ಬೆಂಗಳೂರು:ಸಮಾಜದಲ್ಲಿ ಆತಂಕ ಸೃಷ್ಟಿಸಿ ಕೋಮುಸೌಹಾರ್ದತೆಗೆ ಧಕ್ಕೆ ಸಮಾಜಘಾತುಕ ಶಕ್ತಿಗಳ ವಿರುದ್ಧ ಎನ್‍ಕೌಂಟರ್ ಸರಿಯಾದ ಕ್ರಮ ಎಂದು ಮುಖ್ಯಮಂತ್ರಿ ರಾಜಕೀಯ ಕಾರ್ಯದರ್ಶಿ ಎಂ.ಪಿ.ರೇಣುಕಾಚಾರ್ಯ ಹೇಳಿದರು.
ಅಧಿಕೃತ ನಿವಾಸದಲ್ಲಿ ಮಂಗಳವಾರ ಕರೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಇತ್ತೀಚೆಗೆ ರಾಜ್ಯದಲ್ಲಿ ಕೆಲವು ಮತೀಯ ಶಕ್ತಿಗಳು ಹಿಂದೂ ಯುವಕರನ್ನು ಗುರಿಯಾಗಿಟ್ಟುಕೊಂಡು ಕಗ್ಗೊಲೆ ಮಾಡುವಂತಹ ಹೀನ ಕೃತ್ಯ ನಡೆಸುತ್ತಿದ್ದಾರೆ. ಇದರಲ್ಲಿ ಕೆಲವು ಅಂತಾರಾಷ್ಟ್ರೀಯ ಭಯೋತ್ಪಾದನೆ ಸಂಘಟನೆಗಳ ಕೈವಾಡವಿದೆ. ಯಾರೇ ಆಗಿದ್ದರೂ ಸರ್ಕಾರ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದರು. ಎಲ್ಲ ಮುಸ್ಲಿಮರು ಭಯೋತ್ಪಾದಕರಲ್ಲ. ಹರ್ಷ‌ ಹತ್ಯೆ ಘಟನೆಗೆ ಸಂಬಂಧಿಸಿದಂತೆ ನಾನು ಮುಸ್ಲಿಮರ ಬಗ್ಗೆ ಮಾತನಾಡುವುದಿಲ್ಲ. ನಾವು ಮೃದು ಧೋರಣೆ ತಳೆದಿದ್ದೇವೆ ಎಂದ ಮಾತ್ರಕ್ಕೆ ತಾಳ್ಮೆ ಪರೀಕ್ಷಿಸಬೇಡಿ ಎಂದು ಎಚ್ಚರಿಸಿದರು.
ಶಿವಮೊಗ್ಗದಲ್ಲಿ ಬಜರಂಗದಳದ ಕಾರ್ಯಕರ್ತನ ಬರ್ಭರ ಹತ್ಯೆಯ ಹಿಂದೆ ಕೆಲವು ಸಂಘಟನೆಗಳ ಕೈವಾಡ ಇದೆ. ಇದನ್ನು ನಾನು ತೀವ್ರವಾಗಿ ಖಂಡಿಸುತ್ತದೆ. ಇನ್ಮುಂದೆ ಇಂತಹ ಘಟನೆ ಮರುಕಳಿಸಬಾರದು.
ರಾಜ್ಯದಲ್ಲಿ ಮತ್ತು ದೇಶದಲ್ಲಿ ನಮ್ಮದೇ ಸರ್ಕಾರವಿದೆ. ತಕ್ಷಣವೇ ಈ ಪ್ರಕರಣದ ತನಿಖೆಯನ್ನು ಎನ್‍ಐಎಗೆ ವಹಿಸಬೇಕು ಎಂದು ಒತ್ತಾಯಿಸಿದರು.
ಇದರ ಹಿಂದೆ ಕಾಂಗ್ರೆಸ್ ಕೈವಾಡವೂ ಇದೆ ಎಂದು ಆರೋಪಿಸಿದ ಅವರು, ಸಚಿವ ಈಶ್ವರಪ್ಪನವರ ವಜಾಕ್ಕೆ ಆಗ್ರಹಿಸಿ ಕಾಂಗ್ರೆಸ್‍ನವರು ಕಲಾಪ ನಡೆಸಲು ಬಿಡದೆ ಅಡ್ಡಿಪಡಿಸುತ್ತಿದ್ದಾರೆ. ಯಾವ ಪುರುಷಾರ್ಥಕ್ಕೆ ನೀವು ಧರಣಿ ಮಾಡುತ್ತೀದ್ದೀರಿ? ಎಂದು ಪ್ರಶ್ನಿಸಿದ್ದಾರೆ.
