ಹಾವೇರಿ:ಯೂಕ್ರೇನ್‌ನಲ್ಲಿ ನಡೆದ ಬಾಂಬ್‌ ದಾಳಿಯಲ್ಲಿ ಇದೇ 2ರಂದು ಮೃತಪಟ್ಟ ಹಾವೇರಿ ಜಿಲ್ಲೆಯ ರಾಣೆಬೇನ್ನೂರು ತಾಲೂಕಿನ ಚಳಗೇರಿ ಗ್ರಾಮದ ನವೀನ್‌ ಮೃತದೇಹ 20 ದಿನಗಳ ಬಳಿಕ ತಾಯ್ನಾಡನ್ನು ಸೇರಿದೆ. ಇದಾಗಲೇ ಮೃತದೇಹ ಬೆಂಗಳೂರಿನಿಂದ ನವೀನ್‌ ಗ್ರಾಮಕ್ಕೆ ತೆರಳುತ್ತಿದ್ದು ಬೆಳಗ್ಗೆ 10 ಗಂಟೆ ಸುಮಾರಿಗೆ ಗ್ರಾಮವನ್ನು ತಲುಪಲಿದೆ.
ಒಂದೆಡೆ ಪಾರ್ಥಿವ ಶರೀರವನ್ನು ಬರಮಾಡಿಕೊಳ್ಳಲು ಗ್ರಾಮಸ್ಥರು ಸಜ್ಜಾಗಿದ್ದರೆ, ಮನೆ ಮಗನನ್ನು ಕಳೆದುಕೊಂಡಿರುವ ಕುಟುಂಬಸ್ಥರ ಆಕ್ರಂದನ ಮುಗಿಲುಮುಟ್ಟಿದೆ. ಆದರೆ ಈ ನೋವಿನ ನಡುವೆಯೇ ಕುಟುಂಬಸ್ಥರು ಶ್ಲಾಘನಾರ್ಹ ನಿರ್ಧಾರ ತೆಗೆದುಕೊಂಡಿದ್ದಾರೆ.
ನವೀನ್‌ ಡಾಕ್ಟರ್‌ ಆಗಬೇಕೆಂಬ ಹಂಬಲದಿಂದ ಎಂಬಿಬಿಎಸ್‌ ಓದಲು ಯೂಕ್ರೇನ್‌ಗೆ ಹೋಗಿದ್ದ. ಮಗ ಡಾಕ್ಟರ್‌ ಆಗುವ ಬದಲು ಅಲ್ಲಿಯೇ ಬಲಿಯಾದ. ಈ ನಡುವೆಯೇ ಮಹತ್ವದ ನಿರ್ಧಾರ ತೆಗೆದುಕೊಂಡಿರುವ ಕುಟುಂಬಸ್ಥರು ಮೃತ ದೇಹವನ್ನು ದಾವಣಗೆರೆ ಎಸ್ ಎಸ್ ಮೆಡಿಕಲ್ ಕಾಲೇಜು ಹಸ್ತಾಂತರ ಮಾಡಲು ನಿರ್ಧರಿಸಿದ್ದಾರೆ.
ಪಾರ್ಥಿವ ಶರೀರ ಬರಮಾಡಿಕೊಳ್ಳಲು ನವೀನ್ ಮನೆ ಮುಂದೆ ಶಾಮಿಯಾನ ಬ್ಯಾರಿಕೇಡ್ ಹಾಕಿ ಸಕಲ ಸಿದ್ಧತೆ ಮಾಡಲಾಗಿದೆ. ಇಂದು ಚಳಗೇರಿ ಗ್ರಾಮದಲ್ಲಿ ನವೀನ್ ಅಂತಿಮ ದರ್ಶನ ಮಾಡಲು ಮನೆ ಮುಂದೆ 4 ಗಂಟೆಗಳ ಕಾಲ ಪಾರ್ಥಿವ ಶರೀರಕ್ಕೆ ಗೌರವ ಸೂಚಿಸಲು ವ್ಯವಸ್ಥೆ ಮಾಡಲಾಗಿದೆ. ಬಳಿಕ ಲಿಂಗಾಯತ ಸಂಪ್ರದಾಯದಂತೆ ಅಂತಿಮ ವಿಧಿವಿಧಾನ ನಡೆಯಲಿದೆ.
ಇದಾದ ಬಳಿಕ ನಂತರ ಮೃತ ದೇಹವನ್ನು ದಾವಣಗೆರೆ ಎಸ್ ಎಸ್ ಮೆಡಿಕಲ್ ಕಾಲೇಜು ಹಸ್ತಾಂತರ ಮಾಡಲಾಗುತ್ತದೆ. ನವೀನ್ ಕುಟುಬಂಸ್ಥರ ಆಸೆಯದಂತೆ ಮೆಡಿಕಲ್ ಕಾಲೇಜು ವಿದ್ಯಾರ್ಥಿಗಳ ಕಲಿಕೆಗೆ ಅನುಕೂಲವಾಗಲು ಮೃತದೇಹ ದಾನ ಮಾಡಲು ಕುಟುಂಬಸ್ಥರು ನಿರ್ಧಾರ ತೆಗೆದುಕೊಂಡಿದ್ದಾರೆ.
ಯೂಕ್ರೇನ್‌ನಲ್ಲಿ ಮೃತಪಟ್ಟ ಹಾವೇರಿ ಜಿಲ್ಲೆಯ ನವೀನ್‌ ಪಾರ್ಥಿವ ಶರೀರವನ್ನು ಬರಮಾಡಿಕೊಳ್ಳಲು ಗ್ರಾಮದಲ್ಲಿ ಸಕಲ ಸಿದ್ಧತೆ ನಡೆಸಲಾಗುತ್ತಿದೆ.pic.twitter.com/VJ9ECgFQYM
— Vijayavani (@VVani4U)March 21, 2022

VIDEO: ಡಾಕ್ಟರ್‌ ಮಗನನ್ನು ಅಪ್ಪ-ಅಮ್ಮ ಸ್ವಾಗತಿಸಬೇಕಿತ್ತು, ಇದೆಂಥ ವಿಧಿಯಾಟ… ಸಿಎಂ ಬೊಮ್ಮಾಯಿ ನೋವಿನ ನುಡಿ

VIDEO: ನಸುಕಿನಲ್ಲಿ ತಾಯ್ನಾಡು ಸೇರಿದ ನವೀನ್‌ ಮೃತದೇಹ: ಸಿಎಂ ಬೊಮ್ಮಾಯಿ, ಸಚಿವ ಸುಧಾಕರ ಅಂತಿಮ ನಮನ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:two × 2 =
Remember me
