ಬೆಂಗಳೂರು:ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರದ ಸಚಿವರು ವಿಧಾನಸೌಧಕ್ಕೆ ಬರುತ್ತಿಲ್ಲ. ಶಾಸಕರ ಭೇಟಿಗೂ ಸಿಗುತ್ತಿಲ್ಲ. ಸಚಿವರನ್ನು ಭೇಟಿಯಾಗುವುದೇ ದುಸ್ತರವಾಗಿದೆ ಎಂದು ಮೂಡಿಗೆರೆ ಶಾಸಕ ಎಂ.ಪಿ.ಕುಮಾರಸ್ವಾಮಿ ತಮ್ಮ ಅಸಮಾಧಾನವನ್ನು ಹೊರಹಾಕಿದ್ದಾರೆ.
ಬೆಂಗಳೂರಿನಲ್ಲಿ ತಮ್ಮನ್ನು ಭೇಟಿಯಾದ ಸುದ್ದಿಗಾರರ ಜತೆ ಮಾತನಾಡಿದ ಅವರು, ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ವಾರಕ್ಕೆ ಎರಡು ದಿನ ವಿಧಾನಸೌಧಕ್ಕೆ ಬಂದು ಶಾಸಕರನ್ನು ಭೇಟಿಯಾಗುತ್ತಾರೆ. ಆದರೆ ಸಚಿವರನ್ನು ಭೇಟಿಯಾಗುವುದೆ ದುಸ್ತರವಾಗಿದೆ. ಈ ಹಿಂದೆ ತಮ್ಮ ಸಮಸ್ಯೆಗಳ ನಿವಾರಣೆಗೆ ಸಚಿವರ ಸಭೆಯನ್ನು ಮುಖ್ಯಮಂತ್ರಿಗಳು ನಡೆಸಿ ಪರಿಹರಿಸಿದ್ದರು. ಶೇ 70ರಷ್ಟು ಭಾಗ ಸಚಿವರು ವಿಧಾನ ಸೌಧಕ್ಕೆ ಭೇಟಿ ನೀಡಿ ಶಾಸಕರ ಸಮಸ್ಯೆಗಳನ್ನು ಅಲಿಸುತ್ತಿಲ್ಲ. ನಮ್ಮದೇ ಈ ರೀತಿಯ ಸಮಸ್ಯೆಯಾದರೆ ಪಕ್ಷ ವನ್ನು ಬೇರು ಮಟ್ಟದಲ್ಲಿ ಬೆಳಸಿದ, ಅಧಿಕಾರಕ್ಕೆ ತರುವಲ್ಲಿ ಶ್ರಮಿಸಿದ ಕಾರ್ಯಕರ್ತರ ಗತಿಯೇನು ಎಂದು ಪ್ರಶ್ನಿಸಿದ್ದಾರೆ.
ಅಸಮರ್ಥ ಸಚಿವರನ್ನು ಕೂಡಲೇ ಬದಲಾಯಿಸಬೇಕು ಎಂದು ಬಿಜೆಪಿ ಶಾಸಕ ಎಂ.ಪಿ.ಕುಮಾರಸ್ವಾಮಿ ಅವರು ಆಗ್ರಹಿಸಿದ್ದಾರೆ.
ರಾಜೀನಾಮೆ ಏನಿದ್ರೂ ಮುಂಬೈನಲ್ಲೆ, ಸುತ್ತೂರಲ್ಲಿ ಅಲ್ಲ… ಸರ್ಕಾರ ತಂದವ ನಾನು ಮಂತ್ರಿಸ್ಥಾನ ಕೇಳ್ತೀನಾ?

ಮಟನ್‌ ಊಟ ಹಾಕಿಸಿಲ್ಲವೆಂದು ಮದುಮಗಳ ಬದಲು ಬೇರೊಬ್ಬಳಿಗೆ ತಾಳಿ ಕಟ್ಟಿದ ವರಮಹಾಶಯ…

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:9 + six =
Remember me
