ಬೆಂಗಳೂರು:ಕರೊನಾ ಹೊಸ ರೂಪದಲ್ಲಿ ಇದಾಗಲೇ ಎಲ್ಲೆಡೆ ತನ್ನ ಆರ್ಭಟ ಮುಂದುವರೆಸಿದೆ. ಕ್ಷಣ ಕ್ಷಣಕ್ಕೂ ಜನರಲ್ಲಿ ಆತಂಕ ಸೃಷ್ಟಿಸಿರುವ ಈ ಕರೊನಾದಿಂದಾಗಿ ಮತ್ತೆ ಶಾಲೆಗಳು ಮುಚ್ಚುವ ಪರಿಸ್ಥಿತಿ ತಲೆದೋರಿದೆ.
ಈಗಷ್ಟೇ ರಾಜ್ಯಾದ್ಯಂತ ಶಾಲೆಗಳು ತೆರೆದಿದ್ದು, ನಿಧಾನವಾಗಿ ಮಕ್ಕಳು ಶಾಲೆಯತ್ತ ಹೆಜ್ಜೆ ಹಾಕುತ್ತಿದ್ದರು. ಆದರೆ ಇದೀಗ ಕರೊನಾ ಮತ್ತಷ್ಟು ವಿಸ್ತಾರಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಸರ್ಕಾರವೇ ಶಾಲೆಗಳನ್ನು ಮುಚ್ಚಲು ನಿರ್ಧರಿಸಿದೆ. ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಈ ನಿರ್ಧಾರ ಅನಿವಾರ್ಯವಾಗಿದೆ.
ಈ ಕುರಿತು ಶಿಕ್ಷಣ ಸಚಿವ ಸುರೇಶ್​ ಕುಮಾರ್​ ಮಾಹಿತಿ ನೀಡಿದ್ದಾರೆ. 6 ರಿಂದ 9ನೇ ತರಗತಿಯವರೆಗೆ ಈಗಾಗಲೇ ಶಾಲೆಗಳು ಆರಂಭವಾಗಿರುವ ಹಿನ್ನೆಲೆಯಲ್ಲಿ ಅವುಗಳನ್ನು ಪುನಃ ಕ್ಲೋಸ್​ ಮಾಡಲು ಸರ್ಕಾರ ತೀರ್ಮಾನಿಸಿರುವುದಾಗಿ ಸಚಿವರು ಹೇಳಿದ್ದಾರೆ. ಆದರೆ ಸದ್ಯ ಈ ನಿರ್ಧಾರ ಬೆಂಗಳೂರಿಗೆ ಮಾತ್ರ ಸೀಮಿತವಾಗಲಿದೆ. ಇದರ ಅರ್ಥ 9ನೇ ತರಗತಿಯವರೆಗೆ ಶಾಲೆಗಳನ್ನು ಬೆಂಗಳೂರಿನಲ್ಲಿ ಮಾತ್ರ ಮುಚ್ಚಲು ಸರ್ಕಾರ ತೀರ್ಮಾನಿಸಿದೆ. ಇದು ಮುಂದಿನ 15 ದಿನಗಳವರೆಗೆ ಇರಲಿದೆ ಎಂದು ಸುರೇಶ್​ ಕುಮಾರ್​ ಹೇಳಿದ್ದಾರೆ.
ಬೆಂಗಳೂರಿನಲ್ಲಿ ಕರೊನಾ ಆರ್ಭಟ ಹೆಚ್ಚಿರುವ ಹಿನ್ನೆಲೆಯಲ್ಲಿ ಇಲ್ಲಿ ಸದ್ಯ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಈ ಸಂಬಂಧ ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಲಾಗಿದ್ದು, ಈ ವಯೋಮಾನದ ವಿದ್ಯಾರ್ಥಿಗಳ ಆರೋಗ್ಯದ ಹಿತದೃಷ್ಟಿಯಿಂದ‌ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಮುಂದಿನ 15 ದಿನಗಳವರೆಗೆ ನಿರ್ಣಾಯಕವಾಗಿರುವ ಹಿನ್ನೆಲೆಯಲ್ಲಿ 15 ದಿನಗಳವರೆಗೆ ಬೆಂಗಳೂರಿನಲ್ಲಿ ಶಾಲೆಗಳನ್ನು ಮುಚ್ಚಬೇಕಿದೆ ಎಂದರು.
10 ನೇ ತರಗತಿಗಳು ಎಂದಿನಂತೆ ಮುಂದುವರೆಯಲಿದೆ ಎಂದಿರುವ ಸಚಿವರು, ಈ ವಿದ್ಯಾರ್ಥಿಗಳ ಹಾಜರಾತಿ ಕಡ್ಡಾಯವಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಮಕ್ಕಳ ಆರೋಗ್ಯದ ರಕ್ಷಣೆ ಮುಖ್ಯ. ಆದ್ದರಿಂದ ಬೆಂಗಳೂರಿನ ಶಾಲೆಗಳು 10ನೇ ತರಗತಿ ವಿದ್ಯಾರ್ಥಿಗಳ ಹಾಜರಾತಿ ಕಡ್ಡಾಯ ಮಾಡುವಂತಿಲ್ಲ ಎಂದಿದ್ದಾರೆ.
ಕ್ರಿಕೆಟ್​ ಮಾಂತ್ರಿಕ ಸಚಿನ್​ ತೆಂಡೂಲ್ಕರ್​ ಆಸ್ಪತ್ರೆಗೆ ದಾಖಲು: ಟ್ವೀಟ್​ ಮಾಡಿದ ತಾರೆ ಹೇಳಿದ್ದೇನು?

ಬಾಯ್​ಫ್ರೆಂಡ್​ಗೆ ಕರೊನಾ ಬಂದ ಬೆನ್ನಲ್ಲೇ ಬಾಲಿವುಡ್​ ಬೆಡಗಿ ಆಲಿಯಾ ಭಟ್​ಗೂ ತಗುಲಿದ ಸೋಂಕು

VIDEO: ಕ್ಷೇತ್ರದ ಹೆಸರು ಬದಲಿಸಬೇಡಿ ಎನ್ನುತ್ತಲೇ ಸಭೆಯಲ್ಲಿಯೇ ಪ್ರಾಣ ಬಿಟ್ಟ ಪಂಚಾಯಿತಿ ಮುಖಂಡ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:4 × five =
Remember me
