ವಿಜಯನಗರ:ತಾನು ಪ್ರೀತಿಸಿದ ಹುಡುಗಿ ತನ್ನನ್ನು ಮದುವೆಯಾಗಲಿಲ್ಲ ಎನ್ನುವ ಕಾರಣಕ್ಕೆ ಆಕೆಯ ರುಂಡ ಕಡಿದು ರುಂಡದ ಜತೆಗೆ ಪೊಲೀಸ್​ ಠಾಣೆಗೆ ಬಂದ ಭೀಕರ ಘಟನೆ ವಿಜಯನಗರ ಜಿಲ್ಲೆಯ ಕೂಡ್ಲಿಗಿ ತಾಲೂಕಿನ ಕನ್ನಬೋರನಯ್ಯನ ಹಟ್ಟಿಯಲ್ಲಿ ನಡೆದಿದೆ.
ನಿರ್ಮಲಾ (23 ) ಭೀಕರವಾಗಿ ಹತ್ಯೆಯಾದ ಯುವತಿ. ಭೋಜರಾಜ ಎನ್ನುವ ಪಾಗಲ್ ಪ್ರೇಮಿ ಈ ಕೃತ್ಯ ಎಸಗಿದ್ದಾನೆ.
ಭೋಜರಾಜ ನಿರ್ಮಲಾಳನ್ನು ಪ್ರೀತಿಸುತ್ತಿದ್ದ. ನಿರ್ಮಲಾ ಬಿಎಸ್ಸಿ ನರ್ಸಿಂಗ್ ವಿದ್ಯಾಭ್ಯಾಸ ಮಾಡುತ್ತಿದ್ದಳು. ನಿರ್ಮಲಾಳನ್ನು ಮದುವೆ ಮಾಡಿಕೊಂಡುವಂತೆ ಈ ಮೊದಲು ಆಕೆಯ ಪಾಲಕರಲ್ಲಿ ಈತ ಕೇಳಿದ್ದ. ಆದರೆ ಆಕೆಯ ಮನೆಯವರು ಒಪ್ಪಿರಲಿಲ್ಲ.
ಈ ಹಿನ್ನೆಲೆಯಲ್ಲಿ ಬೇರೊಬ್ಬಳನ್ನು ಎರಡು ತಿಂಗಳ ಹಿಂದೆ ಮದುವೆಯಾಗಿದ್ದ ಭೋಜರಾಜ. ಆದರೆ ನಿರ್ಮಲಾಳ ಮೇಲೆ ಸೇಡು ತೀರಿಸಿಕೊಳ್ಳಲು ಕಾಯುತ್ತಿದ್ದ. ಬೇರೊಂದು ಊರಿನಲ್ಲಿ ಬಿಎಸ್ಸಿ ನರ್ಸಿಂಗ್ ವಿದ್ಯಾಭ್ಯಾಸ ಮಾಡುತ್ತಿದ್ದ ನಿರ್ಮಲಾ, ಪರೀಕ್ಷೆಗಾಗಿ ಓದಲು ಊರಿಗೆ ಬಂದಿದ್ದಳು.
ಇದೇ ಸಮಯಕ್ಕೆ ಕಾಯುತ್ತಿದ್ದ ಈ ಪಾಗಲ್​ ಪ್ರೇಮಿ, ಮಚ್ಚಿನಿಂದ ಆಕೆಯ ತಲೆ ಕಡಿದು ರುಂಡದೊಂದಿಗೆ ಠಾಣೆಗೆ ಶರಣಾಗಿದ್ದಾನೆ! ಕೂಡ್ಲಿಗಿ ತಾಲೂಕಿನ ಖಾನಾಹೊಸಹಳ್ಳಿ ಠಾಣೆಗೆ ಯುವತಿಯ ರುಂಡದೊಂದಿಗೆ ಬಂದಿದ್ದಾನೆ ಈತ. ಸ್ಥಳಕ್ಕೆ ಹಿರಿಯ ಪೊಲೀಸ ಅಧಿಕಾರಿಗಳು ದೌಡಾಯಿಸಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ.(ದಿಗ್ವಿಜಯ ನ್ಯೂಸ್​)
ಕಂಕುಳಿನ ಕೂದಲಿನಿಂದ ಕೋಟಿ ಕೋಟಿ ರೂ. ಗಳಿಸ್ತಾಳೆ ಈಕೆ- ಬೆವರೇ ಈಕೆಯ ಆದಾಯದ ಮೂಲವಂತೆ!

ಛೇ… ಇದೆಂಥ ದುರಂತ! ಅಪಘಾತದಲ್ಲಿ ಪ್ರಾಣ ಬಿಡುತ್ತಲೇ ನಡುರಸ್ತೆಯಲ್ಲಿ ಮಗುವಿಗೆ ಜನ್ಮ ನೀಡಿದ ಅಮ್ಮ

ಯುವಕ ಬೀಸಿದ ಬಲೆಗೆ ಬಿದ್ದರು ಈ ನಾಲ್ವರು ಶಾಸಕಿಯರು! ಕಣ್ಣೀರಿಗೆ ಕರಗಿ ಹಣ ಕಳೆದುಕೊಂಡರು

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:2 × 2 =
Remember me
