತಪಡಿಸಿದೆ. ಮೃತರ ಗೌರವಾರ್ಥ ವಿಧಾನ ಪರಿಷತ್ ಸಚಿವಾಲಯಕ್ಕೆ ಮಂಗಳವಾರ ಒಂದು ದಿನದ ರಜೆ ಘೋಷಿಸಿ ಸಭಾಪತಿ ಕೆ.ಪ್ರತಾಪಚಂದ್ರಶೆಟ್ಟಿ ಆದೇಶಿಸಿದ್ದಾರೆ.
ಇದನ್ನೂ ಓದಿ:ಶಾಕಿಂಗ್ ನ್ಯೂಸ್ ! ವಿಧಾನಪರಿಷತ್ ಉಪಸಭಾಪತಿ ಎಸ್​.ಎಲ್​.ಧರ್ಮೇಗೌಡ ಆತ್ಮಹತ್ಯೆ..
ಕಡೂರಿಗೆ ಸಿಎಂ: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಇಂದು ಮಧ್ಯಾಹ್ನ 2.30ಕ್ಕೆ ಹೆಲಿಕಾಪ್ಟರ್ ನಲ್ಲಿ ಚಿಕ್ಕಮಗಳೂರು ಜಿಲ್ಲೆ ಕಡೂರು ತಾಲೂಕಿನ ಪಿಳ್ಳೇನಹಳ್ಳಿಗೆ ತೆರಳಿ, ಅಕಾಲಿಕವಾಗಿ ನಿಧನರಾದ ಉಪ ಸಭಾಪತಿ ಎಸ್.ಎಲ್.ಧರ್ಮೇಗೌಡರ ಪಾರ್ಥಿವ ಶರೀರಕ್ಕೆ ಅಂತಿಮ ಗೌರವ ಸಲ್ಲಿಸಲಿದ್ದಾರೆ
ಕ್ಷಣ ಕ್ಷಣದ ಸುದ್ದಿಗಳ ಅಪ್ಡೇಟ್ಸ್​ಗಾಗಿ ನಮ್ಮಫೇಸ್​ಬುಕ್​ ಪುಟಲೈಕ್ ಮಾಡಿ ಮತ್ತು ಫಾಲೋ ಮಾಡಿ..
‘ಮಾನಸಿಕವಾಗಿ ಕುಗ್ಗಿದ್ದರು ಧರ್ಮೇಗೌಡರು’

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:2 × four =
Remember me
