ಬೆಂಗಳೂರು:ಆರನೇ ವೇತನ ಆಯೋಗದ ಜಾರಿ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕಳೆದ ಎಂಟು ದಿನಗಳಲ್ಲಿ ಸಾರಿಗೆ ನೌಕರರು ನಡೆಸುತ್ತಿರುವ ಮುಷ್ಕರ ಇನ್ನೂ ನಿಂತಿಲ್ಲ. ಈ ನಡುವೆಯೇ ಸಾರಿಗೆ ನೌಕರರು ಚಿತ್ರನಟ ಯಶ್‌ ಅವರಿಗೆ ಪತ್ರವೊಂದನ್ನು ಬರೆದಿರುವುದಾಗಿ ಸಾಮಾಜಿಕ ಜಾಲತಾಣದಲ್ಲಿ ಭಾರಿ ಚರ್ಚೆಯಾಗುತ್ತಿದೆ.
ನಿಮ್ಮ ತಂದೆಯವರು ಬಿಎಂಟಿಸಿ ನಿವೃತ್ತ ಚಾಲಕರು ಹೀಗಾಗಿ ಸಾರಿಗೆ ನೌಕರರ ಕುಟುಂಬದ ಹಿನ್ನೆಲೆಯುಳ್ಳ ನೀವು ಸಾರಿಗೆ ನೌಕರರ ಮುಷ್ಕರಕ್ಕೆ ಬೆಂಬಲ ನೀಡಬೇಕೆಂದು ಈ ಪತ್ರದಲ್ಲಿ ಮನವಿ ಸಲ್ಲಿಸಿದಂತೆ ಇದೆ.
ದಿನಾಂಕ, ವಿಳಾಸ ಯಾವುದೂ ಇಲ್ಲದ ಪತ್ರ ಇದಾಗಿದ್ದು, ಇದರ ಸತ್ಯಾಂಶ ಇನ್ನಷ್ಟೇ ಬಹಿರಂಗವಾಗಬೇಕಿದೆ. ಅಷ್ಟಕ್ಕೂ ಈ ಪತ್ರದಲ್ಲಿ ಯಶ್ ಅವರು ತಮ್ಮ ಮುಷ್ಕರಕ್ಕೆ ಬೆಂಬಲ ನೀಡುವಂತೆ ಮನವಿ ಮಾಡಿಕೊಂಡಿರುವ ಸಾಲುಗಳು ಈ ಪತ್ರದಲ್ಲಿ ಇವೆ. ಆದರೆ ಅನೇಕ ಮಂದಿ ಯಾರಾದರೂ ಮನವಿ ಸಲ್ಲಿಸಬೇಕು ಎಂದು ನೇರವಾಗಿ ಯಾರಿಗೆ ಸಲ್ಲಿಸಬೇಕೋ ಅವರಿಗೆ ಸಲ್ಲಿಸುತ್ತಾರೆಯೇ ವಿನಾ ಸಾಮಾಜಿಕ ಜಾಲತಾಣದಲ್ಲಿ ಸಲ್ಲಿಸುವುದಿಲ್ಲ, ಇದು ನಕಲಿ ಪತ್ರ ಎಂದಿದ್ದಾರೆ. ಕೆಲವರು ನೇರವಾಗಿ ಯಶ್‌ ಅವರಿಗೆ ಸಲ್ಲಿಸಲು ಸಾಧ್ಯವಾಗದ ಕಾರಣ, ಜಾಲತಾಣದ ಮೊರೆ ಹೋಗಿರಬಹುದು ಎಂದು ಅನಿಸಿಕೆಹಂಚಿಕೊಂಡಿದ್ದಾರೆ.

