ಬೆಂಗಳೂರು:ವಿಧಾನಪರಿಷತ್​ನ ಏಳು ಸ್ಥಾನಗಳಿಗೆ ನಡೆಯುವ ಚುನಾವಣೆಗೆ ಸೋಮವಾರ ಸಂಜೆ ಅಭ್ಯರ್ಥಿಗಳನ್ನು ಅಂತಿಮಗೊಳಿಸಿರುವ ಕಾಂಗ್ರೆಸ್, ಅಬ್ದುಲ್ ಜಬ್ಬಾರ್ ಹಾಗೂ ನಾಗರಾಜ್ ಯಾದವ್ ಅವರ ಹೆಸರನ್ನು ಅಂತಿಮಗೊಳಿಸಿದೆ. ಇದು ಕಾಂಗ್ರೆಸ್​ ವಲಯದಲ್ಲಿ ಸಾಕಷ್ಟು ಅಸಮಾಧಾನಕ್ಕೆ ಗುರಿಯಾಗಿದೆ.
ವಿಧಾನಸಭೆಯ ಬಲಾಬಲದ ಆಧಾರದಲ್ಲಿ ಕಾಂಗ್ರೆಸ್ ಎರಡು ಸ್ಥಾನ ಗೆಲ್ಲಲಷ್ಟೇ ಸಾಧ್ಯ. ಹೀಗಾಗಿ ಇಬ್ಬರ ಹೆಸರನ್ನು ಮಾತ್ರ ಅಂತಿಮಗೊಳಿಸಿದೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹಾಗೂ ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರನ್ನು ದೆಹಲಿಗೆ ಕರೆಸಿಕೊಂಡ ಪಕ್ಷದ ವರಿಷ್ಠರು ಆಕಾಂಕ್ಷಿಗಳ ಬಗ್ಗೆ ಚರ್ಚೆ ನಡೆಸಿ, ತಾವು ಮುಂದಿನ ತೀರ್ಮಾನ ಕೈಗೊಳ್ಳುವುದಾಗಿ ಹೇಳಿದ್ದರು. ಅದರಂತೆ ಸೋಮವಾರ ಸಂಜೆ ಅಬ್ದುಲ್ ಜಬ್ಬಾರ್ ಹಾಗೂ ನಾಗರಾಜ್ ಯಾದವ್ ಅವರ ಹೆಸರನ್ನು ಅಂತಿಮಗೊಳಿಸಲಾಗಿದೆ.
ಆದರೆ ಇದೀಗ ಪಕ್ಷದಲ್ಲಿ ಇನ್ನಿಲ್ಲದ ಆಕ್ರೋಶಕ್ಕೆ ಕಾರಣವಾಗಿದೆ. ಮಾಜಿ ಸಚಿವರು, ಹಿರಿಯ ಕಾಂಗ್ರೆಸ್ ನಾಯಕರು ಈ ಸೀಟಿಗಾಗಿ ಹಲವಾರು ರೀತಿಯಲ್ಲಿ ಪ್ರಯತ್ನಿಸಿದ್ದರು. ಅವರಿಗೆ ಸೀಟು ಸಿಗಲಿಲ್ಲ. ಕೊನೆಯ ಪಕ್ಷ ಮಹಿಳೆಯರಿಗಾದರೂ ಸೀಟು ಕೊಡಬಹುದಿತ್ತು ಎಂದು ಆಕ್ರೋಶ ವ್ಯಕ್ತವಾಗುತ್ತಿದೆ.
ಇದಕ್ಕೆ ಕಾರಣ, ಈ ಹಿಂದೆ ಮೂವರು ಮಹಿಳಾ ಸದಸ್ಯರನ್ನು ಹೊಂದಿದ್ದ ಕಾಂಗ್ರೆಸ್ ಇದೀಗ ಒಬ್ಬರನ್ನೂ ಹೊಂದಿಲ್ಲ. ಪರಿಷತ್ ಸ್ಥಾನದಿಂದ ನಿರ್ಗಮಿಸುತ್ತಿರುವ ಮೂವರಲ್ಲಿ ಒಬ್ಬ ಮಹಿಳಾ ಸದಸ್ಯೆ ಇದ್ದು, ಕನಿಷ್ಠ ಅವರನ್ನಾದರೂ ಮರು ಆಯ್ಕೆ ಮಾಡಬಹುದು ಇಲ್ಲವೇ, ಬೇರೊಬ್ಬ ಮಹಿಳಾ ಪ್ರತಿನಿಧಿಗೆ ಅವಕಾಶ ನೀಡಬಹುದಾಗಿತ್ತು. ಆದರ ಮಹಿಳೆಯರ ಬದಲು ಮತ್ತೆ ಮತ್ತೆ ಅಲ್ಪಸಂಖ್ಯಾತ ಮುಸಲ್ಮಾನರಿಗೆ ಮಣೆ ಹಾಕುತ್ತಿರುವುದು ಸರಿಯಲ್ಲ ಎಂದು ಕಿಡಿ ಕಾರುತ್ತಿದ್ದಾರೆ. ಈಗಾಗಲೇ ಅಧಿಕಾರವನ್ನು ಅನುಭವಿಸಿದವರಿಗೆ ಮತ್ತೊಮ್ಮೆ ಅವಕಾಶ ನೀಡಿರುವುದು ಎಷ್ಟು ಸರಿ ಎಂದು ಪಕ್ಷದೊಳಗೆ ಭಾರಿ ಚರ್ಚೆಯಾಗುತ್ತಿದೆ ಎನ್ನಲಾಗುತ್ತಿದೆ.
ಅಂತಿಮವಾಗಿ ಬಿ.ಎಲ್.ಶಂಕರ್, ಸುದರ್ಶನ್, ವಿ.ಎಸ್.ಉಗ್ರಪ್ಪ, ಆರ್.ಬಿ.ತಿಮ್ಮಾಪುರ, ಪುಷ್ಪಾ ಅಮರನಾಥ್, ಐವಾನ್ ಡಿಸೋಜ, ಮನ್ಸೂರ್, ಅಬ್ದುಲ್ ಜಬ್ಬಾರ್, ಮನೋಹರ್, ಎಂ.ಆರ್. ಸೀತಾರಾಮ್ ನಿವೇದಿತ್ ಆಳ್ವ, ಎಸ್.ಆರ್.ಪಾಟೀಲ್ ಹೆಸರು ಚರ್ಚೆಗೆ ಬಂದಿತ್ತು. ಆದರೆ ಇದರಲ್ಲಿ ಅಬ್ದುಲ್ ಜಬ್ಬಾರ್ ಹಾಗೂ ನಾಗರಾಜ್ ಯಾದವ್ ಅವರ ಹೆಸರನ್ನು ಅಂತಿಮಗೊಳಿಸಲಾಗಿದೆ.
ಬಿ.ವೈ. ವಿಜಯೇಂದ್ರಗೆ ಬಿಗ್​ ಶಾಕ್​ ಕೊಟ್ಟ ಬಿಜೆಪಿ ಹೈಕಮಾಂಡ್​

VIDEO: ಟೋಕಿಯೋದಲ್ಲಿ ಪ್ರಧಾನಿ: ಬಾಲಕನ ಮಾತಿಗೆ ಮನಸೋತು, ಇದನ್ನು ಹೇಗೆ ಕಲಿತೆ ಎಂದ ಮೋದಿ..

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:2 × one =
Remember me
