ಬೆಂಗಳೂರು:ಕರ್ನಾಟದಲ್ಲಿರುವ ವಿವಿಧ ಜೈಲುಗಳಲ್ಲಿ ಇದುವರೆಗೆ ಪತ್ತೆಯಾಗಿರುವ ಕರೊನಾ ವೈರಸ್‌ ಪ್ರಕರಣಗಳ ಕುರಿತು ವಿವರ ಸಲ್ಲಿಸುವಂತೆ ಸರ್ಕಾರಕ್ಕೆ ಹೈಕೋರ್ಟ್ ನಿರ್ದೇಶನ ನೀಡಿದೆ.
ರಾಜ್ಯದ ಕಾರಾಗೃಹಗಳಲ್ಲಿ ಕರೊನಾ ಸೋಂಕು ಇರುವ ಕೈದಿಗಳನ್ನು ಪ್ರತ್ಯೇಕವಾಗಿರಿಸುವಂತೆ ಕೋರಿ ಪತ್ರಕರ್ತೆ ಗೌರಿ ಲಂಕೇಶ್‌ ಕೊಲೆ ಆರೋಪಿ ಅಮೋಲ್‌ ಕಾಳೆ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆಯನ್ನು ಕೋರ್ಟ್‌ ನಡೆಸುತ್ತಿದೆ.
ಕರೊನಾ ವೈರಸ್‌ ಲಕ್ಷಣ ಇರುವ ಕೈದಿಗಳನ್ನು ಕಾರಾಗೃಹದಲ್ಲಿ ಪ್ರತ್ಯೇಕವಾಗಿ ಇರಿಸಬೇಕು. ಕೈದಿಗಳನ್ನು ಒಟ್ಟಿಗೇ ಇಡಬಾರದು ಎಂಬುದಾಗಿ ಸುಪ್ರೀಂಕೋರ್ಟ್‌ ಆದೇಶಿಸಿದ್ದು, ಅದನ್ನು ರಾಜ್ಯದಲ್ಲಿಯೂ ಅನುಸರಿಸುವಂತೆ ಸರ್ಕಾರಕ್ಕೆ ಆದೇಶಿಸಬೇಕು ಎಂದು ಕಾಳೆ ಕೋರಿದ್ದಾರೆ.
ಇದರ ವಿಚಾರಣೆಯನ್ನು ಮುಖ್ಯ ನ್ಯಾಯಮೂರ್ತಿ ಎ.ಎಸ್. ಓಕಾ ನೇತೃತ್ವದ ವಿಭಾಗೀಯ ಪೀಠ ನಡೆಸುತ್ತಿದೆ. ಕರೊನಾ ಸೋಂಕಿತರಿಗೆ ಚಿಕಿತ್ಸೆ ನೀಡಲು ಜೈಲಿನಲ್ಲಿ  ಏನೆಲ್ಲಾ ಸೌಲಭ್ಯಗಳು ಇವೆ ಎಂಬ ಬಗ್ಗೆ ಮಾಹಿತಿ ನೀಡಿ ಎಂದು ಸರ್ಕಾರಕ್ಕೆ ಕೋರ್ಟ್‌ ಸೂಚಿಸಿದೆ.
ಇದನ್ನೂ ಓದಿ:ಡಿಜೆಹಳ್ಳಿ ಗಲಭೆಯ ಸೀಕ್ರೇಟ್‌ ಬಯಲು: ಸತ್ಯಶೋಧನಾ ಸಮಿತಿ ಸಲ್ಲಿಸಿರುವ ವರದಿಯಲ್ಲಿ ಏನಿದೆ?
ವಿಚಾರಣೆಗೆ ಒಳಪಡುವ ಅಥವಾ ಶಿಕ್ಷೆಗೆ ಒಳಗಾದ ಕೈದಿಯನ್ನು ಜೈಲಿಗೆ ಕರೆ ತರುವ ಮುನ್ನ ಕರೊನಾ ಪರೀಕ್ಷೆ ನಡೆಸಲಾಗಿದೆಯೇ ಎಂಬುದನ್ನು ಖಚಿತಪಡಿಸಿಕೊಳ್ಳಲು ಯಾವುದಾರೂ ನೀತಿ ಇದೆಯೇ ಎಂಬುದರ ಕುರಿತು ಇದೇ 21ರ ಒಳಗೆ ಪ್ರಮಾಣಪತ್ರ ಸಲ್ಲಿಸುವಂತೆ ಕೋರ್ಟ್‌ ಹೇಳಿದೆ.
ಇಲ್ಲಿಯವರೆಗೆ ಕೈದಿಗಳಲ್ಲಿ ಪತ್ತೆಯಾಗಿರುವ ಕರೊನಾ ವೈರಸ್‌ ಪ್ರಕರಣಗಳ ಸಂಖ್ಯೆ ತಿಳಿಸಬೇಕು, ಜೈಲಿನಲ್ಲಿ ಪ್ರತ್ಯೇಕವಾಗಿ ಇರಲು ಸರಿಯಾದ ಸೌಲಭ್ಯಗಳು ಲಭ್ಯವಿದೆಯೇ ಎಂಬ ಮಾಹಿತಿ ನೀಡಬೇಕು, ಜತೆಗೆ, ರೋಗಲಕ್ಷಣಗಳನ್ನು ಹೊಂದಿರುವ ಕೈದಿಗಳಿಗೆ ನಿಯಮಿತವಾಗಿ ಆರೋಗ್ಯ ತಪಾಸಣೆ ನಡೆಸಲಾಗಿದೆಯೇ ಎಂಬುದರ ಕುರಿತು ವಿವರ ಸಲ್ಲಿಸಬೇಕು ಎಂದು ಸರ್ಕಾರಕ್ಕೆ ಪೀಠ ನಿರ್ದೇಶಿಸಿದೆ.
https://www.vijayavani.net/s-three-rape-and-murder/
ಡಿಜೆಹಳ್ಳಿ ಗಲಭೆಯ ಸೀಕ್ರೇಟ್‌ ಬಯಲು: ಸತ್ಯಶೋಧನಾ ಸಮಿತಿ ಸಲ್ಲಿಸಿರುವ ವರದಿಯಲ್ಲಿ ಏನಿದೆ?

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:fourteen − ten =
Remember me
