ಬೆಳಗಾವಿ:ಬೆಳಗಾವಿಯ ಮಂದಿಗೆ ಕಳೆದ 25 ದಿನಗಳಿಂದ ನಿದ್ದೆಗೆಡಿಸುತ್ತಿರುವ ಚಿರತೆಯನ್ನು ಸೆರೆ ಹಿಡಿಯಲು ಅರಣ್ಯ ಇಲಾಖೆ ವಿಫಲವಾಗಿದೆ. 25ನೇ ದಿನವೂ ಚಿರತೆ ಶೋಧಕಾರ್ಯ ಮುಂದುವರೆದಿದೆ.
ಏನಾಲ್ಲಾ ಸರ್ಕಸ್​ ಮಾಡಿದರೂ ಸಿಬ್ಬಂದಿಗೆ ಚಿರತೆಯನ್ನು ಮಾತ್ರ ಹಿಡಿಯಲು ಸಾಧ್ಯವಾಗುತ್ತಿಲ್ಲ. ಚಿರತೆಗಾಗಿ ಇದಾಗಲೇ ಹಲವಾರು ದಿನಗಳಿಂದ ಶಾಲೆಗಳಿಗೆ ರಜೆಯನ್ನೂ ಘೋಷಿಸಲಾಗಿದೆ. ಇತ್ತ ಚಿರತೆ ಸಿಗುತ್ತಿಲ್ಲ, ಅತ್ತ ಮಕ್ಕಳಿಗೆ ಪಾಠ ಆಗುತ್ತಿಲ್ಲ ಎನ್ನುವ ಸ್ಥಿತಿ ಬೆಳಗಾವಿ ಮಂದಿಯದ್ದಾಗಿದೆ, ಜತೆಗೆ ಆಗಾಗ್ಗೆ ಕಾಣಿಸಿಕೊಳ್ಳುವ ಚಿರತೆಯಿಂದಾಗಿ ಓಡಾಡುವುದೂ ಕಷ್ಟ ಎನ್ನುವ ಸ್ಥಿತಿ ನಿರ್ಮಾಣವಾಗಿದೆ.
ಇದಾಗಲೇ ಅರಣ್ಯ ಇಲಾಖೆ ಸಾಧ್ಯವಾದಷ್ಟು ರೀತಿಯ ಯೋಜನೆ ರೂಪಿಸಿದರೂ ಅದು ಫಲಪ್ರದವಾಗಲಿಲ್ಲ. ಈ ಹಿನ್ನೆಲೆಯಲ್ಲಿ ಚಾಲಾಕಿ ಚಿರತೆ ಶೋಧಕ್ಕಾಗಿ ಅರಣ್ಯ ಇಲಾಖೆ ಪ್ಲ್ಯಾನ್ ಬದಲಾವಣೆ ಮಾಡಿದೆ. ಎರಡು ದಿನ ಕೇವಲ ಆಪರೇಷನ್ ಗಜಪಡೆ ನಡೆಸಲು ನಿರ್ಧಾರ ಮಾಡಿದೆ.
ಚಿರತೆಗೆ ಡಿಸ್ಟರ್ಬ್ ಮಾಡದೇ ಸೆರೆಹಿಡಿಯಲು ಯೋಜನೆ ರೂಪಿಸಲಾಗಿದೆ. ಇಷ್ಟು ದಿನ ಅಳವಡಿಸಿದ್ದ ಸ್ಥಳ ಬಿಟ್ಟು ಬೋನು, ಟ್ರ್ಯಾಪ್ ಕ್ಯಾಮೆರಾ ಬೇರೆ ಸ್ಥಳದಲ್ಲಿ ಅಳವಡಿಕೆ ಮಾಡಲು ಸಿದ್ಧತೆ ನಡೆಸಲಾಗಿದೆ. 8 ಸಾಮಾನ್ಯ ಬೋನು,1 ದೊಡ್ಡದಾದ ಬೋನು, 23 ಟ್ರ್ಯಾಪ್ ಕ್ಯಾಮೆರಾಗಳ ಅಳವಡಿಕೆ ಮಾಡಲಾಗುತ್ತಿದೆ.
ಕೋಂಬಿಂಗ್ ವೇಳೆ ಚಿರತೆಯ ಹೆಜ್ಜೆ ಗುರುತು ಪತ್ತೆಯಾದ ಹಿನ್ನೆಲೆಯಲ್ಲಿ ಆ ಜಾಗದಸುತ್ತಮುತ್ತ ಟ್ರ್ಯಾಪ್ ಕ್ಯಾಮೆರಾ, ಬೋನುಗಳ ಅಳವಡಿಕೆ ಮಾಡುವ ಯೋಜನೆಯನ್ನು ಅರಣ್ಯ ಇಲಾಖೆ ರೂಪಿಸಿದೆ. ಟ್ರ್ಯಾಪ್ ಕ್ಯಾಮೆರಾ ಬೋನುಗಳನ್ನು ಶಿಫ್ಟ್ ಮಾಡುತ್ತೇವೆ. ಆದಷ್ಟು ಚಿರತೆಯನ್ನು ಸೆರೆ ಹಿಡಿಯುವ ಪ್ರಯತ್ನ ಮಾಡುತ್ತಿದ್ದೇವೆ. ನಿನ್ನೆ ಹೆಜ್ಜೆ ಗುರುತುಗಳು ಪತ್ತೆಯಾಗಿದೆ ಎಂದು ಸಿಬ್ಬಂದಿ ಹೇಳಿದ್ದಾರೆ.
250 ಎಕರೆ ಪ್ರದೇಶದಲ್ಲಿಯೇ ಚಿರತೆ ಇರುವ ಶಂಕೆ ವ್ಯಕ್ತವಾಗಿದೆ. ಈ ನಡುವೆಯೇ ಶಾಲೆ ಇನ್ನೂ ಆರಂಭ ಮಾಡಲಿಲ್ಲ. ಗಾಲ್ಫ್ ಮೈದಾನ ಸುತ್ತ ಬಿಗಿ ಭದ್ರತೆ ಒದಗಿಸಿ ಶಾಲೆ ಆರಂಭಿಸುವ ವಿಚಾರದ ಕುರಿತು ಜಿಲ್ಲಾಧಿಕಾರಿಗಳು ತಗೆದುಕೊಳ್ಳಬೇಕು ಎಂದು ಡಿಎಫ್ಒ ಆ್ಯಂಥೋನಿ ಮರಿಯಪ್ಪ ಹೇಳಿಕೆ ನೀಡಿದ್ದಾರೆ. (ದಿಗ್ವಿಜಯ ನ್ಯೂಸ್​)
ಸ್ವೀಟ್​ ಪ್ರಿಯರೇ, ತಿನಿಸು ತಿನ್ನುವಾಗ ಇರಲಿ ಎಚ್ಚರ: ವ್ಯಕ್ತಿಯ ಪ್ರಾಣವನ್ನೇ ತೆಗೆದ ಕೇರಳ ಹಲ್ವಾ!
ಚಿತ್ರದುರ್ಗದ ವಿದ್ಯಾರ್ಥಿನಿಗೆ ಪ್ರತಿಷ್ಠಿತ ಏಕಲವ್ಯ ಪ್ರಶಸ್ತಿ; ಬೆಂಗಳೂರಿನಲ್ಲಿ ಇಂದು ಪ್ರದಾನ
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:15 − 7 =
Remember me
