ಬೆಂಗಳೂರು:ನಾನು ಭಗವಂತನನ್ನು ಕಣ್ಣಾರೆ ನೋಡಿದವನಲ್ಲ. ಆದರೆ ತಮ್ಮ ಅಮೂಲ್ಯ ಪ್ರಾಣವನ್ನು ಪಣಕ್ಕಿಟ್ಟು ನಮ್ಮ ಆರೋಗ್ಯಕ್ಕಾಗಿ ಹಗಲಿರುಳು ಶ್ರಮಿಸುತ್ತಿರುವ ವೈದ್ಯರಲ್ಲಿ, ದಾದಿಯರಲ್ಲಿ, ಆರೋಗ್ಯ ಸಿಬ್ಬಂದಿಯಲ್ಲಿ ದೇವರನ್ನು ಕಂಡೆ…
ಹೀಗೆಂದು ಭಾವುಕರಾಗಿ ಟ್ವೀಟ್​ ಮಾಡಿರುವುದು ಬಿಜೆಪಿ ರಾಜ್ಯಾದ್ಯಕ್ಷ, ಹಾಗೂ ದಕ್ಷಿಣ ಕನ್ನಡ ಸಂಸದ ನಳೀನ್​ಕುಮಾರ್​ ಕಟೀಲ್​.ಕರೊನಾ ಸೋಂಕಿಗೆ ಒಳಗಾಗಿ ಕಳೆದ ಆಗಸ್ಟ್​ 30ರಂದು ಆಸ್ಪತ್ರೆಗೆ ದಾಖಲಾಗಿದ್ದ ಕಟೀಲ್​ ಅವರು, ತಮ್ಮ ಸೇವೆ ಮಾಡಿರುವ ವೈದ್ಯರು, ದಾದಿಯರು ಹಾಗೂ ಆರೋಗ್ಯ ಸಿಬ್ಬಂದಿಯ ಪರಿಶ್ರಮವನ್ನು ಶ್ಲಾಘಿಸಿದ್ದಾರೆ.
ಕಟೀಲು ದುರ್ಗಾಪರಮೇಶ್ವರಿ ದೇವಿಯಕೃಪೆ, ನಿಮ್ಮೆಲ್ಲರ ಪ್ರೀತಿ, ಹಾರೈಕೆಯಫಲವಾಗಿ ಕೊರೊನಾ ಕಾಯಿಲೆಯಿಂದ ಗುಣಮುಖನಾಗಿದ್ದೇನೆ. ಸದ್ಯಕೆಲವು ದಿನಗಳ ತನಕ ಕ್ವಾರಂಟೈನ್ ನಲ್ಲಿ ಇರಲು ವೈದ್ಯರು ಸಲಹೆ ನೀಡಿದ್ದಾರೆ.1/2
— Nalinkumar Kateel (@nalinkateel)September 6, 2020

ಕಟೀಲು ದುರ್ಗಾಪರಮೇಶ್ವರಿ ದೇವಿಯ ಕೃಪೆ, ನಿಮ್ಮೆಲ್ಲರ ಪ್ರೀತಿ, ಹಾರೈಕೆಯ ಫಲವಾಗಿ ಕರೊನಾ ಕಾಯಿಲೆಯಿಂದ ಗುಣಮುಖನಾಗಿದ್ದೇನೆ. ಸದ್ಯ ಕೆಲವು ದಿನಗಳ ತನಕ ಕ್ವಾರಂಟೈನ್‍ನಲ್ಲಿ ಇರಲು ವೈದ್ಯರು ಸಲಹೆ ನೀಡಿದ್ದಾರೆ” ಎಂದು ನಳಿನ್ ಕುಮಾರ್ ತಿಳಿಸಿದ್ದಾರೆ.
ಆಗಸ್ಟ್​ 30ರಂದು ಟ್ವೀಟ್​ ಮೂಲಕ ತಮಗೆ ಕರೊನಾ ಪಾಸಿಟಿವ್​ ಬಂದಿರುವುದನ್ನು ಇವರು ಖಚಿತಪಡಿಸಿದ್ದರು. ಬಿಜೆಪಿ ರಾಜ್ಯಾಧ್ಯಕ್ಷರಾಗಿ ಒಂದು ವರ್ಷ ಪೂರೈಸಿದ ಸಂಭ್ರಮದ ಬೆನ್ನಲ್ಲೇ, ಕರೊನಾ ಸೋಂಕು ಕಾಣಿಸಿಕೊಂಡಿತ್ತು.
ನಾನು ಕೋವಿಡ್ ​19 ಪರೀಕ್ಷೆಗೆ ಒಳಗಾಗಿದ್ದು ವರದಿಯಲ್ಲಿ ಪಾಸಿಟಿವ್ ಎಂದು ಬಂದಿದೆ. ರೋಗಲಕ್ಷಣಗಳಿಲ್ಲದಿದ್ದರೂ ವೈದ್ಯರ ಸಲಹೆಯ ಮೇರೆಗೆ ಆಸ್ಪತ್ರೆಗೆ ದಾಖಲಾಗಿದ್ದೇನೆ ಎಂದಿದ್ದರು. ಜತೆಗೆ, ನಿಮ್ಮ ಶುಭಾಶಯಗಳು ಮತ್ತು ಆಶೀರ್ವಾದಗಳೊಂದಿಗೆ ಶೀಘ್ರದಲ್ಲೇ ಹಿಂತಿರುಗುವ ವಿಶ್ವಾಸವಿದೆ. ನನ್ನೊಂದಿಗೆ ಸಂಪರ್ಕಕ್ಕೆ ಬಂದ ಎಲ್ಲರೂ ಜಾಗರೂಕರಾಗಿರಿ ಎಂದು ಟ್ವಿಟರ್​ ಮೂಲಕ ಮನವಿ ಮಾಡಿದ್ದರು.
ಚಿಕ್ಕಮಗಳೂರು: ಕರೊನಾದಿಂದ ಮೃತಪಟ್ಟ ಅಪ್ಪನ ಅಂತ್ಯಕ್ರಿಯೆ ನಡೆಸಿ ಮಾದರಿಯಾದ ಮಗಳು…

ಮದುವೆಯಾದ 3ನೇ ದಿನ ತವರಿಗೆ ದಬ್ಬಿದ… 8ನೇ ದಿನ ತಲಾಖ್​… ತಲಾಖ್​… ತಲಾಖ್​… ಎಂದ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:19 + 18 =
Remember me
