ಮೈಸೂರು:ಸ್ನೇಹಿತನ ಜತೆ ಮೈಸೂರಿನ ಹೆಲಿಪ್ಯಾಡ್ ಬಳಿಯ ವಾಟರ್ ಟ್ಯಾಂಕ್​​​​ನ ಗುಡ್ಡದ ಬಳಿ ಹೋಗಿದ್ದ ಎಂಬಿಎ ವಿದ್ಯಾರ್ಥಿನಿ ಮೇಲೆ ನಿನ್ನೆ ಸಂಜೆ ನಡೆದಿರುವ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಎಡಿಜಿಪಿ ನೇತೃತ್ವದಲ್ಲಿ ತನಿಖಾ ತಂಡ ರಚನೆ ಮಾಡಲಾಗಿದೆ.
ಉತ್ತರ ಭಾರತ ಮೂಲದ ಯುವತಿ ನಗರದ ಕಾಲೇಜಿನಲ್ಲಿ ಎಂಬಿಎ ವ್ಯಾಸಂಗ ಮಾಡುತ್ತಿದ್ದು ಅವರು ಸ್ನೇಹಿತನ ಜತೆ ಇದ್ದ ಸಂದರ್ಭದಲ್ಲಿ ಐವರು ಕಾಮುಕರು ಸ್ನೇಹಿತನ ಮೇಲೆ ಹಲ್ಲೆ ಮಾಡಿ ನಂತರ ಅತ್ಯಾಚಾರವೆಸಗಿದ್ದಾರೆ. ಆರೋಪಿಗಳು ಕೂಲಿ ಕೆಲಸದವರಂತೆ ಇದ್ದರು ಎಂದು ಸಂತ್ರಸ್ತೆ ಜತೆ ಇದ್ದ ಸ್ನೇಹಿತ ಇದಾಗಲೇ ಪೊಲೀಸರಿಗೆ ಮಾಹಿತಿ ನೀಡಿದ್ದಾನೆ.
ಸದ್ಯ ಯುವತಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಯುವತಿ ಜತೆ ಇದ್ದ ಯುವಕನ ಮಾಹಿತಿ ಆಧರಿಸಿ ಪೊಲೀಸರು ಎಫ್.ಐ.ಆರ್. ದಾಖಲು ಮಾಡಿಕೊಂಡಿದ್ದಾರೆ. ಎಡಿಜಿಪಿ ಪ್ರತಾಪ್ ರೆಡ್ಡಿ‌ ನೇತೃತ್ವದಲ್ಲಿ ತನಿಖಾ ತಂಡ ರಚನೆಯಾಗಿದ್ದು, ಅತಿ ಶೀಘ್ರದಲ್ಲಿ ಆರೋಪಿಗಳ ಬಂಧನಕ್ಕೆ ಸೂಕ್ತ ಕ್ರಮ ತೆಗೆದುಕೊಳ್ಳಲಾಗುವುದು ಎಂದಿದ್ದಾರೆ.
ಘಟನೆಯ ಎಲ್ಲ ವಿವರಗಳನ್ನೂ ಮುಖ್ಯಮಂತ್ರಿ ಹಾಗೂ ಗೃಹ ಸಚಿವರಿಗೆ ಹೇಳಿದ್ದೇನೆ. ಮಾಧ್ಯಮದ ಮುಂದೆ ಎಲ್ಲವನ್ನೂ ಹೇಳಲು ಸಾಧ್ಯವಿಲ್ಲ. ಆ ಯುವತಿ ಆಸ್ಪತ್ರೆಯಲ್ಲಿ ಇದ್ದಾಳೆ. ಆಕೆಆರೋಗ್ಯವಾಗಿದ್ದಾಳೆ. ಸೂರಿಗೆ ಕಪ್ಪು ಚುಕ್ಕೆ ತರುವಂತಹ ಘಟನೆ ಮತ್ತೆ ನಡೆಯದಂತೆ ತಡೆಯಲು ಸೂಕ್ತ ಭದ್ರತೆ ವ್ಯವಸ್ಥೆ ಮಾಡುತ್ತೇವೆ. ಗಸ್ತನ್ನು ಹೆಚ್ಚು ಮಾಡಲು ಅಧಿಕಾರಿಗಳಿಗೆ ಸೂಚಿಸಿದ್ದೇನೆ ಎಂದು ಸಚಿವ ಎಸ್.ಟಿ.ಸೋಮಶೇಖರ್ ಹೇಳಿದ್ದಾರೆ. ಇದಾಗಲೇ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಕೂಡ ತಪ್ಪಿತಸ್ಥರನ್ನು ಬಂಧಿಸುವಂತೆ ಸೂಚನೆ ನೀಡಿದ್ದಾರೆ.
ಬಾಲಕಿ ಮೇಲೆ ಅತ್ಯಾಚಾರ: ಮಾಜಿ ಶಾಸಕನಿಗೆ 25 ವರ್ಷ ಜೈಲು- ಸಹಕರಿಸಿದವರಿಗೆ ಜೀವಾವಧಿ ಶಿಕ್ಷೆ

‘ಪ್ರತಿ ಮನೆಯಿಂದಲೂ ಹುಡುಗಿಯರನ್ನು ಎತ್ತಿಕೊಂಡು ಹೋದರು- ಗುಂಡಿಕ್ಕಿ ಸಾಯಿಸಿ ಲೈಂಗಿಕ ಕ್ರಿಯೆ ನಡೆಸ್ತಾರೆ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:2 × 3 =
Remember me
