ಚಿತ್ರದುರ್ಗ:ಆಡಳಿತ ಪಕ್ಷಗಳ ದುರಾಡಳಿತ, ಭ್ರಷ್ಟಾಚಾರ, ಹಗರಣಗಳು ಹಾಗು ರಾಷ್ಟೀಯ ಪಕ್ಷಗಳ ಕಚ್ಚಾಟದ ಬಗ್ಗೆ ಬೇಸತ್ತಿದ್ದೇನೆ ಎಂದಿರುವ ಯುವಕನೋರ್ವ ತಮ್ಮ ಮದುವೆ ಆಮಂತ್ರಣ ಪತ್ರಿಕೆಯಲ್ಲಿ ಮುಂಬರುವ ಚುನಾವಣೆಯಲ್ಲಿ ನೀವು ಎಚ್.ಡಿ ಕುಮಾರಸ್ವಾಮಿ ಅವರಿಗೆ ನೀಡುವ ಮತವೇ ನನಗೆ ಉಡುಗೊರೆ ಎಂದು ಅಚ್ಚು ಹಾಕಿಸಿದ್ದಾರೆ.
ಚಿತ್ರದುರ್ಗ ಜಿಲ್ಲೆ ಚಳ್ಳಕೆರೆ ತಾಲೂಕಿನ ಪಿ.ಗೌರೀಪುರ ಗ್ರಾಮದ ಪುಟ್ಟಮ್ಮ ನಾಗರಾಜಪ್ಪ ದಂಪತಿಯ ಪುತ್ರ ಜಯಕುಮಾರ್ ಇಂತಹದ್ದೊಂದು ವಿಶೇಷ ಮದುವೆ ಆಮಂತ್ರಣ ಹಂಚುತ್ತಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಆಮಂತ್ರಣ ಪತ್ರಿಕೆ ವೈರಲ್ ಆಗುತ್ತಿದೆ.
ಮೇ 18 ರಂದು ನಡೆಯಲಿರುವ ತಮ್ಮ ವಿವಾಹ ಆಮಂತ್ರಣ ಪತ್ರಿಕೆಯಲ್ಲಿ ನವ ಕರ್ನಾಟಕ ನಿರ್ಮಾಣಕ್ಕಾಗಿ ಜೆಡಿಎಸ್ ಅಧಿಕಾರಕ್ಕೆ ಬರಬೇಕು ಎಂಬ ಹಂಬಲ ಹೊಂದಿರುವ ಮದುಮಗ ಜಯಕುಮಾರ್ ಸ್ನಾತಕೋತ್ತರ ಪಧವಿಧರರಾಗಿದ್ದು, ಮದುಮಗಳು ಕೂಡ ಸ್ನಾತಕೋತ್ತರ ಪದವೀಧರೆಯಾಗಿದ್ದಾರೆ.
ಈ ಹಿಂದೆ ಸಿಎಂ ಆಗಿ ಎಚ್.ಡಿ. ಕುಮಾರಸ್ವಾಮಿ ಅವರು ನೀಡಿರುವ ಜನಪರ ಆಡಳಿತವನ್ನು ಸ್ಮರಿಸಿಕೊಳ್ಳುತ್ತಾ, ಮತ್ತೊಮ್ಮೆ ಕುಮಾರಣ್ಣ ಮುಖ್ಯಮಂತ್ರಿ ಆಗಬೇಕು ಎಂಬ ಕನಸು ಹೊತ್ತಿದ್ದಾರೆ.
ನಮಗೆಲ್ಲಾ ಸಾಯಲು ಅವಕಾಶ ಕೊಡಿ ಎಂದ ಮುಸ್ಲಿಮರು: ದಯಾಮರಣಕ್ಕೆ ಕೋರಿ ಹೈಕೋರ್ಟ್‌ಗೆ ಅರ್ಜಿ

ಪ್ರಿಯತಮೆ ಜತೆ ಮದುವೆಯಾಗುವಾಗ್ಲೇ ಎಂಟ್ರಿ ಕೊಟ್ಟಳೊಬ್ಬ ಮಹಿಳೆ! ವಧು ಜತೆ ತೀರ್ಥಹಳ್ಳಿಯ ವರ ಎಸ್ಕೇಪ್‌

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:three × four =
Remember me
