ಬೆಂಗಳೂರು:ಮಾಜಿ ಶಾಸಕ ಐವನ್‌ ಡಿಸೋಜಾ ಅವರಿಗೆ ಕರೊನಾ ಸೋಂಕು ತಗುಲಿದೆ. ಈ ಹಿನ್ನೆಲೆಯಲ್ಲಿ ಅವರ ಸಂಪರ್ಕಕ್ಕೆ ಬಂದಿರುವ ಶಾಸಕ ಯು.ಟಿ. ಖಾದರ್‌ ಸ್ವಯಂ ಕ್ವಾರಂಟೈನ್‌ಗೆ ಒಳಗಾಗಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಕಾದರ್‌, ‘ಮಾಜಿ ಶಾಸಕ ಐವನ್ ಡಿಸೋಜ ಹಾಗೂ ಲಕ್ಷಾಂತರ ಮಂದಿ ಕೋವಿಡ್ ಸೋಂಕಿತರಾಗಿರಾಗಿದ್ದಾರೆ. ಇವರೆಲ್ಲರೂ ಶೀಘ್ರದಲ್ಲೇ ಗುಣಮುಖರಾಗಲಿ ಎಂದು ದೇವರಲ್ಲಿ ಪ್ರಾರ್ಥಿಸುತ್ತೇನೆ. ಕೆಲ ದಿನಗಳಿಂದ ಐವನ್ ಡಿಸೋಜ ಅವರ ಜತೆ ಪ್ರಾಥಮಿಕ‌ ಸಂಪರ್ಕದಲ್ಲಿದ್ದ ಕಾರಣ ನಾನು ಕೆಲ‌ವು ದಿನಗಳ ಕಾಲ ಸ್ವಯಂ‌ ನಿರ್ಬಂಧ ಹಾಕಿಕೊಂಡಿದ್ದೇನೆ’ ಎಂದು ಹೇಳಿದ್ದಾರೆ.
ಸದ್ಯ ತಾವು ಕ್ವಾರಂಟೈನ್‌ಗೆ ಒಳಗಾಗಿರುವ ಹಿನ್ನೆಲೆಯಲ್ಲಿ, ಯಾರನ್ನೂ ಭೇಟಿಯಾಗಲು ಸಾಧ್ಯವಿಲ್ಲ ಎಂದು ಅವರು ಹೇಳಿದ್ದಾರೆ. ಇಂದು ನಿಗದಿಯಾಗಿದ್ದ ಜನಸಾಮಾನ್ಯರ ಭೇಟಿ, ಕ್ಷೇತ್ರದ ಅಭಿವೃದ್ದಿ ಬಗ್ಗೆ ಜಿಲ್ಲಾಧಿಕಾರಿಗಳ ಜತೆಗಿನ ಸಭೆ, ಕ್ಷೇತ್ರದಲ್ಲಿ‌ ನಿಗದಿಯಾಗಿದ್ದ ವಿವಿಧ ಕಾರ್ಯಕ್ರಮಗಳು ಮುಂದೂಡಲ್ಪಟ್ಟಿದ್ದೆ. ಜನ ಸಾಮಾನ್ಯರ ಸೇವೆಗೆ ದೂರವಾಣಿ ಮೂಲಕ‌ ಲಭ್ಯವಿದ್ದು, ಅಗತ್ಯವಿದ್ದಲ್ಲಿ ನೇರವಾಗಿ ದೂರವಾಣಿ ಮೂಲಕ ನನ್ನನ್ನು ಎಂದಿನಂತೆ ಸಂಪರ್ಕಿಸಬಹುದಾಗಿದೆ ಎಂದು ಟ್ವೀಟರ್‌ನಲ್ಲಿ ಅವರು ತಿಳಿಸಿದ್ದಾರೆ.
ಇದನ್ನೂ ಓದಿ:ಗ್ರಾಪಂಗಳಲ್ಲಿ ಕರೊನಾ ಸಹಾಯವಾಣಿ; ಗ್ರಾಪಂ ಪ್ರಗತಿ ಪರಿಶೀಲನಾ ಸಭೆಯಲ್ಲಿ ಜಿಪಂ ಸಿಇಒ ಎನ್.ಎಂ.ನಾಗರಾಜ ಸೂಚನೆ
ಐವನ್ ಡಿಸೋಜ ಜತೆಗೆ ಪ್ರಾಥಮಿಕ ಸಂಪರ್ಕಿತದಲ್ಲಿದ್ದವರು ಕೆಮ್ಮು ಜ್ವರ ಮುಂತಾದ ಲಕ್ಷಣ ಕಂಡು ಬಂದಲ್ಲಿ ತಕ್ಷಣ ಪರೀಕ್ಷೆಗೆ ಒಳಗಾಗುವಂತೆ ಮನವಿ ಮಾಡುವಂತೆಯೂ ಖಾದರ್‌ ಕೋರಿಕೊಂಡಿದ್ದಾರೆ.
ಮಾಜಿ ಶಾಸಕ ಐವನ್ ಡಿಸೋಜಾ ಹಾಗೂ ಲಕ್ಷಾಂತರ ಮಂದಿ ಕೋವಿಡ್ ಸೋಂಕಿತರಾಗಿರಾಗಿದ್ದಾರೆ. ಇವರೆಲ್ಲರೂ ಶೀಘ್ರದಲ್ಲೇ ಗುಣಮುಖರಾಗಲಿ ಎಂದು ದೇವರಲ್ಲಿ ಪ್ರಾರ್ಥಿಸುತ್ತೇನೆ.ಕೆಲ ದಿನಗಳಿಂದ ಐವನ್ ಡಿಸೋಜಾ ಅವರ ಜೊತೆ ಪ್ರಾಥಮಿಕ‌ ಸಂಪರ್ಕದಲ್ಲಿದ್ದ ಕಾರಣ ನಾನು ಕೆಲ‌ವು ದಿನಗಳ ಕಾಲ ಸ್ವಯಂ‌ ನಿರ್ಬಂಧ ಹಾಕಿಕೊಂಡಿದ್ದೇನೆ. (1)
— UT Khadér (@utkhader)August 2, 2020

