ಬೆಳಗಾವಿ:ಮುರುಘಾ ಮಠದ ಸ್ವಾಮೀಜಿಗಳ ಲೈಂಗಿಕ ಹಗರಣ ಪ್ರಕರಣ ಭಾರಿ ವಿವಾದ ಸೃಷ್ಟಿಸಿರುವ ಬೆನ್ನಲ್ಲೇ ಇದೀಗ ಬೆಳಗಾವಿಯ ನೇಗಿನಹಾಳ ಸ್ವಾಮೀಜಿ ಆತ್ಮಹತ್ಯೆಗೆ ಶರಣಾಗಿದ್ದಾರೆ!
ಮುರುಘಾ ಮಠದ ಸ್ವಾಮೀಜಿಗಳ ಮೇಲೆ ಇರುವ ಆರೋಪದ ಬೆನ್ನಲ್ಲೇ ಇಬ್ಬರು ಮಹಿಳೆಯರು ಮಾತನಾಡಿರುವ ಆಡಿಯೋ ರಿಲೀಸ್​ ಆಗಿರುವುದೇ ಈ ಆತ್ಮಹತ್ಯೆಗೆ ಕಾರಣ. ಮುರಘಾ ಶ್ರೀಗಳ ಲೈಂಗಿಕ ಪ್ರಕರಣ ಕುರಿತು ಇಬ್ಬರು ಮಹಿಳೆಯರು ಮಾತನಾಡಿರುವ ಆಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರಿ ಸುದ್ದಿಯಾಗುತ್ತಿದ್ದು, ಅದರ ಬೆನ್ನಲ್ಲೇ ನೇಗಿನಹಾಳದ ಬಸವಸಿದ್ದಲಿಂಗ ಸ್ವಾಮೀಜಿ ಮನ ನೊಂದು ನೇಣಿಗೆ ಶರಣಾಗಿದ್ದಾರೆ.
ಕೆಲವು ಸ್ವಾಮೀಜಿಗಳ ಲೈಂಗಿಕ ಹಗರಣದ ಕುರಿತು ಓರ್ವ ಮಹಿಳೆ ಆಡಿಯೊದಲ್ಲಿ ಹೆಸರು ಸಹಿತ ಪ್ರಸ್ತಾಪ ಮಾಡಿದ್ದಾರೆ. ಆಡಿಯೊದಲ್ಲಿ ಇಬ್ಬರು ಮಹಿಳೆಯರು ಮಾತನಾಡಿದ್ದಾರೆ. ಅವರ ಪೈಕಿ ಓರ್ವ ಮಹಿಳೆ ಕೆಲವೊಂದು ಪ್ರಶ್ನೆಗಳನ್ನು ಇನ್ನೊಂದು ಮಹಿಳೆಗೆ ಕೇಳಿದ್ದಾರೆ. ಬೆಳಗಾವಿಯ ಮಠದಲ್ಲಿಯೇ ಅನೇಕ ವರ್ಷಗಳಿಂದ ತಾವು ಕೆಲಸ ಮಾಡುತ್ತಿರುವುದಾಗಿ ಹೇಳಿಕೊಂಡಿರುವ ಇನ್ನೊಂದು ಮಹಿಳೆ ಮಠಗಳಲ್ಲಿ ನಡೆಯುತ್ತಿದೆ ಎನ್ನಲಾದ ಲೈಂಗಿಕ ದೌರ್ಜನ್ಯಗಳ ಕುರಿತು ವಿವರಣೆ ನೀಡಿದ್ದಾರೆ. ಈ ಸಂದರ್ಭದಲ್ಲಿ ಕೆಲವೊಂದು ಮಠಗಳು ಹಾಗೂ ಕೆಲವು ಸ್ವಾಮೀಜಿಗಳ ಹೆಸರನ್ನೂ ಆಕೆ ಆಡಿಯೋದಲ್ಲಿ ಹೇಳಿದ್ದಾರೆ. ಆ ಆಡಿಯೊದಲ್ಲಿ ನೇಗಿನಹಾಳ ಸ್ವಾಮೀಜಿ ಹೆಸರು ಕೂಡ ಇದೆ. ಈ ಹಿನ್ನೆಲೆಯಲ್ಲಿ ಸ್ವಾಮೀಜಿ ಮನನೊಂದುಕೊಂಡು ಇಂಥದ್ದೊಂದು ಕೃತ್ಯ ಎಸಗಿದ್ದಾರೆ ಎನ್ನಲಾಗಿದೆ.
ವೈರಲ್​ ಆಡಿಯೋ ಕುರಿತು ಸೂಕ್ತ ತನಿಖೆ ನಡೆಸುವಂತೆ, ಹಾಗೂ ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಬೈಲಹೊಂಗಲ ಡಿವೈಎಸ್​ಪಿ ಅವರಿಗೆ ಮಠದ ಆಡಳಿತ ಮಂಡಳಿ ದೂರು ನೀಡಿದೆ. ಲಿಂಗಾಯತ ಧರ್ಮದ ಮಠಾಧೀಶರನ್ನ ಗುರಿಯಾಗಿಸಿಕೊಂಡು ಪಟ್ಟಭದ್ರ ಹಿತಾಸಕ್ತಿಗಳು ಇಲ್ಲ ಸಲ್ಲದ ಆರೋಪ ಮಾಡುತ್ತಿದ್ದಾರೆ.
ಅವಾಚ್ಯ ಶಬ್ದಗಳಿಂದ ನಿಂದನೆ ಮಾಡಿದ್ದು ಮಠಾಧೀಶರ ಚಾರಿತ್ರ್ಯಕ್ಕೆ ಧಕ್ಕೆ ಆಗುವ ರೀತಿಯಲ್ಲಿ ಲಿಂಗಾಯತ ಧರ್ಮದವರಿಗೆ ಮುಜುಗರ ಮಾಡಿ ಧಾರ್ಮಿಕ ಭಾವನೆಗಳಿಗೆ ದಕ್ಕೆ ಉಂಟು ಮಾಡುತ್ತಿದ್ದಾರೆ. ಇವರ ಮೇಲೆ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ದೂರಿನಲ್ಲಿ ಹೇಳಲಾಗಿದೆ. (ದಿಗ್ವಿಜಯ ನ್ಯೂಸ್​)
ಸ್ವಿಗ್ಗಿಯಲ್ಲಿ ಆಹಾರಕ್ಕಿಂತ ಹೆಚ್ಚಾಗಿ ಜನರು ತರಿಸಿಕೊಂಡಿರೋದು ಇದನ್ನಂತೆ! ಕೇಳಿದ್ರೆ ‘ಛೀ’ ಅಂತೀರಾ…

ನನ್ನ ಸಾವಿಗೆ ಬಿಜೆಪಿ ಮುಖಂಡ ಹಾಗೂ ಪಿಎಸ್​ಐ ಕಾರಣ ಎಂದು ಬರೆದಿಟ್ಟು ವ್ಯಕ್ತಿ ಆತ್ಮಹತ್ಯೆ!

ಸಿಎಂ ಮಮತಾ ಬ್ಯಾನರ್ಜಿ ಸರ್ಕಾರಕ್ಕೆ ಬಿಗ್​ ಶಾಕ್!​ 3,500 ಕೋಟಿ ರೂ. ದಂಡ ವಿಧಿಸಿದ ಎನ್​ಜಿಟಿ

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:eight − 3 =
Remember me
