ಬೆಂಗಳೂರು:ವೃಕ್ಷಮಾತೆ ಸಾಲುಮರದ ತಿಮ್ಮಕ್ಕ ಅವರಿಗೆ ಪರಿಸರ ರಾಯಭಾರಿ ಗೌರವ ನೀಡುವ ಜತೆಗೆ ಕ್ಯಾಬಿನೆಟ್ ದರ್ಜೆಯ ಸ್ಥಾನಮಾನ ನೀಡಲಾಗುವುದು ಎಂದು‌ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಪ್ರಕಟಿಸಿದರು.
ಬೆಂಗಳೂರಿನ ಅಂಬೇಡ್ಕರ್ ಭವನದಲ್ಲಿ ನಡೆದ ಸಾಲುಮರದ ತಿಮ್ಮಕ್ಕನವರ 111ರ ಜನ್ಮದಿನದ ಸಂಭ್ರಮ ಹಾಗೂ ಸಾಲುಮರದ ತಿಮ್ಮಕ್ಕ ಗ್ರೀನರಿ ಅವಾರ್ಡ್ ಪ್ರದಾನ ಸಮಾರಂಭದಲ್ಲಿ ಅವರು ಮಾತನಾಡಿದರು. ಈ ಸಂದರ್ಭದಲ್ಲಿ ಬಂಗಾರದ ಕಡಗವನ್ನೂ ಮುಖ್ಯಮಂತ್ರಿಗಳು ನೀಡಿದರು.
ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ನಿವೇಶನದಲ್ಲಿ ಸರ್ಕಾರದಿಂದಲೇ ಮನೆ ನಿರ್ಮಾಣ ಮಾಡಿ ಸಾಲು ಮರದ ತಿಮ್ಮಕ್ಕ ಅವರಿಗೆ ಕೊಡುಗೆ ನೀಡುವುದಾಗಿ ಮುಖ್ಯಮಂತ್ರಿಗಳು ಹೇಳಿದ್ದಾರೆ. ಮಾತ್ರವಲ್ಲದೇ, ರಾಜ್ಯದ ಎಲ್ಲೇ ಆಗಲಿ ಪರಿಸರ ರಕ್ಷಣೆಯ ಪ್ರಚಾರ ಮಾಡಲು ಈ ಸ್ಥಾನಮಾನ ನೀಡಲಾಗಿದೆ. ಹೊರ ರಾಜ್ಯಕ್ಕೆ ತೆರಳಿದರೆ ಸರ್ಕಾರದಿಂದಲೇ ಖರ್ಚು ಭರಿಸಲಾಗುವುದು. ವಾರ್ತಾ ಇಲಾಖೆಯಿಂದ ಸಾಲುಮರದ ತಿಮ್ಮಕ್ಕ ಅವರ ವೆಬ್‌ಸೀರಿಸ್ ಮಾಡಲಾಗುವುದು. ಅವರಿಗೆ ಬೇಲೂರು ತಾಲ್ಲೂಕಿನಲ್ಲಿ ಹತ್ತು ಎಕರೆ ಭೂಮಿ ಮಂಜೂರು ಮಾಡಲಾಗುವುದು ಎಂದು ಸಿಎಂ ಹೇಳಿದರು.
ಬೇಲೂರು ಶಾಸಕ ಲಿಂಗೇಶ್ ಮಾತನಾಡಿ, ಸಾಲುಮರದ ತಿಮ್ಮಕ್ಕ ಅವರಿಗೆ ಲಭಿಸಿದ ಪ್ರಶಸ್ತಿಗಳು ಹಾಗೂ ಅವರ ಸಾಧನೆ ಬಿಂಬಿಸಲು ವಸ್ತು ಸಂಗ್ರಹಾಲಯ ‌ನಿರ್ಮಿಸಲು ಅನುದಾನ ಹಾಗೂ ಅವರ ‌ಗ್ರಾಮ ಬಳ್ಳೂರು ಅಭಿವೃದ್ಧಿಗೆ 2 ಕೋಟಿ‌ ಅನುದಾನ ನೀಡುವಂತೆ ಮನವಿ ಮಾಡಿದರು.
ಇವತ್ತು ವೃಕ್ಷಮಾತೆ ಸಾಲುಮರದ ತಿಮ್ಮಕ್ಕನವರ ಜನ್ಮದಿನಾಚರಣೆಗೆ ನಿಜಕ್ಕೂ ಅರ್ಥಪೂರ್ಣವಿದೆ. ನಾವೆಲ್ಲ ಹುಟ್ಟಿದಾಗ ಬಹಳ ಮುಗ್ಧತೆಯಿಂದ ಇರುತ್ತಿದ್ದೆವು. ದೊಡ್ಡವರಾದ ಮೇಲೂ ಮುಗ್ಧತೆ ಉಳಿಸಿಕೊಳ್ಳುವುದು ಕಷ್ಟ. ಆದರೆ ಸಾಲುಮರದ ತಿಮ್ಮಕ್ಕ ಅಜ್ಜಿಯ ಮೊಗದಲ್ಲಿ ಮಗುವಿನ ಮುಗ್ಧತೆ ಇದೆ ಎಂದು ಸಿಎಂ ಹೇಳಿದರು.
ರಿಲಯನ್ಸ್‌ನ ರಿಟೇಲ್‌ ವಿಭಾಗದ ಅಧ್ಯಕ್ಷೆಯಾಗಿ ಮುಖೇಶ್​ ಅಂಬಾನಿ ಪುತ್ರಿ ಇಶಾ? ಅವಳಿ ಮಕ್ಕಳಿಗೆ ಪಟ್ಟ!

ನೀವೇನೇ ಕೂಗಾಡಿದ್ರೂ ಡೋಂಟ್​ ಕೇರ್​ ಎಂದರು: ಅಗ್ನಿವೀರರಾಗಲು ಆರು ದಿನಗಳಲ್ಲಿ 1.83 ಲಕ್ಷ ಅರ್ಜಿ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:18 − two =
Remember me
