ಮಂಗಳೂರು:ಇಂದು ಎಸ್​ಎಸ್​ಎಸ್​ಸಿ ಪರೀಕ್ಷೆ ರಾಜ್ಯದ ವಿವಿಧ ಕೇಂದ್ರಗಳಲ್ಲಿ ನಡೆದಿದೆ. ಆದರೆ ಪರೀಕ್ಷೆಗೂ ಮುನ್ನ ಮಂಗಳೂರಿನಲ್ಲಿ ನಡೆದ ಭಾರಿ ದುರಂತವೊಂದು ವಿದ್ಯಾರ್ಥಿಗಳು ಹಾಗೂ ಪಾಲಕರನ್ನು ಬೆಚ್ಚಿಬೀಳಿಸಿದೆ.
ಮಂಗಳೂರು ಹೊರವಲಯದ ಬಬ್ಬುಕಟ್ಟೆಯ ಖಾಸಗಿ ಕಾಲೇಜಿಯಲ್ಲಿ ಈ ಅನಾಹುತ ಸಂಭವಿಸಿದೆ. ಅದೇನೆಂದರೆ ಪರೀಕ್ಷೆ ಆರಂಭಕ್ಕೆ ಅರ್ಧ ಗಂಟೆ ಇದೆ ಎನ್ನುವಾಗ ಕೇಂದ್ರದ ಜೀವಶಾಸ್ತ್ರ ಪ್ರಯೋಗಾಲಯದಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಶಾರ್ಟ್​ ಸರ್ಕ್ಯೂಟ್​ನಿಂದ ಈ ಅನಾಹುತವಾಗಿದೆ. ಆದರೆ ಅದೃಷ್ಟವಶಾತ್​ ಯಾವುದೇ ಹಾನಿಯಾಗಿಲ್ಲ.
ಕಾಲೇಜಿನ ಬಯೋಲಾಜಿ ಲ್ಯಾಬ್​​ನಲ್ಲಿ ಶಾರ್ಟ್​ ಸರ್ಕ್ಯೂಟ್​ ಸಂಭವಿಸಿದ ತಕ್ಷಣ ಕಾಲೇಜಿನ ಕೋಣೆಯಲ್ಲಿ ದಟ್ಟ ಹೊಗೆ ಕಾಣಿಸಿಕೊಂಡಿದೆ. ಈ ವೇಳೆ ಎಚ್ಚೆತ್ತ ಸಿಬ್ಬಂದಿ ಪರೀಕ್ಷೆ ಬರೆಯುತ್ತಿದ್ದ 208 ವಿದ್ಯಾರ್ಥಿಗಳನ್ನು ಮೊದಲ ಮಹಡಿಗೆ ಕಳುಹಿಸಿಕೊಟ್ಟು ಅಲ್ಲಿ ಸರಾಗವಾಗಿ ಪರೀಕ್ಷೆ ಬರೆಯಲು ಅವಕಾಶ ಮಾಡಿಕೊಟ್ಟಿದ್ದಾರೆ.
ಅನಿರೀಕ್ಷಿತವಾಗಿ ನಡೆದ ಈ ಘಟನೆ ಕ್ಷಣಕಾಲ ಪರೀಕ್ಷಾ ಕೇಂದ್ರದಲ್ಲಿ ಗೊಂದಲವನ್ನು ಉಂಟು ಮಾಡಿತ್ತು. ಆದರೆ, ಇದರಿಂದ ಯಾವುದೇ ತೊಂದರೆಯಾಗಿಲ್ಲ. ವಿದ್ಯಾರ್ಥಿಗಳಿಗೆ ಆರಾಮವಾಗಿ ಪರೀಕ್ಷೆ ಬರೆಯಲು ವ್ಯವಸ್ಥೆಯನ್ನು ತಕ್ಷಣಕ್ಕೆ ನಡೆಸಲಾಗಿದೆ. ವಿದ್ಯಾರ್ಥಿಗಳು ಕೂಡ ನಿರಾತಂಕವಾಗಿ ಪರೀಕ್ಷೆ ಬರೆದಿದ್ದಾರೆ ಎಂದಿದ್ದಾರೆ.
ಬೆಂಗಳೂರಿನಲ್ಲೊಂದು ಶಾಕಿಂಗ್​ ಘಟನೆ: ಬ್ಯಾಂಕ್​ ಒಳಗೆ ನುಗ್ಗಿ ರೌಡಿಯ ಭೀಕರ ಹತ್ಯೆ!

ಪ್ರವಾಸೋದ್ಯಮದ ನಿಗಮದಿಂದ ದಿಢೀರ್ ಔಟ್​ ಆದ ನಟಿ ಶ್ರುತಿಗೆ ಸಿಕ್ಕಿತು ಮದ್ಯಪಾನ ಸಂಯಮ ಮಂಡಳಿ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:ten − 8 =
Remember me