ಸರ್ಕಾರದ ವೈಫಲ್ಯದಿಂದ ಘಟನೆ ಆಗಿದೆ ಎಂದು ಮಾಜಿ ಸಿಎಂ ಕುಮಾರಸ್ವಾಮಿ ನೀಡಿರುವ ಹೇಳಿಕೆಗೆ ಪ್ರತಿಕ್ರಿಯಿಸಿದ ರೇಣುಕಾಚಾರ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಮಾಜಿ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಮತ್ತು ಕುಮಾರಸ್ವಾಮಿ ಅವರ ಪ್ರಚೋದನಕಾರಿ ಹೇಳಿಕೆಗಳು ಘಟನೆಗೆ ಕಾರಣವಾಗಿದೆ ಎಂದು ಪ್ರತ್ಯಾರೋಪಿಸಿದರು.
ರಾಜ್ಯದಲ್ಲಿ ಇಂತಹ ಸಂದಿಗ್ಧ ಪರಿಸ್ಥಿತಿ ಉಂಟಾಗಿದೆ. ಇಂಥ ಸಂದರ್ಭದಲ್ಲಿ ಅವರುಗಳು ಸರ್ಕಾರದ ಜೊತೆ ನಿಲ್ಲಬೇಕಿತ್ತು. ಬದಲಾಗಿ ಇಂತಹ ಕೃತ್ಯಗಳಿಗೆ ಎಡೆ ಮಾಡಿಕೊಟ್ಟಿದ್ದಾರೆ. ಡಿ.ಕೆ.ಶಿವಕುಮಾರ್ ಹಾಗೂ ಕಾಂಗ್ರೆಸ್ ಆತ್ಮಾವಲೋಕನ ಮಾಡಿಕೊಳ್ಳಲಿ ಎಂದು ಹೇಳಿದರು.
ಈಶ್ವರಪ್ಪ ಒಬ್ಬ ಅಪ್ಪಟ ದೇಶಭಕ್ತ. ದೇಶದ್ರೋಹಿಗಳಿಂದ ಈ ಬರ್ಬರ ಹತ್ಯೆ ಆಗಿದೆ. ಪೂರ್ವ ತನಿಖೆ ಆದ ಮೇಲೆ ಎಲ್ಲವೂ ಹೊರಬರುತ್ತದೆ. ಮತ್ತೆ ಇಂತಹ ಘಟನೆಗಳು ಮರುಕಳಿಸಿದರೆ ನಾವು ಬೀದಿಗಿಳಿದು ಪ್ರತಿಭಟನೆ ಮಾಡುತ್ತೇವೆ ಎಂದ ಹೇಳಿದರು.
ಗುರುವಾರ ನಾನು ಕೂಡ ಸ್ಥಳಕ್ಕೆ ಭೇಟಿ ಕೊಡುತ್ತೇನೆ. ನನಗೆ ಶಾಸಕ ಸ್ಥಾನ ಮುಖ್ಯ ಅಲ್ಲ ಹಿಂದುತ್ವ ಮುಖ್ಯವೆಂದು ರೇಣುಕಾಚಾರ್ಯ ಹೇಳಿದರು.
ವಿಭಿನ್ನ ಪ್ರೇಮ್​ ಕಹಾನಿ! 80 ವರ್ಷದ ಅಜ್ಜ, 84ರ ಅಜ್ಜಿಯ ಜತೆ ಓಡಿಹೋಗಿ ಸಿಕ್ಕಬಿದ್ದ… ನಂತರ ಆದದ್ದು ದುರಂತ

ಲೈಂಗಿಕ ದೌರ್ಜನ್ಯ ಎಸಗಿದರೆಂದು ಸ್ವಾಮೀಜಿಯ ಮರ್ಮಾಂಗ ಕತ್ತರಿಸಿದಳು: ಆದರೆ ನಡೆದದ್ದೇ ಬೇರೆ…!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:seventeen + fifteen =
Remember me
