ಬೆಂಗಳೂರು:ಸರ್ಕಾರಿ ಶಾಲೆಗಳಲ್ಲಿಯೂ ಎಲ್‌ಕೆಜಿ, ಯುಕೆಜಿ ಆರಂಭಿಸಿದರೆ ಹೆಚ್ಚಿನವರು ತಮ್ಮ ಮಕ್ಕಳನ್ನು ಸರ್ಕಾರಿ ಶಾಲೆಗಳಿಗೆ ಸೇರಿಸುತ್ತಾರೆ ಎಂಬ ಬಹು ವರ್ಷಗಳ ಕನಸನ್ನು ಈಗ ನನಸು ಮಾಡಲು ಸರ್ಕಾರ ಮುಂದಾಗಿದೆ.
ಬರುವ ಶೈಕ್ಷಣಿಕ ವರ್ಷದಿಂದಲೇ ಕರ್ನಾಟಕದ 276 ಸರ್ಕಾರಿ ಶಾಲೆಗಳಲ್ಲಿ ಎಲ್​​ಕೆಜಿ, ಯುಕೆಜಿ ಶಿಕ್ಷಣ ಆರಂಭಿಸಲಾಗುವುದು ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಮಾಧುಸ್ವಾಮಿ ಹೇಳಿದ್ದಾರೆ.
ಇದನ್ನೂ ಓದಿ:ಮುಂಗಾರು ಅಧಿವೇಶನಕ್ಕೆ ಅಸ್ತು: ಸೆ.21ರಿಂದ 30ರವರೆಗೆ ಕಲಾಪ, ಸಚಿವ ಸಂಪುಟ ಸಭೆ ತೀರ್ಮಾನ
ಈ ಕುರಿತು ಇಂದು ನಡೆದಿರುವ ಸಂಪುಟ ಸಭೆಯಲ್ಲಿ ತೀರ್ಮಾನಿಸಿರುವುದಾಗಿ ಅವರು ಹೇಳಿದ್ದಾರೆ. ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪನವರ ನೇತೃತ್ವದಲ್ಲಿ ಇಂದು ನಡೆದ ಸಚಿವ ಸಂಪುಟದಲ್ಲಿ ತೆಗೆದುಕೊಂಡಿರುವ ಹಲವಾರು ಮಹತ್ವದ ಮಾಹಿತಿಗಳ ಕುರಿತಾಗಿ ಮಾಧ್ಯಮಗಳ ಜತೆ ಮಾತನಾಡಿದ ಸಚಿವರು, ಸರ್ಕಾರ ಎಲ್‌ಕೆಜಿ, ಯುಕೆಜಿ ಆರಂಭದ ಕುರಿತು ಗಂಭೀರ ಚಿಂತನೆ ನಡೆಸಿದೆ. ಮುಂದಿನ ಶೈಕ್ಷಣಿಕ ವರ್ಷದಿಂದ ಎಲ್ಲ ಸರ್ಕಾರಿ ಶಾಲೆಗಳಲ್ಲಿ ಎಲ್​​​ಕೆಜಿ, ಯುಕೆಜಿ ಶಿಕ್ಷಣ ಆರಂಭಿಸಲಿದೆ ಎಂದಿದ್ದಾರೆ.
ಇದಕ್ಕೆ ಬೇಕಾಗಿರುವ ಎಲ್ಲ ಮೂಲಸೌಕರ್ಯಗಳನ್ನು ಸರ್ಕಾರ ಒದಗಿಸಲಿದ್ದು, ಈ ನಿಟ್ಟಿನಲ್ಲಿ ಕಾರ್ಯಪ್ರವೃತ್ತವಾಗಲಿದ್ದೇವೆ ಎಂದರು.
‘ಅಂಡರ್‌-40‘ ವಿಶ್ವದ ಪ್ರಭಾವಿಗಳ ಪಟ್ಟಿಯಲ್ಲಿ ಅಂಬಾನಿ ಅವಳಿ ಮಕ್ಕಳು

ಸೇನಾ ರಹಸ್ಯ ಕಾಪಾಡಲು ಫೋನ್‌ ಬಳಕೆಗೆ ಯೋಧರಿಗೆ ಹೊಸ ಮಾರ್ಗಸೂಚಿ ಪ್ರಕಟ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:seven + three =
Remember me