ಅದೇನೇ ಇರಲಿ… ವೈರಲ್‌ ಆಗಿರುವ ಈ ಪತ್ರದ ಸಂಪೂರ್ಣ ವಿವರ ಇಲ್ಲಿದೆ:ಜನಪ್ರಿಯ ನಟರು ಹಾಗೂ ನಿವೃತ್ತ ಬಿಎಂಟಿಸಿ ಚಾಲಕನ ಪುತ್ರರಾಗಿರುವ ಯಶ್‌ ಅವರಿಗೆ,‘ಯುಗಾದಿ ಹಬ್ಬದ ಶುಭಾಶಯ ಕೋರುತ್ತಾ, ಒಂದು ವಾರದಿಂದ ಕರ್ನಾಟಕದಲ್ಲಿ ಹಲವು ನ್ಯಾಯಯುತ ಬೇಡಿಕೆಗಳ ಈಡೇರಿಕೆಗಾಗಿ ಸಾರಿಗೆ ನೌಕರರು ನಡೆಸುತ್ತಿರುವ ಅನಿರ್ದಿಷ್ಟಾವಧಿ ಮುಷ್ಕರವು, ಸರ್ಕಾರದ ಹಠಮಾರಿ ಧೋರಣೆಯಿಂದ ತೀವ್ರ ಸ್ವರೂಪಕ್ಕೆ ತಿರುಗಿದೆ. ಸಾರಿಗೆ ನೌಕರರು ಕುಟುಂಬ ಸಮೇತರಾಗಿ ಬೀದಿಗಿಳಿದು ಹೋರಾಟ ಮಾಡುತ್ತಿರುವ ವಿಷಯ ನಿಮಗೆ ತಿಳಿಯದ್ದೇನಲ್ಲ.
ಸಾರಿಗೆ ನೌಕರ ಕುಟುಂಬದ ಹಿನ್ನೆಲೆ ಇರುವ, ಇಲ್ಲಿನ ನೌಕರರ ಪಾಡು-ಬದುಕು-ಬವಣೆಗಳ ಬಗೆಗೆ ಚಾಲಕರಾಗಿ ಸೇವೆ ಸಲ್ಲಿಸಿ ಸ್ವಯಂ ನಿವೃತ್ತಿ ಘೋಷಿಸಿರುವ ಹಾಗೂ ನಮಗೆ ಹಿರಿಯ ಸಿಬ್ಬಂದಿಯೂ ಆಗಿದ್ದ ನಿಮ್ಮ ತಂದೆಯವರು ಅನುಭವವನ್ನು ನಿಮ್ಮೊಡನೆ ಹಂಚಿಕೊಂಡಿರಬಹುದು.
ಪ್ರಯತ್ನ-ಪರಿಶ್ರಮದ ಫಲವಾಗಿ ಚಲನಚಿತ್ರ ರಂಗದಲ್ಲಿ ರಾಕಿಂಗ್ ಸ್ಟಾರ್ ಆಗಿ ಜನಮಾನಸದಲ್ಲಿ ರಾರಾಜಿಸುತ್ತಿರುವ ತಾವು ಸಮಾಜ ಸೇವೆಯಲ್ಲೂ ಹಿಂದೆ ಬಿದ್ದಿಲ್ಲ. ಇದು ನಮಗೆ ಹೆಮ್ಮೆಯ ವಿಷಯ. ಆದರೀಗ ಸಾರಿಗೆ ನೌಕರರು ನಿರಂತರವಾಗಿ ತಮ್ಮ ಮೇಲಾಗುತ್ತಿರುವ ತಾರತಮ್ಯ ದೌರ್ಜನ್ಯ-ದಬ್ಬಾಳಿಕೆಗಳಿಂದ ಬೇಸತ್ತು ಕುಟುಂಬ ಸಮೇತರಾಗಿ ಬೀದಿಗಿಳಿದಿದ್ದಾರೆ. ಹೃದಯಹೀನ ಸರ್ಕಾರ ತನ್ನ ಹಠಮಾರಿ ಧೋರಣೆಯಿಂದ ಸೇವೆ ಮಾಡುವ ಕೈಗಳನ್ನು ಭಿಕ್ಷೆ ಬೇಡುವಂತೆ ಮಾಡಿದೆ.
ಕಾನೂನಿನ ಚೌಕಟ್ಟಿನಲ್ಲಿ ಮುಷ್ಕರದ ಮೊರೆಹೋಗಿರುವ ನಾವು ಇಂತಹ ಸಂಕಷ್ಟದ ಸಮಯದಲ್ಲಿ ನಿಮ್ಮಿಂದ ಬೆಂಬಲ ನಿರೀಕ್ಷಿಸಬಹುದೇ?, ನಿಮ್ಮ ಏಳಿಗೆಯನ್ನು ಹೆಮ್ಮೆಯಿಂದ ಸಂಭ್ರಮಿಸುವ ನಾವು, ನಿಮ್ಮ ಬೆಂಬಲವು ನಮ್ಮ ಹೋರಾಟಕ್ಕೆ ಧನಾತ್ಮಕ ಪರಿಣಾಮ ಬೀರಬಹುದೆಂಬ ನಂಬಿಕೆ ಹೊಂದಿದ್ದೇವೆ. ನಿಮ್ಮ ಬೆಂಬಲದ ನಿರೀಕ್ಷೆಯಲ್ಲಿ ಆಸೆಗಣ್ಣಿಂದ ಕಾಯುತ್ತಿರುತ್ತೇವೆ… ಎಂದು ಇದೆ. ಈ ಪತ್ರದ ಬಗ್ಗೆ ಇದೀಗ ಭಾರಿ ಚರ್ಚೆಯಾಗುತ್ತಿದೆ.
ಮೊದಲ ನೋಟದಲ್ಲೇ ಪ್ರೇಮಿಸಿ ಮದ್ವೆಯಾದ: ಹೆಂಡ್ತಿಗಾಗಿ ದೇಹ ಮಾರಾಟ ದಂಧೆಗಿಳಿದ! ‌ಲ್ಯಾಪ್ ಟಾಪ್ ನೋಡಿ ಬೇಸ್ತು ಬಿದ್ದ ಪತ್ನಿ

ಬಿಇ ಪದವಿಧರರೆ? ಕೇಂದ್ರ ಸರ್ಕಾರದಲ್ಲಿವೆ 40 ಹುದ್ದೆಗಳು- 1.80 ಲಕ್ಷ ರೂ.ವರೆಗೆ ಸಂಬಳ

ಚಿಕ್ಕಂದಿನಿಂದಲೂ ಇವಳೇ ನಿನ್‌ ಹೆಂಡ್ತಿ ಎಂದರು- ಆದರೆ ಆದದ್ದೇ ಬೇರೆ: ಇಂಜಿನಿಯರಿಂಗ್‌ ವಿದ್ಯಾರ್ಥಿನಿಯ ಬರ್ಬರ ಹತ್ಯೆ!

ಕಂಗ್ರಾಟ್ಸ್ ಅಂತಾರೆ ಕನ್ನ ಹಾಕ್ತಾರೆ…!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:one × three =
Remember me
