ಮಂಡ್ಯ:ಪ್ರೀತಿಯ ಮಗನ ಸಾವಿನ ಸುದ್ದಿ ಕೇಳುತ್ತಿದ್ದಂತೆ ತಾಯಿಯೂ ಮೃತಪಟ್ಟಿರುವ ಘಟನೆ ಮಂಡ್ಯ ಜಿಲ್ಲೆಯಲ್ಲಿ ನಡೆದಿದೆ. ಮಂಡ್ಯ ಜಿಲ್ಲೆ ನಾಗಮಂಗಲ ತಾಲೂಕಿನ ಗಿಡುವಿನಹೊಸಹಳ್ಳಿಕೊಪ್ಪಲು ಗ್ರಾಮದಲ್ಲಿ ಈ ಮನಕಲಕುವ ಘಟನೆ ನಡೆದಿದೆ.
ಲಕ್ಷ್ಮಮ್ಮ (70), ಕುಶ (43) ಮೃತಪಟ್ಟ ತಾಯಿ ಮಗ. ಲೋ ಬಿಪಿಯಿಂದ ಮನೆಯಲ್ಲೇ ಮಗ ಕುಶ ಮೃತಪಟ್ಟಿದ್ದರು. ಮಗನ ಸಾವಿನ ಸುದ್ದಿ ಕೇಳಿದ ಐದೇ ನಿಮಿಷದಲ್ಲಿ ತಾಯಿ ಲಕ್ಷ್ಮಮ್ಮ ಕೂಡ ಕೊನೆಯುಸಿರೆಳೆದಿದ್ದಾರೆ.
ಮೃತ ಕುಶ ಅವರು ಬೆಂಗಳೂರಿನಲ್ಲಿ ಸ್ವಂತ ಸ್ಟುಡಿಯೋ ಇಟ್ಟುಕೊಂಡಿದ್ದರು. ಅನಾರೋಗ್ಯದಿಂದಾಗಿ 4 ತಿಂಗಳ ಹಿಂದೆ ಊರಿಗೆ ವಾಪಸ್ಸಾಗಿದ್ದರು. ತಾಯಿ, ಮಗನ ಸಾವಿನಿಂದಾಗಿ ಕುಟುಂಬಸ್ಥರ ಆಕ್ರಂದನ ಮುಗಿಲುಮುಟ್ಟಿದೆ. ಶಾಸಕ ಸುರೇಶ್ ಗೌಡ ಮೃತರ ನಿವಾಸಕ್ಕೆ ತೆರಳಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ್ದಾರೆ.(ದಿಗ್ವಿಜಯ ನ್ಯೂಸ್‌)
ಬ್ಯಾಕ್‌ಗ್ರೌಂಡ್‌ ಚೆನ್ನಾಗಿರಲೆಂದು ಹಳಿಯ ಮೇಲೆ ನಿಂತು ಫೋಟೋ- ಪ್ರಾಣ ಕಳೆದುಕೊಂಡ ದಾವಣಗೆರೆಯ ಬಾಲಕ

VIDEO: ಪೊಲೀಸ್‌ ಇಲಾಖೆಯ ಭ್ರಷ್ಟಾಚಾರ ಮತ್ತೆ ಸಾಬೀತು! ಕಂತೆ ಕಂತೆ ಲಂಚದ ನೋಟು ಎಣಿಸುತ್ತಿರೋ ಭಾಲ್ಕಿಯ ಸಿಪಿಐ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:5 × three =
Remember me
