ಬೆಂಗಳೂರು:ಸಬ್ ರಿಜಿಸ್ಟ್ರಾರ್ ಕಚೇರಿಗಳಲ್ಲಿ ನಡೆಯುತ್ತಿರುವ ಭ್ರಷ್ಟಾಚಾರ ನಡೆಯುತ್ತಿದೆ ಎಂದು ವ್ಯಾಪಕ ದೂರು ಕೇಳಿಬಂದ ಹಿನ್ನೆಲೆಯಲ್ಲಿ ಬೆಂಗಳೂರು ನಗರ ಹಾಗೂ ಗ್ರಾಮಾಂತರ ಸೇರಿದಂತೆ 10 ಉಪ ನೋಂದಣಾಧಿಕಾರಿಗಳ ಕಚೇರಿಗಳ ಮೇಲೆ‌ ಲೋಕಾಯುಕ್ತ ನ್ಯಾ.ಶಶಿಕಾಂತ್ ನೇತೃತ್ವದ ಪೊಲೀಸ್ ತಂಡ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದೆ‌.
ಇತ್ತೀಚಿನ ದಿನಗಳಲ್ಲಿ ಸಬ್ ರಿಜಿಸ್ಟ್ರಾರ್ ಕಚೇರಿಗಳಲ್ಲಿ ಇಸಿ ಸರ್ಟಿಫಿಕೇಟ್ ವಿಳಂಬ, ಅಕ್ರಮವಾಗಿ ಜಮೀನು ಪರಭಾರೆ, ನಕಲಿ ದಾಖಲೆ ಸೃಷ್ಟಿಸಿ ಜಮೀನು ಕಬಳಿಕೆ, ಖಾತಾ ಮಾಡಿಕೊಡಲು ಸಾರ್ವಜನಿಕರಿಂದ ಹೆಚ್ಚು ಹಣ ವಸೂಲಿ ಸೇರಿದಂತೆ ನಾನಾ ರೀತಿಯ ದೂರುಗಳ ಸರಮಾಲೆ ಲೋಕಾಯುಕ್ತಕ್ಕೆ ಬಂದಿತ್ತು‌.‌ ಇದನ್ನು ಗಂಭೀರವಾಗಿ ಪರಿಗಣಿಸಿದ ಲೋಕಾಯುಕ್ತರು ಇಂದು ಹತ್ತು ಕಡೆಗಳಲ್ಲಿ ದಾಳಿ ನಡೆಸಿ ಪರಿಶೀಲನೆ ನಡೆಸುತ್ತಿದೆ‌‌‌. ಪರಿಶೀಲನೆ ಬಳಿಕ ಆಂತರಿಕ ತನಿಖೆ ನಡೆಸಿ ಸರ್ಕಾರಕ್ಕೆ ವರದಿ ನೀಡಲಿದೆ..
ಎಲ್ಲೆಲ್ಲಿ ದಾಳಿ ಗೊತ್ತಾ ?ಯಶವಂತಪುರ, ಕೆ.ಆರ್.ಪುರ,‌ ಜಯನಗರ ನಾಗರಭಾವಿ, ಬೊಮ್ಮನಹಳ್ಳಿ, ಗಂಗಾನಗರ, ಬ್ಯಾಟರಾಯನಪುರ, ಮಾದನಾಯಕನಹಳ್ಳಿ, ಆರ್.ಆರ್.ನಗರ, ಅತ್ತಿಬೆಲೆ ಹಾಗೂ ಜಿಗಣಿ ಸಬ್ ರಿಜಿಸ್ಟ್ರಾರ್ ಕಚೇರಿಗಳ ಮೇಲೆ ಬೆಂಗಳೂರು ನಗರ ಲೋಕಾಯುಕ್ತ ಎಸ್ಪಿ ಕೆ.ವಿ.ಅಶೋಕ್ ನೇತೃತ್ವದಲ್ಲಿ 10 ಡಿಎಸ್ಪಿ 20 ಮಂದಿ ಇನ್ ಸ್ಪೆಕ್ಟರ್ ಸೇರಿದಂತೆ 50ಕ್ಕೂ ಹೆಚ್ಚು ಪೊಲೀಸರು ಸ್ಥಳಕ್ಕೆ ಭೇಟಿ ಪರಿಶೀಲನೆ ನಡೆಸಿದ್ದಾರೆ.
ಆಸ್ತಿ ಸ್ವಯಾರ್ಜಿತವಾಗಿದ್ದರೆ ಮೊಮ್ಮಕ್ಕಳಿಗೆ ಅದರಲ್ಲಿ ಯಾವುದೇ ಪಾಲು ಇಲ್ಲ- ಕಾನೂನಲ್ಲಿ ಉಲ್ಲೇಖವಾಗಿದ್ದು ಹೀಗಿದೆ ನೋಡಿ..

ರಿಲಯನ್ಸ್‌ ಜಿಯೋ ನಿರ್ದೇಶಕ ಹುದ್ದೆಗೆ ಮುಖೇಶ್​ ಅಂಬಾನಿ ರಾಜೀನಾಮೆ: ನೂತನ ಸಾರಥಿ ನೇಮಕ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:11 + one =
Remember me
