ಮೈಸೂರು:ಕರೊನಾ ಸೋಂಕು ಕ್ಷಣ ಕ್ಷಣಕ್ಕೂ ಆತಂಕ ಸೃಷ್ಟಿಸುತ್ತಲೇ ಸಾಗಿರುವ ಹಿನ್ನೆಲೆಯಲ್ಲಿ ಈ ಬಾರಿ ಎಲ್ಲಾ ಹಬ್ಬಗಳ ಮೇಲೆ ಸೋಂಕಿನ ಕರಿನೆರಳು ಬಿದ್ದು ಖುಷಿಯನ್ನು ಕಸಿದುಕೊಂಡಿದೆ, ಇದೀಗ ಜಗದ್ವಿಖ್ಯಾತ ಮೈಸೂರು ದಸರಾ ಸರದಿ.
ಮೈಸೂರಿನಲ್ಲಿ ಸೋಂಕು ವಿಪರೀತ ಆಗಿಬಿಟ್ಟಿದೆ. ಬೇರೆ ಕಡೆಗಳಲ್ಲಿ ಹೋಲಿಸಿದರೆ ಮೈಸೂರು ಕರೊನಾ ಹಾಟ್​ಸ್ಪಾಟ್​ ಆಗುತ್ತಲೇ ಸಾಗಿದೆ. ಈ ಹಿನ್ನೆಲೆಯಲ್ಲಿ ಈ ವರ್ಷದ ಮೈಸೂರು ರಾಜವಂಶದ ಖಾಸಗಿ ದಸರಾಗೆ ಸಾರ್ವಜನಿಕರು ಹಾಗೂ ಮಾಧ್ಯಮಗಳಿಗೆ ನಿರ್ಬಂಧ ಹೇರಲಾಗಿದೆ.
ಸಾರ್ವಜನಿಕರಿಗೆ ನಿರ್ಬಂಧವಿದ್ದರೂ ಟಿ.ವಿಗಳ ಮೂಲಕ ಈ ದಸರಾವನ್ನು ಸವಿಯುವ ಅವಕಾಶವಿತ್ತು. ಆದರೆ ಈ ಬಾರಿ ಕರೊನಾ ಹಿನ್ನೆಲೆಯಲ್ಲಿ ಮಾಧ್ಯಮದವರಿಗೂ ನಿರ್ಬಂಧ ವಿಧಿಸಿರುವ ಕಾರಣ, ಖಾಸಗಿ ದಸರಾ ನೋಡುವ ಭಾಗ್ಯ ಈ ಬಾರಿ ಸಿಗುವುದಿಲ್ಲ.ರಾಜವಂಶಸ್ಥೆ ಪ್ರಮೋದಾದೇವಿ ಒಡೆಯರ್ ಈ ಬಗ್ಗೆ ಪತ್ರಿಕಾ ಪ್ರಕಟಣೆ ಮೂಲಕ ತಿಳಿಸಿದ್ದಾರೆ.ಪತ್ರಿಕಾ ಪ್ರಕಟಣೆಯಲ್ಲಿ ಅವರು ಹೇಳಿರುವುದು ಇಷ್ಟು:ಮೈಸೂರಿನಲ್ಲಿ ಹೆಚ್ಚಿನ ಕೋವಿಡ್ ಪ್ರಕರಣಗಳ ದೃಷ್ಟಿಯಿಂದ ಅರಮನೆಯಲ್ಲಿ 2020ರ ಸಾಲಿನ ಶರನ್ನವರಾತ್ರಿ ಸಂದರ್ಭದಲ್ಲಿ ಪೂಜಾ ವಿಧಿವಿಧಾನಗಳನ್ನ ಸಾಂಪ್ರದಾಯಿಕವಾಗಿ ನಡೆಸಲಾಗುವುದು. ಮುನ್ನೆಚ್ಚರಿಕೆ ಕ್ರಮ ಅವಶ್ಯಕವಾಗಿರುವುದರಿಂದ ಆಚರಣೆಯಲ್ಲಿ ಕುಟುಂಬ ಸದಸ್ಯರನ್ನು ಒಳಗೊಂಡಂತೆ ಸಾರ್ವಜನಿಕರು ಹಾಗೂ ಮಾಧ್ಯಮಗಳು ಭಾಗವಹಿಸುವಿಕೆ ಇರುವುದಿಲ್ಲ. ಕರೊನಾ ಹರಡುವಿಕೆಯನ್ನು ತಡೆಗಟ್ಟುವ ನಿಟ್ಟಿನಲ್ಲಿ ಈ ಕ್ರಮ ಅನಿವಾರ್ಯವಾಗಿದೆ. ಸಾರ್ವಜನಿಕರು ಹಾಗೂ ಮಾಧ್ಯಮ ಪ್ರತಿನಿಧಿಗಳು ಸಹಕರಿಸಬೇಕು.
ಮುತ್ತಪ್ಪ ರೈ ಮಗನಿಗೆ ಡ್ರಗ್ಸ್​ ನಂಟು? ನಸುಕಿನಲ್ಲಿಯೇ ಸಿಸಿಬಿ ಶಾಕ್​- ಮನೆ ಮೇಲೆ ದಾಳಿ

ನೋಟು ಮುಟ್ಟುವಿರಾ? ಹುಷಾರ್​! ಹುಷಾರ್​! ಆರ್​ಬಿಐನಿಂದ ಬಂದಿದೆ ಆತಂಕದ ವರದಿ

ಕನಸಿನ ವಧುವಿಗೆ ವಕೀಲ ಹಾಕಿದ್ದಾನೊಂದು ಕಂಡೀಷನ್:​ ಸಿಗಲು ಸಾಧ್ಯನಾ? ಏನಂತೀರಿ ನೀವು?

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:1 × three =
Remember me
