ಬೆಂಗಳೂರು:ಮಾಜಿ ಸಚಿವ, ವಿಧಾನ ಪರಿಷತ್‌ನ ಮಾಜಿ ಸದಸ್ಯ ಪ್ರೊ. ಮುಮ್ತಾಜ್ ಅಲಿ ಖಾನ್ ಇಂದು ಬೆಳಗ್ಗೆ ಮೃತಪಟ್ಟಿದ್ದಾರೆ. ಇವರಿಗೆ 94 ವರ್ಷ ವಯಸ್ಸಾಗಿತ್ತು. ವಯೋಸಹಜ ಆರೋಗ್ಯ ಸಮಸ್ಯೆಯಿಂದ ಇವರು ಬಳಲುತ್ತಿದ್ದರು ಎನ್ನಲಾಗಿದೆ.ಇವರು ಬಿಜೆಪಿಯಿಂದ ವಿಧಾನ ಪರಿಷತ್ ಸದಸ್ಯರಾಗಿ ನಾಮ ನಿರ್ದೇಶಿತಗೊಂಡಿದ್ದರು. 2013ರಲ್ಲಿ ವಿಧಾನ ಪರಿಷತ್ ಸದಸ್ಯ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಬಿಜೆಪಿ ಸರ್ಕಾರ ಅಧಿಕಾರದಲ್ಲಿದ್ದಾಗ ಹಜ್, ವಕ್ಫ್ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಸಚಿವರಾಗಿದ್ದರು.2008ರಲ್ಲಿ ಬಿ. ಎಸ್. ಯಡಿಯೂರಪ್ಪ ಸಂಪುಟದಲ್ಲಿ ಸಚಿವರಾಗಿದ್ದ ಅವರು ಬಳಿಕ ಬಿಜೆಪಿ ಬಿಟ್ಟು ಕಾಂಗ್ರೆಸ್ ಸೇರಿದ್ದರು. ಪಕ್ಷದಿಂದ ಅನ್ಯಾಯವಾಗಿದೆ ಎಂದು ಅವರು ಅಸಮಾಧಾನ ವ್ಯ‌ಕ್ತಪಡಿಸಿದ್ದರು. ನಂತರ ಕಾಂಗ್ರೆಸ್‌ ಸೇರಿದ್ದರೂ 2015ರಲ್ಲಿ ಅಂದಿನ ಸಿಎಂ ಸಿದ್ದರಾಮಯ್ಯನವರ ವಿರುದ್ಧ ಅಸಮಾಧಾನ ಹೊರಹಾಕಿ, ಅವರು ಅಲ್ಪ ಸಂಖ್ಯಾತ ಸಮುದಾಯಕ್ಕೆ ಯಾವುದೇ ಕೊಡುಗೆ ನೀಡುತ್ತಿಲ್ಲ ಎಂದು ಹೇಳಿ ಕಾಂಗ್ರೆಸ್‌ ಪಕ್ಷವನ್ನು ತೊರೆದಿದ್ದರು.ಮುಮ್ತಾಜ್‌ ಅಲಿಖಾನ್‌ ಅವರು, ಎಂ.ಎ, ಬಿ. ಎಲ್. ಪಿ. ಹೆಚ್.ಡಿ. ಪದವಿ ಪಡೆದಿದ್ದರು. ಇವರಿಗೆ ಸಾಹಿತ್ಯ ಮತ್ತು ಸಮಾಜ ಸೇವೆ ಕ್ಷೇತ್ರದಲ್ಲಿ ಸಲ್ಲಿಸಿದ ಸೇವೆಗಾಗಿ 2012ರಲ್ಲಿ ದಸರಾ ಪ್ರಶಸ್ತಿ, 2002ರಲ್ಲಿ ಭಾರತ ರತ್ನ ಡಾ. ಬಿ. ಆರ್‍. ಅಂಬೇಡ್ಕರ್ ಪ್ರಶಸ್ತಿ, ಶ್ರೀ ಜಿ. ನಾರಾಯಣ ಕುಮಾರ್‌ ಸಂಸ್ಥೆಯಿಂದ ಸಮಾಜ ಸೇವೆಗಾಗಿ 1993ರಲ್ಲಿ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಸೇರಿದಂತೆ ವಿವಿಧ ಪ್ರಶಸ್ತಿಗಳು ಸಿಕ್ಕಿವೆ.
ಕಾಂಗ್ರೆಸ್‌ ಮುಖಂಡನ ಸಾವು: ಅಂತ್ಯ ಸಂಸ್ಕಾರದಲ್ಲಿ ಭಾಗಿಯಾದವರ ಮೇಲೆ‌ ದೂರು ದಾಖಲು
ಮಹಿಳೆಯರಿಗೆ ಬಿಗ್‌ ಶಾಕ್‌ ಕೊಟ್ಟ ಸರ್ಕಾರ: ಮುಂಬೈ ರೈಲು ಆರಂಭದಾದರೂ ಸ್ತ್ರೀಯರಿಗೆ ಪ್ರವೇಶವಿಲ್ಲ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:twenty − five =
Remember me
