ಮೈಸೂರು:ನಟಿ ಪವಿತ್ರಾ ಲೋಕೇಶ್​ ಮೂರನೆ ಮದುವೆಯಾಗಿದ್ದಾರೆ ಎಂಬ ಸುದ್ದಿ ಎಲ್ಲೆಡೆ ಹರಿದಾಡುತ್ತಿದೆ. ಆದರೆ ಈ ಬಗ್ಗೆ ಇನ್ನೂ ಯಾವುದೇ ನಿಖರ ಮಾಹಿತಿ ಇಲ್ಲ. ಈ ನಡುವೆಯೇ ಪವಿತ್ರಾ ಅವರು ಮೈಸೂರಿನ ಸೈಬರ್​ ಕ್ರೈಂ ಠಾಣೆಗೆ ದೂರು ನೀಡಿದ್ದಾರೆ.
ಇದಕ್ಕೆ ಕಾರಣ, ಅಪರಿಚಿತ ವ್ಯಕ್ತಿಯೊಬ್ಬ ಪವಿತ್ರಾ ಹೆಸರಿನಲ್ಲಿ ನಕಲಿ ಫೇಸ್​ಬುಕ್ ಖಾತೆ ತೆರೆದು, ಆಶ್ಲೀಲ ಸಂದೇಶಗಳನ್ನು ಕಳಿಸುತ್ತಿದ್ದಾರಂತೆ. ತಮ್ಮ ಹೆಸರಿಗೆ ಕಳಂಕ ತಂದು ತೇಜೋವಧೆ ಮಾಡಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಆ ವ್ಯಕ್ತಿಯ ವಿರುದ್ಧ ಕ್ರಮ ತೆಗೆದುಕೊಳ್ಳಬೇಕು ಎಂದು ಪವಿತ್ರಾ ಮೈಸೂರಿನ ಸೈಬರ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡಿರುವ ಸೈಬರ್ ಠಾಣೆ ಪೊಲೀಸರು ನಕಲಿ ಖಾತೆ ಮೂಲಕ ಸುಳ್ಳು ಸುದ್ದಿ ಹರಡುತ್ತಿರುವ ವ್ಯಕ್ತಿಯ ಪತ್ತೆಗೆ ಬಲೆ ಬೀಸಿದ್ದಾರೆ.
ಕನ್ನಡ ಮತ್ತು ತೆಲುಗು ಚಿತ್ರರಂಗ ಸೇರಿದಂತೆ ಧಾರಾವಾಹಿಗಳ ಮೂಲಕ ಅತ್ಯಂತ ಜನಪ್ರಿಯರಾಗಿರುವ ನಟಿ ಪವಿತ್ರಾ, ಇಂದಿಗೂ ಅದೇ ಒಳ್ಳೆಯ ಹೆಸರನ್ನು ಉಳಿಸಿಕೊಂಡವರು. ಇತ್ತೀಚೆಗೆ ಅವರು ತಮ್ಮ ಎರಡನೆಯ ಪತಿಯಿಂದ ದೂರವಾಗಿ ಮೂರನೆಯ ವಿವಾಹವಾಗಿದ್ದಾರೆ ಎಂಬ ಗಾಳಿಸುದ್ದಿ ಹರಡಿತ್ತು. ಇದರ ನಡುವೆಯೇ ಅಪರಿಚಿತ ವ್ಯಕ್ತಿಯೊಬ್ಬ ಸಾಮಾಜಿಕ ಜಾಲತಾಣದಲ್ಲಿ ನಕಲಿ ಖಾತೆ ರಚಿಸಿ, ಇಲ್ಲಸಲ್ಲದ ಪೋಸ್ಟ್​ಗಳನ್ನು ಮಾಡುವುದೂ ಅಲ್ಲದೇ, ಸಂದೇಶ ಕಳುಹಿಸುತ್ತಿರುವುದು ಬೆಳಕಿಗೆ ಬಂದಿದೆ. ವ್ಯಕ್ತಿಯ ವಿರುದ್ಧ ಎಫ್​ಐಆರ್​ ದಾಖಲಾಗಿದ್ದು, ತನಿಖೆ ನಡೆಸುತ್ತಿದ್ದಾರೆ.
VIDEO: ಹಲೋ… ನನಗೀಗ ಒಂದು ತಿಂಗಳು, ನನ್ನ ಪರಿಚಯ ಹೀಗಿದೆ… ಇನ್​ಸ್ಟಾಗ್ರಾಂನಲ್ಲಿ ಹೆಸರು ರಿವೀಲ್​ ಮಾಡಿದ ಸಂಜನಾ ಪುತ್ರ…

ಇ.ಡಿ ಡ್ರಿಲ್​: ರಾಹುಲ್​ ಪರ ಟ್ವೀಟ್​ ಮಾಡಿ ಸಂಕಷ್ಟಕ್ಕೆ ಸಿಲುಕಿದ ನಟಿ ರಮ್ಯಾ: ಕಮೆಂಟಿಗರು ಮಾಡಿದರು ‘ಚಾರ್ಟ್’​ ಪಾಠ!

‘ಮಹಾ’ ಸರ್ಕಾರದ ಬಿಕ್ಕಟ್ಟಿನ ನಡುವೆಯೇ ಹಂಗಾಮಾ ಸೃಷ್ಟಿಸಿದ ಸಚಿವನ ‘ಪತ್ನಿ’: ಪರಪುರುಷನ ಜತೆ ಲಾಡ್ಜ್​ನಲ್ಲಿ ಅರೆಸ್ಟ್​!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:5 + twelve =
Remember me
