ಬೆಂಗಳೂರು:ಮೇಕೆದಾಟು ಯೋಜನೆ ಜಾರಿ ವಿಚಾರವನ್ನು ಎರಡು ರಾಜ್ಯಗಳು ಪರಸ್ಪರ ಮಾತುಕತೆ ಮೂಲಕ ಸಮಸ್ಯೆ ಬಗೆಹರಿಸಿಕೊಳ್ಳುವುದು ಸೂಕ್ತ ಎಂದು ಕೇಂದ್ರ ಜಲ ಶಕ್ತಿ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಹೇಳಿದ್ದಾರೆ.
ಈ ವಿವಾದ ಸಿಡಬ್ಲ್ಯುಸಿ ಹಾಗೂ ಸುಪ್ರೀಂಕೋರ್ಟ್​ನಲ್ಲಿದೆ. ಈ ಹಿನ್ನೆಲೆಯಲ್ಲಿ ಇದರ ಬಗ್ಗೆ ಮಾತನಾಡುವುದು ಸೂಕ್ತವಲ್ಲ. ಎರಡು ರಾಜ್ಯಗಳು ಮಾತುಕತೆಗೆ ಆಸಕ್ತಿ ವ್ಯಕ್ತಪಡಿಸಿದರೆ ಕೇಂದ್ರ ಮಧ್ಯಪ್ರವೇಶಕ್ಕೆ ಸಿದ್ಧವಿದೆ ಎಂದು ಅವರು ಹೇಳಿದರು.
ಕೆನ್ – ಬೆತ್ವಾ ನದಿಗಳ ಜೋಡಣೆ ವಿಚಾರವಾಗಿ ಉತ್ತರ ಪ್ರದೇಶ ಹಾಗೂ ಮಧ್ಯ ಪ್ರದೇಶದ ನಡುವೆ ಸಮಸ್ಯೆ ಇತ್ತು. ಈ ಸಮಸ್ಯೆಯಿಂದ ದೀರ್ಘಾವಧಿ ನನೆಗುದಿಗೆ ಬಿದ್ದಿತ್ತು. ಉಭಯ ರಾಜ್ಯಗಳು ಮಾತುಕತೆ ಮೂಲಕ ಸಮಸ್ಯೆ ಬಗೆಹರಿಸಿಕೊಂಡಿತ್ತು. ಇದರಿಂದ ಬರ ಪೀಡಿತ ಬುಂದೇಲ್ ಖಂಡ ಪ್ರದೇಶದ ನೀರಿನ‌ ದಾಹ ತಣಿಸಲು ನದಿ‌ ಜೋಡಣೆ ನೆರವಾಯಿತು. ಇದೇ ಮಾದರಿಯನ್ನು ತಮಿಳುನಾಡು ಹಾಗೂ ಕರ್ನಾಟಕ ಅನುಸರಿಸರೆ ಸಮಸ್ಯೆ ಬಗೆಹರಿಸಬಹುದು ಎಂದು ಸಚಿವರು ಅಭಿಪ್ರಾಯ ಪಟ್ಟರು.
55 ವರ್ಷ ಕಾಂಗ್ರೆಸ್ ಅಧಿಕಾರದಲ್ಲಿ ಇತ್ತು‌. ಆದರೆ ಉತ್ತಮವಾಗಿ ಕೆಲಸ ಮಾಡಿದ್ದರೆ ಈ ಸಮಸ್ಯೆ ಉದ್ಭವವಾಗುತ್ತಿರಲಿಲ್ಲ. ಈ ಕಾರಣಕ್ಕಾಗಿ ಕಾಂಗ್ರೆಸ್ ಗೆ ಈ ವಿಚಾರವಾಗಿ ಹೋರಾಟ ಮಾಡುವ ನೈತಿಕತೆ‌ ಇಲ್ಲ. ಬಿಜೆಪಿಯಿಂದ ಮಾತ್ರ ಈ ಸಮಸ್ಯೆಗೆ ಪರಿಹಾರ ಸಾಧ್ಯ ಎಂದು ಅವರು ಹೇಳಿದರು.
VIDEO: ಯೂಕ್ರೇನ್​ನಿಂದ ತಪ್ಪಿಸಿಕೊಳ್ತಿರುವಾಗ ಗುಂಡು ಭುಜ ಹೊಕ್ಕಿತು, ಕಾಲು ಮುರಿದಿದೆ- ವಿದ್ಯಾರ್ಥಿಯ ವಿಡಿಯೋ ವೈರಲ್

ಮಗನನ್ನು ಕರೆತರಲು 1400 ಬೈಕ್​ ಓಡಿಸಿದ್ದ ಅಮ್ಮ ಮತ್ತೆ ಸುದ್ದಿಯಲ್ಲಿ! ಆಗ ಕರೊನಾ, ಈಗ ಯೂಕ್ರೇನ್​!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:fifteen − 12 =
Remember me
