ಮೈಸೂರು:ಚಾಮುಂಡಿಬೆಟ್ಟದಲ್ಲಿ ರಥೋತ್ಸವ ಹಿನ್ನೆಲೆಯಲ್ಲಿ ಇಂದು (ಬುಧವಾರ) ಸಂಜೆ 6 ಗಂಟೆಯಿಂದ ನಾಳೆ ಮಧ್ಯಾಹ್ನ 12 ಗಂಟೆವರೆಗೆ ಚಾಮುಂಡಿ ಬೆಟ್ಟಕ್ಕೆ ಪ್ರವೇಶ ನಿರ್ಬಂಧಿಸಲಾಗಿದೆ.
ಈ ಕುರಿತು ಮೈಸೂರು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಆದೇಶ ಹೊರಡಿಸಿದ್ದಾರೆ.
29ರಂದು ಬೆಳಗ್ಗೆ 9.45ರಿಂದ 10.5ರವರೆಗೆ ಬೆಟ್ಟದಲ್ಲಿ ಚಾಮುಂಡೇಶ್ವರಿ ರಥೋತ್ಸವ ನಡೆಯಲಿದೆ. ರಥೋತ್ಸವಕ್ಕೆ ಹೆಚ್ಚಿನ ಭಕ್ತಾದಿಗಳು ಆಗಮಿಸುವ ಹಿನ್ನೆಲೆಯಲ್ಲಿ ಈ ಆದೇಶವನ್ನು ಹೊರಡಿಸಲಾಗಿದೆ.
ಇದನ್ನೂ ಓದಿ:ವಿಶೇಷ ಪ್ಯಾಕೇಜ್ ಕೊಡಿ; ಶಾಸಕ ದೇವಾನಂದ ಚವಾಣ್
ಪ್ರವೇಶ ನಿಷೇಧವಿರುವ ದಿನಗಳಂದು ಕೇಂದ್ರ ಮತ್ತು ರಾಜ್ಯ ಸರ್ಕಾರ ಘೋಷಿಸಿದ ಕೋವಿಡ್ ಶಿಷ್ಟಾಚಾರ ವ್ಯವಸ್ಥೆ ಹೊಂದಿರುವ ಗಣ್ಯ ವ್ಯಕ್ತಿಗಳು, ಸರ್ಕಾರಿ ಕೆಲಸದ ನಿಮಿತ್ತ ತೆರಳುವ ಅಧಿಕಾರಿಗಳು ಮತ್ತು ತುರ್ತು ಸೇವಾ ವಾಹನಗಳು, ಗ್ರಾಮಸ್ಥರ ವಾಹನಗಳನ್ನು ಹೊರತುಪಡಿಸಿ ಸಾರ್ವಜನಿಕರ ವಾಹನ ಮತ್ತು ಖಾಸಗಿ ವಾಹನಗಳು ಬೆಟ್ಟಕ್ಕೆ ಬರುವುದನ್ನು ನಿಷೇಧಿಸಲಾಗಿದೆ.
ಈ ಎರಡೂ ದಿನಗಳು ದೇವಾಲಯದ ಪ್ರದೇಶದಲ್ಲಿ ದೇವಾಲಯದ ವತಿಯಿಂದ ಹಾಗೂ ದಾನಿಗಳಿಂದ ಸಾಮೂಹಿಕವಾಗಿ ಹಾಗೂ ಸಾರ್ವಜನಿಕವಾಗಿ ಪ್ರಸಾದ ತಯಾರಿಸುವುದು, ವಿತರಿಸುವುದನ್ನು ನಿಷೇಧಿಸಲಾಗಿದೆ.
ದೇವಾಲಯದಲ್ಲಿ ಜರುಗುವ ರಥೋತ್ಸವ ಸಂಬಂಧಿತ ಧಾರ್ಮಿಕ ಕಾರ್ಯಕ್ರಮಗಳು ಸಾಂಪ್ರದಾಯಿಕವಾಗಿ ದೇವಾಲಯದ ಅರ್ಚಕರು ಮತ್ತು ಸಿಬ್ಬಂದಿಯ ಉಪಸ್ಥಿತಿಯಲ್ಲಿ ಎಂದಿನಂತೆ ನಡೆಸಬಹುದು ಎಂದು ಜಿಲ್ಲಾಧಿಕಾರಿ ಆದೇಶದಲ್ಲಿ ಉಲ್ಲೇಖಿಸಿದ್ದಾರೆ.
ಕಾಲೇಜು ಎದುರೇ ಯುವತಿ ಶೂಟೌಟ್​: ಮತಾಂತರಕ್ಕೆ ಒಪ್ಪದ್ದಕ್ಕೆ ನಡೆದ ಕೊಲೆ?

ಅಯ್ಯೋ… ವಿಡಿಯೋದಲ್ಲಿ ಇರುವುದು ನಾನಲ್ಲ: ಕೊಡಗು ಜಿಲ್ಲಾಧಿಕಾರಿ ಅನೀಸ್​

ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…
Sign in to your account
Please enter an answer in digits:twenty − seventeen =
Remember me
