ಮಂಗಳೂರು:ಮಂಗಳೂರಿನ ಕಾಲೇಜೊಂದರ ಹಾಸ್ಟೆಲ್‌ನಿಂದ ಪರಾರಿಯಾಗಿದ್ದ ಮೂವರು ವಿದ್ಯಾರ್ಥಿನಿಯರು ಕೊನೆಗೂ ಸಿಕ್ಕಿದ್ದಾರೆ. ಹಲವು ದಿನಗಳಿಂದ ಪೊಲೀಸರು ಹಾಗೂ ಪಾಲಕರ ನಿದ್ದೆಗೆಡಿಸಿದ್ದ ಈ ಪ್ರಕರಣ ಸುಖಾಂತ್ಯಗೊಂಡಿದೆ. ಈ ಮೂವರು ವಿದ್ಯಾರ್ಥಿನಿಯರು ಚೆನೈನಲ್ಲಿ ಪತ್ತೆಯಾಗಿದ್ದಾರೆ.
ನಗರದ ಪ್ರತಿಷ್ಠಿತ ಖಾಸಗಿ ಕಾಲೇಜಿನ ವಿದ್ಯಾರ್ಥಿನಿಯರಾದ ಇವರು, ಸೆ. 21ರಂದು  ಹಾಸ್ಟೆಲ್ ಕಿಟಕಿಯ ರಾಡ್ ಮುರಿದು ಪರಾರಿಯಾಗಿದ್ದರು. ‘ನಾವು ಹೋಗುತ್ತಿದ್ದೇವೆ, ಕ್ಷಮಿಸಿ’ ಎಂದು ಪತ್ರ ಬರೆದಿಟ್ಟು ಹಾಸ್ಟೆಲ್‍ನ ಕಿಟಕಿಯ ರಾಡ್ ಮುರಿದು ಪರಾರಿಯಾಗಿದ್ದರು. ಇದು ಹಾಸ್ಟೆಲ್​, ಕಾಲೇಜಿನ ಸಿಬ್ಬಂದಿಗೂ ಆತಂಕವನ್ನುಂಟು ಮಾಡಿತು. ಸಿಸಿಟಿವಿಯಲ್ಲಿ ವಿದ್ಯಾರ್ಥಿನಿಯರು ಗಂಟುಮೂಟೆ ಕಟ್ಟಿಕೊಂಡು ಹೋಗುವ ದೃಶ್ಯ ಸೆರೆಯಾಗಿತ್ತು.
ಚೆನ್ನೈನಲ್ಲಿ ಪತ್ತೆಯಾದ ಮೂವರು ವಿದ್ಯಾರ್ಥಿನಿಯರನ್ನು ಕುಡ್ಲ ಪೊಲೀಸರು ಮಂಗಳೂರಿಗೆ ಕರೆತಂದಿದ್ದಾರೆ. ವಿದ್ಯಾರ್ಥಿನಿಯರ ತಂಡ ಮಂಗಳೂರಿನಿಂದ ರೈಲಿನ ಮೂಲಕ ಕೊಯಮತ್ತೂರು ತೆರಳಿದ್ದರು. ಕೊಯಮತ್ತೂರಿನಿಂದ ಬಸ್ ಮೂಲಕ ಪಾಂಡಿಚೇರಿಗೆ ಪ್ರಯಾಣ ಬೆಳಸಿ, ಮತ್ತೆ ಪಾಂಡಿಚೇರಿಯಿಂದ ವಾಪಸ್ ಚೆನೈಗೆ ಬಂದಿದ್ದರು. ದೂರದ ಊರು ಸುತ್ತಾಡಿ ಮರಳಿ ಮನೆ ಸೇರಲು ವಿದ್ಯಾರ್ಥಿನಿಯರು ನಿರ್ಧರಿಸಿದ್ದರು ಎಂಬ ವಿಷಯ ಇದೀಗ ಬಯಲಾಗಿದೆ.
ಪ್ರಾಥಮಿಕ ಮಾಹಿತಿ ಪ್ರಕಾರ ಶೈಕ್ಷಣಿಕ ಒತ್ತಡದಿಂದ ತಾವು ಪರಾರಿಯಾಗಿರುವುದಾಗಿ ಹೇಳಿದ್ದಾರೆ ಎಂಬ ಮಾಹಿತಿ ಸಿಕ್ಕಿದೆ.(ದಿಗ್ವಿಜಯ ನ್ಯೂಸ್​)
VIDEO: ಯುವತಿಯ ಹತ್ಯೆ; ಬಿಜೆಪಿ ನಾಯಕನ ಪುತ್ರನ ರೆಸಾರ್ಟ್​ ಮೇಲೆ ಬುಲ್ಡೋಜರ್​- ನ್ಯಾಯ ಎಲ್ಲರಿಗೂ ಒಂದೇ ಎಂದ ಸಿಎಂ
ಒಂದೂವರೆ ವರ್ಷ ಮಗನ ಶವದೊಂದಿಗೆ ಅಪ್ಪ-ಅಮ್ಮ: ಗಂಗಾಜಲ, ಆಕ್ಸಿಜನ್​ ನೀಡುತ್ತಿದ್ದ ಕುಟುಂಬಸ್ಥರು!
VIDEO: ಆಮೀರ್​ ಪುತ್ರಿ ಐರಾ ಖಾನ್​ ಎಂಗೇಜ್​ಮೆಂಟ್​: 2 ವರ್ಷಗಳ ಡೇಟಿಂಗ್​ ಬಳಿಕ ಸಿನಿಮಾ ಸ್ಟೈಲ್​ನಲ್ಲಿ ಪ್ರಪೋಸ್​!
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
ಅನೇಕ ಜನರು ತಮ್ಮ ಭವಿಷ್ಯವನ್ನು ತಿಳಿದುಕೊಳ್ಳಲು ತುಂಬಾ ಆಸಕ್ತಿ ಹೊಂದಿರುತ್ತಾರೆ. ಮುಂದಿನ ದಿನಗಳಲ್ಲಿ ನಮ್ಮ ಜೀವನದಲ್ಲಿ…
Sign in to your account
Please enter an answer in digits:10 + ten =
Remember me
