ಚಿತ್ರದುರ್ಗ:ಪೇಂಟ್​ ಡಬ್ಬಗಳನ್ನು ತುಂಬಿಕೊಂಡು ಹೋಗುತ್ತಿದ್ದ ಲಾರಿಗೆ ಮತ್ತೊಂದು ಲಾರಿ ಡಿಕ್ಕಿಯಾದ ಪರಿಣಾಮವಾಗಿ ಲಾರಿ ಹೊತ್ತಿ ಉರಿದ ಘಟನೆ ಹಿರಿಯೂರು ತಾಲೂಕು ಗೊರಲಡುಕು ಬಳಿ ನಡೆದಿದೆ.
ಮುಂದೆ ಚಲಿಸುತ್ತಿದ್ದ ಕಂಟೇನರ್ ಲಾರಿಗೆ ಹಿಂಬದಿಯಿಂದ ಬಂದ ಪೇಂಟ್ ತುಂಬಿದ್ದ ಲಾರಿ ಡಿಕ್ಕಿ ಹೊಡೆದ ಪರಿಣಾಮವಾಗಿ ಬೆಂಕಿ ಹೊತ್ತಿಕೊಂಡಿದೆ. ಹಿರಿಯೂರು ತಾಲ್ಲೂಕಿನ ಜವನಗೊಂಡನಹಳ್ಳಿ – ಗೋರಲಡುಕು ಸಮೀಪದ ಓಂ ಶಕ್ತಿ ಹೋಟೆಲ್ ಹತ್ತಿರ ರಾಷ್ಟ್ರೀಯ ಹೆದ್ದಾರಿ ಬಳಿ ನಿನ್ನೆ ತಡರಾತ್ರಿ ಈ ಘಟನೆ ಸಂಭವಿಸಿದೆ.
ಅದೃಷ್ಟವಶಾತ್ ಲಾರಿ ಚಾಲಕ ಹಾಗೂ ಕ್ಲೀನರ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ.ಲಾರಿ ಹೊತ್ತಿ ಉರಿಯುತ್ತಿದ್ದಂತೆ ಲಾರಿ, ಚಾಲಕ ಜಿಗಿದ ಹಿನ್ನೆಲೆಯಲ್ಲಿ ಅವರು ಪಾರಾಗಿದ್ದಾರೆ.
ಇದನ್ನೂ ಓದಿ:ಮಧ್ಯರಾತ್ರಿ ನಡುಗಿದ ಅರುಣಾಚಲ ಪ್ರದೇಶದ ಚಾಂಗ್ಲಾಂಗ್: ಭೂಮಿಯ ಕಂಪನಕ್ಕೆ ಜನರು ತತ್ತರ
ಬೆಂಗಳೂರು ಕಡೆಯಿಂದ ಹುಬ್ಬಳ್ಳಿ ಕಡೆಗೆ ಪೇಂಟ್ ತುಂಬಿಕೊಂಡಿದ್ದ ಲಾರಿ ಹೋಗುತ್ತಿತ್ತು. ಡಿಕ್ಕಿಯ ರಭಸಕ್ಕೆ ಲಾರಿಯ ಮುಂಭಾಗ ಸಂಪೂರ್ಣ ಜಖಂಗೊಂಡಿದ್ದು, ಬೆಂಕಿ ಹೊತ್ತುಕೊಂಡಿದೆ. ಪೇಂಟ್ ಬಾಕ್ಸ್ ಗಳು ರಸ್ತೆಯಲ್ಲಿ ಬಿದ್ದಿವೆ ಎಂದು ಪೊಲೀಸರು ತಿಳಿಸಿದ್ದಾರೆ.
ಸ್ಥಳಕ್ಕೆ ಅಗ್ನಿಶಾಮಕ ದಳ ತೆರಳಿ ಉರಿಯುವ ಬೆಂಕಿಯನ್ನು ನಂದಿಸಿದ್ದಾರೆ. ಹಿರಿಯೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.
ಅಮ್ಮಾ ನನ್ನನ್ನು ಕ್ಷಮಿಸಿಬಿಡು… ನಾನು ಬದುಕಿದ್ದರೆ ಅವನಿಂದ ನಿಮಗೆ ಬರೀ ಹಿಂಸೆ…

https://www.vijayavani.net/law-student-slams-for-sale-movie-after-her-scenes-land-in-porn-websites/
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:19 − 19 =
Remember me
