ಬೆಂಗಳೂರು:ಹೈಕೋರ್ಟ್‌ನ ಹಾಲಿ ರಿಜಿಸ್ಟ್ರಾರ್ ಜನರಲ್ ಟಿ.ಜಿ ಶಿವಶಂಕರೇಗೌಡ ಸೇರಿ ಐವರು ನ್ಯಾಯಾಂಗ ಅಧಿಕಾರಿಗಳನ್ನು ಹೈಕೋರ್ಟ್ ಹೆಚ್ಚುವರಿ ನ್ಯಾಯಮೂರ್ತಿಗಳಾಗಿ ನೇಮಕ ಮಾಡಿ ಕೇಂದ್ರ ಸರ್ಕಾರ ಆದೇಶ ಹೊರಡಿಸಿದೆ.
ಅನಿಲ್ ಭೀಮಸೇನ್ ಕಟ್ಟಿ, ಗುರುಸಿದ್ಧಯ್ಯ ಬಸವರಾಜ, ಚಂದ್ರಶೇಖರ್ ಮೃತ್ಯುಂಜಯ ಜೋಷಿ, ಉಮೇಶ್ ಮಂಜುನಾಥ್ ಭಟ್ ಅಡಿಗ ಹಾಗೂ ತಲಕಾಡು ಗಿರಿಗೌಡ ಶಿವಶಂಕರೇಗೌಡ ಅವರನ್ನು ಹೈಕೋರ್ಟ್ ನ್ಯಾಯಮೂರ್ತಿಗಳಾಗಿ ಪದನ್ನೋತಿ ನೀಡಲು ಜು.19ರಂದು ನಡೆದ ಸಭೆಯಲ್ಲಿ ಸುಪ್ರೀಂಕೋರ್ಟ್ ಕೊಲಿಜಿಯಂ ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಿತ್ತು.
ಸಂವಿಧಾನದ ಪರಿಚ್ಛೇದ 224ರ ಕಲಂ (1)ರ ಅಡಿ ಪ್ರದತ್ತವಾದ ಅಧಿಕಾರ ಬಳಸಿ ರಾಷ್ಟ್ರಪತಿಗಳು ಈ ಐವರನ್ನೂ ಹೆಚ್ಚುವರಿ ನ್ಯಾಯಮೂರ್ತಿಗಳಾಗಿ ನೇಮಕ ಮಾಡಿ ಮಾಡಿದ್ದಾರೆ ಎಂದು ಕಾನೂನು ಮತ್ತು ನ್ಯಾಯ ಸಚಿವಾಲಯ ಶುಕ್ರವಾರ ಹೊರಡಿಸಿರುವ ಅಧಿಸೂಚನೆಯಲ್ಲಿ ತಿಳಿಸಲಾಗಿದೆ.
ರಾಜ್ಯ ಹೈಕೋರ್ಟ್‌ಗೆ 62 ನ್ಯಾಯಮೂರ್ತಿಗಳ ಹುದ್ದೆ ಮಂಜೂರಾಗಿದ್ದು, 2022ರ ಆ.10ರಂತೆ 44 ನ್ಯಾಯಮೂರ್ತಿಗಳು ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಐವರು ಹೊಸ ನ್ಯಾಯಮೂರ್ತಿಗಳ ಸೇರ್ಪಡೆಯಿಂದ ಈ ಸಂಖ್ಯೆ 49ಕ್ಕೆ ಏರಿಕೆಯಾಗಲಿದೆ.
VIDEO: ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ಸುದ್ದಿ: ಬಿಜೆಪಿ ಉಸ್ತುವಾರಿ ಅರುಣ್​ ಸಿಂಗ್​ ಹೇಳಿದ್ದೇನು?

ಮಹಾರಾಷ್ಟ್ರ ಬಿಜೆಪಿ ಘಟಕಕ್ಕೆ ಹೊಸಬರ ನೇಮಕ: ಮಾಜಿ ಸಚಿವರಿಗೆ ಒಲಿದ ಹುದ್ದೆ

ತ್ರಿವರ್ಣಧ್ವಜ: ಹಾಲಿ ಮುಖ್ಯಮಂತ್ರಿ ಬೊಮ್ಮಾಯಿಗೆ ಮಾಜಿ ಸಿಎಂ ಸಿದ್ದರಾಮಯ್ಯ ಇಟ್ಟರು ಈ 13 ಪ್ರಶ್ನೆ…

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:2 × 2 =
Remember me