ಹೀಗಾಗಿ ಇಂದು ನಿಗದಿಯಾಗಿದ್ದ ಜನ ಸಮಾನ್ಯರ ಭೇಟಿ, ಕ್ಷೇತ್ರದ ಅಭಿವೃದ್ದಿ ಬಗ್ಗೆ ಜಿಲ್ಲಾಧಿಕಾರಿಗಳ ಜೊತೆಗಿನ ಸಭೆ, ಕ್ಷೇತ್ರದಲ್ಲಿ‌ ನಿಗದಿಯಾಗಿದ್ದ ವಿವಿಧ ಕಾರ್ಯಕ್ರಮಗಳು ಮುಂದೂಡಲ್ಪಟ್ಟಿದ್ದೆ.ಜನ ಸಾಮಾನ್ಯರ ಸೇವೆಗೆ ದೂರವಾಣಿ ಮೂಲಕ‌ ಲಭ್ಯವಿದ್ದು ಅಗತ್ಯವಿದ್ದಲ್ಲಿ ನೇರವಾಗಿ ದೂರವಾಣಿ ಮೂಲಕ ನನ್ನನ್ನ ಎಂದಿನಂತೆ ಸಂಪರ್ಕಿಸಬಹುದಾಗಿದೆ.(2)
— UT Khadér (@utkhader)August 2, 2020

ಇದೇ ವೇಳೆ ಐವನ್ ಡಿಸೋಜಾ ಜೊತೆಗೆ ಪ್ರಾಥಮಿಕ ಸಂಪರ್ಕಿತದಲ್ಲಿದ್ದವರು ಕೆಮ್ಮು ಜ್ವರ ಮುಂತಾದ ಲಕ್ಷಣ ಕಂಡು ಬಂದಲ್ಲಿ ತಕ್ಷಣ ಪರೀಕ್ಷೆಗೆ ಒಳಗಾಗುವಂತೆ ಮನವಿ ಮಾಡುತ್ತೇನೆ.(3)
— UT Khadér (@utkhader)August 2, 2020

ರಾಮಭಂಟನಿಗಾಗಿ ತಯಾರಾಯ್ತು ಏಳು ಅಡಿಯ ರಾಖಿ- ವಿಶೇಷತೆ ಏನು ಗೊತ್ತಾ?

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:nine + fourteen =
Remember me
