ಮಂಗಳೂರು:ಕರಾವಳಿಯ ಏಳು ಪ್ರಮುಖ ಜಾತ್ರೆಗಳ ಪೈಕಿ ಒಂದಾಗಿರುವ ಕಾಪು ಮಾರಿ ಜಾತ್ರೆ ಸೇರಿದಂತೆ ಮಂಗಳೂರಿನ ಜಾತ್ರೆಯಲ್ಲಿ ಹಿಂದೂ ವ್ಯಾಪಾರಸ್ಥರಿಗೆ ಮಾತ್ರ ಅನುಮತಿ ನೀಡಲಾಗಿದ್ದು, ಇದೀಗ ಭಾರಿ ವಿವಾದ ಸೃಷ್ಟಿಸಿದೆ.
30 ಕೋಟಿ ರೂಪಾಯಿಗೂ ಅಧಿಕ ವಹಿವಾಟು ನಡೆಯುವ ಕಾಪು ಜಾತ್ರೆಯಲ್ಲಿ ಹಿಂದೂಯೇತರ ವ್ಯಾಪಾರಸ್ಥರಿಗೆ ಅಂಗಡಿ ಕೊಡದಿರಲು ನಿರ್ಧರಿಸಲಾಗಿದೆ. ಹೈಕೋರ್ಟ್‌ ತೀರ್ಪು ನೀಡಿದ ನಂತರವೂ ಹಿಜಾಬ್ ವಿರುದ್ಧ ಪ್ರತಿಭಟನೆ ಮಾಡುತ್ತಿರುವವರಿಗೆ ತಿರುಗೇಟು ಇದು ಎಂದು ಸ್ಥಳೀಯ ವ್ಯಾಪಾರಸ್ಥರು ಹೇಳುತ್ತಿದ್ದಾರೆ.
ಅದೇ ಇನ್ನೊಂದೆಡೆ, ಮಂಗಳೂರಿನಲ್ಲೂ ದೇವಸ್ಥಾನಗಳ ಜಾತ್ರೋತ್ಸವದಲ್ಲಿ ಹಿಂದೂಯೇತರರಿಗೆ ಅವಕಾಶ ನೀಡಲಿಲ್ಲ. ಮಂಗಳಾದೇವಿ ದೇವಸ್ಥಾನ, ಬಪ್ಪನಾಡು ದುರ್ಗಾಪರಮೇಶ್ವರಿ ದೇವಸ್ಥಾನಗಳ ಜಾತ್ರೋತ್ಸವಗಳಲ್ಲಿ ಹಿಂದೂಯೇತರರಿಗೆ ವ್ಯಾಪಾರಕ್ಕೆ ಅವಕಾಶ ಇಲ್ಲ ಎಂಬ ನಿರ್ಧಾರ ಮಾಡಲಾಗಿದ್ದು, ಈ ಸಂಬಂಧ ದೇವಸ್ಥಾನಗಳ ಮುಂಭಾಗ ಬ್ಯಾನರ್ ಅಳವಡಿಕೆ ಮಾಡಲಾಗಿದೆ.
ಜಾತ್ರೋತ್ಸವದಲ್ಲಿ ಹಿಂದೂಯೇತರರಿಗೆ ವ್ಯಾಪಾರಕ್ಕೆ ಅವಕಾಶ ಇಲ್ಲ. ಸಂವಿಧಾನಕ್ಕೆ ವಿರುದ್ಧವಾದವರಿಗೆ, ಗೋ ಕಟುಕರಿಗೆ ವ್ಯಾಪಾರಕ್ಕೆ ಅವಕಾಶ ಇಲ್ಲ ಎಂಬ ಬ್ಯಾನರ್ ಇಲ್ಲಿ ಹಾಕಲಾಗಿದೆ.
ಕಾಪು ವ್ಯವಸ್ಥಾಪನಾ ಮಂಡಳಿ ಅಧ್ಯಕ್ಷ ರಮೇಶ್ ಹೆಗಡೆ, ‘ನಾವು ಯಾವುದೇ ಕಾಯ್ದೆ- ಕಾನೂನು ಉಲ್ಲಂಘನೆ ಮಾಡುತ್ತಿಲ್ಲ. ಮುಜರಾಯಿ ಕಾಯ್ದೆ ನಿಯಮಾವಳಿಯಲ್ಲಿರುವ ಅಂಶವನ್ನೇ ಜಾರಿಗೊಳಿಸಿದ್ದೇವೆ. ದೇವಾಲಯದ ಪರಿಸರದಲ್ಲಿ ಹಿಂದೂಯೇತರರಿಗೆ ಜಾಗ ಗುತ್ತಿಗೆ ನೀಡಲು ಅವಕಾಶವಿಲ್ಲ. ಇದೇ ನಿಯಮಾವಳಿ ಪ್ರಕಾರ ನಾವು ಕ್ರಮ ಕೈಗೊಂಡಿದ್ದೇವೆ’ ಎಂದು ಹೇಳಿದ್ದಾರೆ.

