ಬೆಂಗಳೂರು:ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಶಶಿಕಲಾ ಜೊಲ್ಲೆ ಅವರಿಗೆ ಕರೊನಾ ಸೋಂಕು ಕಾಣಿಸಿಕೊಂಡಿದೆ.
ಈ ಕುರಿತು ಟ್ವೀಟ್ ಮಾಡಿರುವ ಸಚಿವೆ, ನನಗೆ ಕೋವಿಡ್ ಪಾಸಿಟಿವ್ ಧೃಡಪಟ್ಟಿದ್ದು, ವೈದ್ಯರ ಸಲಹೆಯ ಮೇರೆಗೆ 14 ದಿನಗಳ ಕಾಲ ಮನೆಯಲ್ಲಿಯೇ ಕ್ವಾರಂಟೈನ್‌ ಆಗಲಿದ್ದೇನೆ. ನನ್ನ ಪ್ರಾಥಮಿಕ ಹಾಗೂ ದ್ವಿತೀಯ ಸಂಪರ್ಕದಲ್ಲಿದ್ದವರು, ಕೊವಿಡ್ ಪರೀಕ್ಷೆ ಮಾಡಿಸಿಕೊಂಡು ಕ್ವಾರಂಟೈನ್‌ ಆಗಬೇಕಾಗಿ ವಿನಂತಿ ಎಂದು ಮನವಿ ಮಾಡಿಕೊಂಡಿದ್ದಾರೆ.
ನನಗೆ ಕೊವಿಡ್ ಪಾಸಿಟಿವ್ ಧೃಡಪಟ್ಟಿದ್ದು , ವೈದ್ಯರ ಸಲಹೆಯ ಮೇರೆಗೆ 14 ದಿನಗಳ ಕಾಲ ಮನೆಯಲ್ಲಿಯೇ ಕ್ವಾರೆಂಟೇನ್ ಆಗಲಿದ್ದೇನೆ.
ನನ್ನ ಪ್ರಾಥಮಿಕ ಹಾಗೂ ದ್ವಿತೀಯ ಸಂಪರ್ಕದಲ್ಲಿದ್ದವರು, ಕೊವಿಡ್ ಪರೀಕ್ಷೆ ಮಾಡಿಸಿಕೊಂಡು ಕ್ವಾರೆಂಟೇನ್ ಆಗಬೇಕಾಗಿ ವಿನಂತಿ.@Karnataka_DIPR@DHFWKA
— Shashikala Jolle (@ShashikalaJolle)August 31, 2020

ಕಳೆದ ಮೇ ತಿಂಗಳಿನಲ್ಲಿ ಶಶಿಕಲಾ ಅವರು ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸಿಕೊಳ್ಳಲು ತಾವು ಅನೇಕ ರೀತಿಯ ಕ್ರಮಗಳನ್ನು ತೆಗೆದುಕೊಳ್ಳುತ್ತಿರುವುದಾಗಿ ಹೇಳಿದ್ದರು. ಬೆಳಗ್ಗೆ ಎದ್ದ ಕೂಡಲೇ ಬಿಸಿನೀರಿಗೆ ನಿಂಬೆಹಣ್ಣು, ಅರಿಶಿಣ ಮಿಶ್ರಣ ಮಾಡಿಕೊಂಡು ಕುಡಿಯುತ್ತಿರುವುದಾಗಿ ಹೇಳುವ ಮೂಲಕ ಕರೊನಾದ ಭೀಕರತೆ ವಿರುದ್ಧ ಹೋರಾಡಿ ರೋಗ ನಿರೋಧಕ ಶಕ್ತಿ ಹೆಚ್ಚಿಸಿಕೊಂಡಿದ್ದಾರೆ.
ಇದೀಗ ಕರೊನಾದ ಆರಂಭಿಕ ಸಾಮಾನ್ಯ ಲಕ್ಷಣಗಳಷ್ಟೇ ಕಾಣಿಸಿಕೊಂಡಿದ್ದು, ತಮ್ಮ ಆರೋಗ್ಯ ಸ್ಥಿತಿ ಚೆನ್ನಾಗಿರುವುದಾಗಿ ಹೇಳಿದ್ದಾರೆ.
ಸಚಿವೆ ಕೊರೊನಾ ಬಂದಿರುವ ಸುದ್ದಿ ತಿಳಿದ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರು ಬೇಗ ಗುಣಮುರಾಗುವಂತೆ ಹಾರೈಸಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಸಿಎಂ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಶಶಿಕಲಾ ಜೊಲ್ಲೆ ಅವರು ಶೀಘ್ರದಲ್ಲಿ ಕೊರೊನಾ ಸೋಂಕಿನಿಂದ ಗುಣಮುಖರಾಗಿ ಕರ್ತವ್ಯಕ್ಕೆ ಮರಳಲಿ ಎಂದು ಹಾರೈಸುತ್ತೇನೆ ಎಂದಿದ್ದಾರೆ.
ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಶ್ರೀಮತಿ ಶಶಿಕಲಾ ಜೊಲ್ಲೆ ಅವರು ಶೀಘ್ರದಲ್ಲಿ ಕೊರೋನಾ ಸೋಂಕಿನಿಂದ ಗುಣಮುಖರಾಗಿ ಕರ್ತವ್ಯಕ್ಕೆ ಮರಳಲಿ ಎಂದು ಹಾರೈಸುತ್ತೇನೆ.@ShashikalaJollehttps://t.co/iz2n0eEWvL
— B.S.Yediyurappa (@BSYBJP)September 1, 2020

ಎಟಿಎಂ ಯಂತ್ರಕ್ಕೆ ದುಡ್ಡು ಹಾಕಿದ್ರೆ ಇನ್ನು ಸಿಗಲಿದೆ ಅಕ್ಕಿ: ಏನಿದು ಯೋಜನೆ?

ನಸುಕಿನಲ್ಲಿಯೇ ಹಾಸನದಲ್ಲಿ ಗುಂಡಿನ ಸದ್ದು: ಜೋಡಿಕೊಲೆ ಆರೋಪಿ ಅರೆಸ್ಟ್‌

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:11 + 6 =
Remember me
