ಮಂಗಳೂರು:ಮೀನುಗಾರಿಕೆಗೆ ತೆರಳಿದ್ದ ಬೋಟ್ ಮುಳುಗಿರುವ ಘಟನೆ ಮಂಗಳೂರಿನಲ್ಲಿ ನಡೆದಿದ್ದು, ಆರು ಮಂದಿ ಮೀನುಗಾರರು ನಾಪತ್ತೆಯಾಗಿದ್ದಾರೆ. ಮೀನುಗಾರಿಕೆಗೆ ತೆರಳಿ ವಾಪಾಸಾಗುತ್ತಿದ್ದ ವೇಳೆ ಈ ಘಟನೆ ನಡೆದಿದೆ ಎನ್ನಲಾಗಿದೆ.
ದೋಣಿಯಲ್ಲಿ 20 ಕ್ಕೂ ಹೆಚ್ಚು ಮೀನುಗಾರರಿದ್ದು, ದುರಂತದ ಸಂದರ್ಭದಲ್ಲಿ 16 ಮಂದಿ ಪಾರಾಗಿದ್ದಾರೆ. 16 ಮಂದಿ ಡಿಂಗಿಯಲ್ಲಿ ಕುಳಿತ ಕಾರಣ ಅವರು ಪಾರಾಗಲು ಸಹಾಯವಾಯಿತು ಎಂದು ಪೊಲೀಸರು ಹೇಳಿದ್ದಾರೆ.
ಬೋಳಾರದ ಶ್ರೀರಕ್ಷಾ ಎಂಬ ಹೆಸರಿನ ಬೋಟ್​ ಇದಾಗಿದೆ. ಮಂಗಳೂರು ಮೀನುಗಾರಿಕಾ ಬಂದರಿನಿಂದ ಆಳ ಸಮುದ್ರದ ಮೀನುಗಾರಿಕೆಗೆ ತೆರಳಿದ್ದ ಈ ಬೋಟ್, ಮೀನು ತುಂಬಿಸಿಕೊಂಡು ವಾಪಸ್ ಬರುವಾಗ ಮಗುಚಿದೆ ಎಂದು ವರದಿಯಾಗಿದೆ.
ಸದ್ಯ ಆರು ಮಂದಿ ಮೀನುಗಾರರು ನಾಪತ್ತೆಯಾಗಿದ್ದು, ಸ್ಥಳಕ್ಕೆ ಕರಾವಳಿ ರಕ್ಷಣಾ ಪಡೆ ಆಗಮಿಸಿದ್ದು, ನಾಪತ್ತೆಯಾದವರ ಪತ್ತೆಗೆ ಕಾರ್ಯಾಚರಣೆ ನಡೆಸುತ್ತಿದೆ.
ಮನೆಯಲ್ಲೇ ಮಗಳ ಭಯೋತ್ಪಾದನಾ ಚಟುವಟಿಕೆ – ಜೆಎನ್​ಯು ವಿದ್ಯಾರ್ಥಿನಿ ಅಪ್ಪ ಬಿಚ್ಚಿಟ್ಟ ಕರಾಳ ಕಥೆ…

ಬಿಜೆಪಿ ನಾಯಕರಿಗೆ ವಂಚಿಸಲು ಯತ್ನಿಸಿ ಸಿಕ್ಕಿಬಿದ್ದ ಅಮಿತ್​ ಷಾ ‘ಸೋದರಳಿಯ’

ಡಿಸೆಂಬರ್​ನಲ್ಲಿ 8 ದಿನ ಕರ್ನಾಟಕದಲ್ಲಿ ಬ್ಯಾಂಕ್​ ರಜೆ- ಇಲ್ಲಿದೆ ವಿವರ
.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:5 × 4 =
Remember me