ಆಡಳಿತ ಮಂಡಳಿಯ ತೀರ್ಮಾನದಿಂದ ಮಂಗಳೂರಿನ ಮುಸ್ಲಿಂ ವ್ಯಾಪಾರಿಗಳಿಗೆ ಆಘಾತವಾಗಿದೆ. ಪ್ರತಿವರ್ಷ ನೂರಾರು ಮುಸ್ಲಿಂ ವ್ಯಾಪಾರಿಗಳಿಗೆ ಮಾರಿಜಾತ್ರೆ ಆದಾಯ ಒದಗಿಸುತ್ತಿದೆ. ನಾವು ಯಾವುದೇ ರೀತಿಯ ಹಿಜಾಬ್‌ ಹೋರಾಟದಲ್ಲಿ ಭಾಗವಹಿಸಿಲ್ಲ, ನಮಗೆ ದೇವಾಲಯದ ಆವರಣದಲ್ಲಿ ಶಾಂತಿ ಪೂರ್ವಕವಾಗಿ ವ್ಯಾಪಾರ ನಡೆಸುತ್ತಿದ್ದೆವು. ನಾವು ಹಿಂದೂಗಳ ಜೊತೆ ಸಾಮರಸ್ಯ ಬಯಸುತ್ತೇವೆ. ದಯವಿಟ್ಟು ನಮಗೆ ವ್ಯಾಪಾರ ಮಾಡಲು ಅವಕಾಶ ಕೊಡಿ ಎಂದು ಪತ್ರಿಕಾಗೋಷ್ಠಿಯಲ್ಲಿ ಮುಸ್ಲಿಂ ವ್ಯಾಪಾರಸ್ಥರು ಅಳಲು ತೋಡಿಕೊಂಡಿದ್ದಾರೆ.
ಮಂಗಳೂರಿನ ಜಾತ್ರಾ ಜಾಗದಲ್ಲಿ ಬ್ಯಾನರ್‌ನಲ್ಲಿ ಬರೆದಿರುವ ಬರಹಗಳನ್ನು ಗಂಭೀರವಾಗಿ ಪರಿಗಣಿಸಿರುವ ಮಂಗಳೂರು ನಗರ ಪೊಲೀಸ್ ಕಮೀಷನರ್ ಎನ್ ಶಶಿಕುಮಾರ್, ‘ಈ ಸಂಬಂಧ ದೇವಸ್ಥಾನದ ಆಡಳಿತ ಮಂಡಳಿ, ತಹಶಿಲ್ದಾರ್ ಜೊತೆ ಮಾತನಾಡಿದ್ದೇವೆ. ಬ್ಯಾನರ್ ಯಾರು ಹಾಕಿದ್ದಾರೆ ಎಂಬುದರ ಬಗ್ಗೆ ತನಿಖೆ ಮಾಡುತ್ತೇವೆ. ಆಡಳಿತ ಮಂಡಳಿ ಈ ಬಗ್ಗೆ ದೂರು ನೀಡಿದರೆ ಕಾನೂನು ಕ್ರಮ ಕೈಗೊಳ್ಳುತ್ತೇವೆ. ಈ ಬಗ್ಗೆ ಕಾನೂನು ತಜ್ಞರ ಬಳಿ ಮಾಹಿತಿ ಕೇಳಿದ್ದೇವೆ ಎಂದಿದ್ದಾರೆ. ಬಪ್ಪನಾಡು ಆಡಳಿತ ಮಂಡಳಿ ನಿಯಮದ ಪ್ರಕಾರ ಹಿಂದೂಯೇತರರಿಗೆ ವ್ಯಾಪಾರಕ್ಕೆ ಅವಕಾಶ ಇಲ್ಲ ಎಂದು ಹೇಳಲಾಗಿದೆ ಎಂದೂ ಅವರು ಮಾಹಿತಿ ನೀಡಿದ್ದಾರೆ.
ಹಿಜಾಬ್‌ ಕೇಸ್‌- ಬಂದ್‌ಗೆ ಕರೆ ನೀಡಿದವರ ವಿರುದ್ಧ ನ್ಯಾಯಾಂಗ ನಿಂದನೆ ತೂಗುಕತ್ತಿ! ಹೈಕೋರ್ಟ್‌ಗೆ ವಕೀಲರಿಂದ ಅರ್ಜಿ
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:two × 3 =
Remember me
