ಬೆಂಗಳೂರು:ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಸಿಬಿಎಸ್‍ಇ ಪಠ್ಯಕ್ರಮದ ಪಿಸಿಎಂಬಿ ಪುಸ್ತಕಗಳು ಇದೇ ಮೊದಲ ಬಾರಿಗೆ ಕನ್ನಡದಲ್ಲಿ ಲಭ್ಯ ಇದೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್‍ಕುಮಾರ್ ತಿಳಿಸಿದ್ದಾರೆ.‌
ಇಲ್ಲಿಯವರೆಗೆ ಈ ಪುಸ್ತಕ ಇಂಗ್ಲಿಷ್‍ನಲ್ಲಿ ಇತ್ತು. ಈ ಹಿನ್ನೆಲೆಯಲ್ಲಿ ಕನ್ನಡ ಮಾಧ್ಯಮದಲ್ಲಿ ಅಭ್ಯಸಿಸುವ ವಿದ್ಯಾರ್ಥಿಗಳಿಗಾಗುವ ತೊಂದರೆಯಾಗುತ್ತಿತ್ತು. ಇದನ್ನು ನೀಗಿಸುವ ಸಲುವಾಗಿ ಎನ್ಇಎಸ್ಆರ್‌ಟಿಸಿ ಪುಸ್ತಕಗಳನ್ನು ಕನ್ನಡಕ್ಕೆ ಭಾಷಾಂತರಿಸಿದೆ ಎಂದು ಅವರು ಹೇಳಿದರು.
ಪಿಸಿಎಂಬಿ ಸಂಯೋಜನೆಯ ವಿದ್ಯಾರ್ಥಿಗಳಿಗೆ ಕನ್ನಡ ಮಾಧ್ಯಮದ ಪುಸ್ತಕಗಳು ಇಲ್ಲವಾದ್ದರಿಂದ ಅವರು ಇಷ್ಟವಿಲ್ಲದಿದ್ದರೂ ಇಂಗ್ಲಿಷ್‍ನಲ್ಲೇ ಬರೆಯಬೇಕಿತ್ತು. ಈಗ ಪುಸ್ತಕಗಳು ಕನ್ನಡ ಮಾಧ್ಯಮದಲ್ಲಿ ದೊರೆಯುವ ಅವಕಾಶವಾಗಿರುವುದರಿಂದ ಪಿಸಿಎಂಬಿ ವಿದ್ಯಾರ್ಥಿಗಳೂ ಇನ್ನು ಮುಂದೆ ಕನ್ನಡದಲ್ಲಿ ಬರೆಯಬಹುದಾಗಿದೆ.
ಇಂದು ಪಿಯು ಇಲಾಖೆಯ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಪಿಸಿಎಂಬಿ ಪಠ್ಯಗಳ ಕನ್ನಡ ಅವತರಣಿಕೆಗಳನ್ನು ಬಿಡುಗಡೆ ಮಾಡಿ ಮಾತನಾಡಿದ ಸುರೇಶ್‌ ಕುಮಾರ್‌, ಕನ್ನಡ ಮಾಧ್ಯಮದಲ್ಲಿ ಹತ್ತನೇ ತರಗತಿ ಉತ್ತೀರ್ಣರಾಗಿ ಪಿಯುಸಿಯಲ್ಲಿ ವಿಜ್ಞಾನ ಸಂಯೋಜನೆಗೆ ದಾಖಲಾಗುವ ವಿದ್ಯಾರ್ಥಿಗಳಿಗೆ ಅನುಕೂಲವಾಗುವಂತೆ ಕನ್ನಡ ಅವತರಣಿಕೆಗಳನ್ನು ಇಂದು ಬಿಡುಗಡೆ ಮಾಡಲಾಗಿದ್ದು, ಇಲಾಖೆಯಲ್ಲಿ ಇದೊಂದು ಅತ್ಯಂತ ಪ್ರಮುಖ ಪ್ರಯತ್ನವಾಗಿದೆ ಎಂದರು.
ಇದನ್ನೂ ಓದಿ:ಮದುವೆ ಉಡುಗೊರೆಯಿಂದ ಸಿಕ್ಕಿಬಿದ್ಲು ಜರ್ಮನ್‌ ಭಯೋತ್ಪಾದಕಿ!
ಭೌತಶಾಸ್ತ್ರ, ರಸಾಯನಶಾಸ್ತ್ರ, ಗಣಿತಶಾಸ್ತ್ರ ಮತ್ತು ಜೀವಶಾಸ್ತ್ರ ವಿಷಯಗಳಿಗೆ ಒಂದೊಂದರಂತೆ 4 ವಿವಿಧ ಸಮಿತಿಗಳನ್ನು ರಚಿಸಿ ಪಠ್ಯವನ್ನು ಪೂರ್ಣವಾಗಿ ಕನ್ನಡಕ್ಕೆ ಭಾಷಾಂತರಿಸಿ ಪುನರ್ ಪರಿಶೀಲಿಸಿ ಮುದ್ರಣ ಕಾರ್ಯವನ್ನು ಪೂರ್ಣಗೊಳಿಸಿದೆ. ರಾಜ್ಯದ 650 ಸರ್ಕಾರಿ ಪದವಿ ಪೂರ್ವ ಕಾಲೇಜುಗಳ ಗ್ರಂಥಾಲಯಗಳಿಗೆ ಒಂದು ಸೆಟ್ ಪುಸ್ತಕಗಳನ್ನು ಉಚಿತವಾಗಿ ಒದಗಿಸಲಾಗುತ್ತದೆ ಎಂದು ಸಚಿವರು ಹೇಳಿದರು.
ಅನುದಾನಿತ ಮತ್ತು ಅನುದಾನ ರಹಿತ ಕಾಲೇಜುಗಳ ಗ್ರಂಥಾಲಯಗಳಿಗೆ ಹಾಗೂ ಆಸಕ್ತರಿಗೆ ಈ ಪುಸ್ತಕಗಳನ್ನು ಸರ್ಕಾರಿ ಮುದ್ರಣಾಲಯದಲ್ಲಿ ಖರೀದಿಸಲು ವ್ಯವಸ್ಥೆ ಮಾಡಲಾಗಿದೆ. ಇದರಿಂದ ನೀಟ್‍ನಂತಹ ಸ್ಪರ್ಧಾತ್ಮಕ ಪರೀಕ್ಷೆಗಳು ಆಂಗ್ಲ ಮಾಧ್ಯಮದೊಂದಿಗೆ ಕನ್ನಡ ಮಾಧ್ಯಮದಲ್ಲೂ ನಡೆಯುತ್ತಿರುವುದರಿಂದ ವಿದ್ಯಾರ್ಥಿಗಳಿಗೆ ಅನುಕೂಲವಾಗುತ್ತದೆ ಎಂದು ಅವರು ಹೇಳಿದರು.
ಬಾಡಿಗೆ ಗಂಡನಿಂದಾಗಿ ಗಲ್ಲುಶಿಕ್ಷೆಗೆ ಗುರಿಯಾದ ನರ್ಸ್‌ ಒಬ್ಬಳ ಕಣ್ಣೀರ ಕಥೆಯಿದು…

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:5 × one =
Remember me
