ಬೆಂಗಳೂರು:ನಗರದಲ್ಲಿ ಕರೊನಾ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ರಾತ್ರಿ ಕರ್ಫ್ಯೂವನ್ನು ಬಿಗಿಗೊಳಿಸಲು ಬೃಹತ್​ ಬೆಂಗಳೂರು ಮಹಾನಗರ ಪಾಲಿಕೆ ಮುಂದಾಗಿದೆ. ನೈಟ್​ ಕರ್ಫ್ಯೂ ಈಗ ಜಾರಿಯಲ್ಲಿ ಇದ್ದರೂ ಬೆಂಗಳೂರಿಗರು ಡೋಂಟ್​ ಕೇರ್​ ಎನ್ನುತ್ತಿರುವ ಹಿನ್ನೆಲೆಯಲ್ಲಿ ಕರೊನಾ ಸೋಂಕಿನ ಪ್ರಮಾಣ ಹೆಚ್ಚುತ್ತಲೇ ಸಾಗಿದೆ.
ಇದೆ ಕಾರಣಕ್ಕೆ ಕಠಿಣ ನಿಯಮವನ್ನು ರೂಪಿಸಲು ಹಾಗೂ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಲು ಸರ್ಕಾರ ಮುಂದಾಗಿದೆ. ಆದ್ದರಿಂದ  ಪುನಃ ರಾತ್ರಿ ಕರ್ಫ್ಯೂ ಶುರುವಾಗಲಿದೆ. ಪ್ರತಿ ರಾತ್ರಿ 10 ಗಂಟೆಯಿಂದ ಬೆಳಗ್ಗೆ 5 ಗಂಟೆಯವರೆಗೆ ಈ ಕರ್ಫ್ಯೂ ಜಾರಿಯಲ್ಲಿ ಇರಲಿದೆ.
ಇಷ್ಟು ದಿನಗಳ ಕಾಲ ನೈಟ್ ಕರ್ಫ್ಯೂ ಇದ್ದರೂ ಸರಿಯಾಗಿ ಪಾಲನೆ ಆಗುತ್ತಿರಲಿಲ್ಲ. ಆದ್ದರಿಂದ ಅನಗತ್ಯವಾಗಿ ಓಡಾಡಿದರೆ, ರಸ್ತೆಗಿಳಿದರೆ ದಂಡ ಪ್ರಯೋಗ ಮಾಡಲಾಗುತ್ತದೆ. ಜತೆಗೆ ವಿಪತ್ತು ನಿರ್ವಹಣಾ ಕಾಯ್ದೆಯಡಿ ಕೇಸ್‌ ದಾಖಲಿಸುವುದಾಗಿ ಅಧಿಕಾರಿಗಳು ಎಚ್ಚರಿಸಿದ್ದಾರೆ.
ಯಾರಿಗೆ ಯಾವುದಕ್ಕೆ ವಿನಾಯಿತಿ?
* ರೋಗಿಗಳನ್ನ ಕರೆದೊಯ್ಯುವಾಗ ಸಂಬಂಧಪಟ್ಟವರಿಗೆ ಮಾತ್ರ ಅವಕಾಶ* ಯಾವುದೇ ಕಂಪನಿ ಹಾಗೂ ಕೈಗಾರಿಕಾ ಉದ್ಯೋಗಿಗಳು ಪಾಸ್ ಹೊಂದಿರಬೇಕು* ಟೆಲಿಕಾಂ ಹಾಗೂ ಇಂಟರ್ನೆಟ್ ಸರ್ವೀಸಸ್ ವರ್ಕರ್ಸ್ ಐಡಿಕಾರ್ಡ್ ಹೊಂದಿರಬೇಕು* ಮೆಡಿಕಲ್ ಎಮರ್ಜೆನ್ಸಿ ಹಾಗೂ ಅಗತ್ಯ ಸರಬರಾಜುವಾಹನಗಳಿಗೆ ಅವಕಾಶ* ಅಗತ್ಯ ಸರಕು ಸಾಗಾಟ ವಾಹನಗಳಿಗೆ ಅವಕಾಶ* ಏರ್​ಪೋರ್ಟ್​, ರೈಲ್ವೆ ಸೇರಿದಂತೆ ಓಡಾಟಕ್ಕೆ ಸೂಕ್ತ ಮಾಹಿತಿ‌ ಒದಗಿಸಬೇಕು.
24 ವಿವಿಗಳು ನಕಲಿ- ಇಲ್ಲಿದೆ ಡಿಟೇಲ್ಸ್​: ದಾಖಲೆ ಮಾಡುವ ಮುನ್ನ ಇರಲಿ ಎಚ್ಚರ

ಎರಡು ವರ್ಷದಲ್ಲಿ 24 ಸಾವಿರ ಮಕ್ಕಳ ಆತ್ಮಹತ್ಯೆ: ಕೇಂದ್ರದಿಂದ ಸ್ಫೋಟಕ ಮಾಹಿತಿ, ಕಾರಣವೇನು?

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:eighteen + 14 =
Remember me
