ಮಂಡ್ಯ:ಎಚ್‌.ಡಿಕುಮಾರಸ್ವಾಮಿಯವರು ಮತ್ತೆ ಮುಖ್ಯಮಂತ್ರಿ ಆಗುತ್ತಾರೆ. ಜನರ ಸೇವೆಯನ್ನು ನಮ್ಮ ಪಕ್ಷ ಮಾಡುತ್ತಿದ್ದು, ಮುಂದಿನ ದಿನಗಳಲ್ಲಿ ಜೆಡಿಎಸ್ ಪಕ್ಷ ಅಧಿಕಾರಕ್ಕೆ ಬರುತ್ತದೆ ಎಂದು ನಿಖಿಲ್‌ ಕುಮಾರಸ್ವಾಮಿ ಹೇಳಿದ್ದಾರೆ.
ಮಂಡ್ಯ ಜಿಲ್ಲೆ ಮದ್ದೂರು ತಾಲೂಕಿನ ಕೊಪ್ಪ ಗ್ರಾಮದಲ್ಲಿ ಮಾತನಾಡಿದ ಅವರು, ಎರಡೂ ರಾಷ್ಟ್ರೀಯ ಪಕ್ಷಗಳಿಗೆ ಹೈಕಾಮಂಡ್ ದೆಹಲಿಯಲ್ಲಿ ಇರುವುದು. ನಮ್ಮ ಕುಮಾರಣ್ಣ ಹೈಕಮಾಂಡ್ ಅಂತ ಅಂದುಕೊಂಡಿರುವುದು ಜನರನ್ನು. ಕುಮಾರಣ್ಣ ನೇತೃತ್ವದಲ್ಲಿ ಮತ್ತೆ ಜೆಡಿಎಸ್ ಸರ್ಕಾರ ಬರುವ ಸಾಧ್ಯತೆ ಕಾಣಿಸುತ್ತಿದೆ ಎಂದರು.
ಕುಮಾರಸ್ವಾಮಿ ಅವರು ರೈತರ ಸಾಲ ಮನ್ನದ ವಿಚಾರವಾಗಿ ಯಶಸ್ವಿಯಾಗಿ ನಿರ್ವಹಣೆ ಮಾಡಿದ್ದಾರೆ. ಸಮ್ಮಿಶ್ರ ಸರ್ಕಾರದಲ್ಲಿ ಕೊಟ್ಟ ಮಾತನ್ನು ಅವರು ಉಳಿಸಿ ಕೊಂಡಿದ್ದಾರೆ. ಆರೋಗ್ಯ ಸಿಬ್ಬಂದಿ, ಅಂಗನವಾಡಿ ಕಾರ್ಯಕರ್ತೆಯರ ಪ್ರೋತ್ಸಾಹ ಧನ ಹಾಗೂ ಸಂಬಳ ಹೆಚ್ಚಳದ ಬಗ್ಗೆ ಪ್ರಸ್ತಾಪ ಮಾಡಿದ್ದಾರೆ. ಆದ್ದರಿಂದ ಅವರೇ ಮುಂದಿನ ಸಿಎಂ ಆಗುವುದು ಎಂದು ಹೇಳಿದರು.
Sign in to your account
Please enter an answer in digits:seven − 1 =
Remember me
