ಬೆಂಗಳೂರು:ಪ್ರವಾಸೋದ್ಯಮ ಸಚಿವ ಆನಂದ್ ಸಿಂಗ್ ಅವರು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಜತೆಗೆ ಸೋಮವಾರ ಚರ್ಚಿಸಿದ್ದು, ರಾಜ್ಯ ರಾಜಕೀಯದಲ್ಲಿ ಕುತೂಹಲ ಹುಟ್ಟಿಸಿದೆ.
ಖಾಸಗಿ ಕಾರಿನಲ್ಲಿ ಸದಾಶಿವನಗರದ ಡಿಕೆಶಿ ನಿವಾಸದಲ್ಲಿ ಆನಂದ್ ಸಿಂಗ್ ಮಾತುಕತೆ ನಡೆಸಿರುವುದು ಚರ್ಚೆಗೆ ಗ್ರಾಸವಾಗಿದೆ. ಪ್ರವಾಸೋದ್ಯಮ ಇಲಾಖೆಗೆ ಸಂಬಂಧಿಸಿದ ವಿಷಯಗಳ ಬಗ್ಗೆ ಮಾತುಕತೆ ನಡೆಸಿದ್ದು, ರಾಜಕೀಯ ಅರ್ಥ ಕಲ್ಪಿಸಬೇಕಾಗಿಲ್ಲ ಎಂದು ಆನಂದ್ ಸಿಂಗ್ ಹೇಳಿಕೆ ನೀಡಿದ್ದಾರೆ.
ಇಲಾಖೆ ವಿಷಯ ಚರ್ಚಿಸುವುದಿದ್ದರೆ ಖಾಸಗಿ ಕಾರಿನಲ್ಲಿ ಬಂದಿದ್ದೇಕೆ ? ಎಂಬ ಪ್ರಶ್ನೆ ಜತೆಗೆ ಮತ್ತೆ ಕಾಂಗ್ರೆಸ್ ಗೆ ವಾಪಸ್ಸಾಗಲು ಬಯಸಿದ್ದಾರಾ ? ಎಂಬ ಸಂಶಯ ಮೂಡಿಸಿದೆ.ಖಾತೆ ಬಗ್ಗೆ ಅಸಮಾಧಾನಿತ ಸಿಂಗ್ ಅವರನ್ನು ಸಿಎಂ ಬಸವರಾಜ ಬೊಮ್ಮಾಯಿ‌, ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ, ಕಂದಾಯ ಸಚಿವ ಆರ್.ಅಶೋಕ್ ಮನವೊಲಿಸಿ ಸಮಾಧಾನ ಮಾಡಿದ್ದರು.
ಆನಂದ್ ಸಿಂಗ್ ಅಪೇಕ್ಷೆಯಂತೆ ವಿಜಯನಗರ ಜಿಲ್ಲೆ ಘೋಷಣೆಯಾಗಿ ಅಧಿಕೃತವಾಗಿ ಅಸ್ತಿತ್ವಕ್ಕೆ ಬಂದಿದೆ. ಆದರೆ ಉಸ್ತುವಾರಿ ಬದಲಾಗಿದ್ದಕ್ಕೆ ಬೇಸರಿಗೊಂಡಿದ್ದಾರೆ ಎಂಬ ಕಾರಣಕ್ಕೆ ಡಿಕೆಶಿ ಭೇಟಿಗೆ ರಾಜಕೀಯ ತಳುಕು ಹಾಕಲಾಗುತ್ತಿದೆ.
ಡ್ಯಾಡಿ… ಕೊನೆಯದಾಗಿ ಮುಖ ನೋಡಿಬಿಡಿ, ವಿಡಿಯೋ ಕಾಲ್‌ ಮಾಡಿ 6ನೇ ಮಹಡಿಯಿಂದ ಜಿಗಿದ ಖ್ಯಾತ ಮಾಡೆಲ್‌!

ಕಾಶ್ಮೀರ ಪಾಕ್‌ಗೆ, ಅರುಣಾಚಲಪ್ರದೇಶ ಚೀನಾಗೆ! ವಿಶ್ವ ಆರೋಗ್ಯ ಸಂಸ್ಥೆ ವೆಬ್‌ಸೈಟ್‌ನಲ್ಲಿ ಎಡವಟ್ಟು? ಪ್ರಧಾನಿಗೆ ಪತ್ರ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:two × 1 =
Remember me
