ಬೆಂಗಳೂರು:ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತ‌ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದ‌ ಬಗ್ಗೆ ಗೃಹ ಸಚಿವ ಆರಗ ಜ್ಞಾನೇಂದ್ರ ಪ್ರತಿಕ್ಷಣದ ಮಾಹಿತಿ ತರಿಸಿಕೊಳ್ಳುತ್ತಿದ್ದಾರೆ.
ಸರ್ಕಾರದ ಸಾಧನೆಗಳನ್ನು ವಿವರಿಸಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ‌ ಅವರು‌ ವಿಧಾನಸೌಧದಲ್ಲಿ ಬೆಳಗ್ಗೆ 11ಕ್ಕೆ ಸುದ್ದಿಗೋಷ್ಠಿ‌ ಕರೆದಿದ್ದು, ಅದಕ್ಕೂ ಮುನ್ನ ಭೇಟಿಯಾಗಿ ತನಿಖಾ ಪ್ರಗತಿ ಮಾಹಿತಿ ಹಂಚಿಕೊಳ್ಳಲಿದ್ದಾರೆ.
ಹತ್ಯೆ ಪ್ರಕರಣದ ತನಿಖೆ ಮೇಲೆ ತೀವ್ರ ನಿಗಾವಹಿಸಿ:ಪ್ರತಿ ಒಂದು ಗಂಟೆಗೊಮ್ಮೆ ಪ್ರಕರಣದ ಹೆಚ್ಚುವರಿ ಮಾಹಿತಿ ಸಂಗ್ರಹಿಸುತ್ತಿದ್ದು, ಆರೋಪಗಳನ್ನು ಟ್ರಾಕ್ ಮಾಡುತ್ತಿರುವುದಾಗಿ ಡಿಜಿಐಜಿಪಿ ಪ್ರವೀಣ್ ಸೂದ್ ಹೇಳಿದ್ದಾರೆ ಎಂದು ತಿಳಿದಿದೆ.
ಹತ್ಯೆ ಬಳಿಕ ಆರೋಪಿಗಳು ಆರೋಪಿಗಳು ಕೇರಳಕ್ಕೆ ಪರಾರಿಯಾಗಿದ್ದಾರೆ ಎನ್ನಲಾಗಿದ್ದು, ಅವರನ್ನು ಸೆರೆಹಿಡಿಯುವ ವಿಚಾರವಾಗಿ ಕೇರಳ ಡಿಜಿಐಜಿಪಿ ಜತೆಗೆ ಮಾತುಕತೆ ನಡೆದಿದೆ ಎಂಬ ವಿವರಣೆ ಪ್ರವೀಣ್ ಸೂದ್ ನೀಡಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಪ್ರಕರಣದ ಅಪ್ಡೇಟ್‌ಗಳನ್ನು ತ್ವರಿತವಾಗಿ ನೀಡುವಂತೆ ಸೂಚಿಸಿ, ಫೋನ್ ಮೂಲಕ ಅಧಿಕಾರಿಗಳಿಂದ ಆರಗ ಜ್ಞಾನೇಂದ್ರ ಮಾಹಿತಿ ಪಡೆದುಕೊಳ್ಳುತ್ತಿದ್ದಾರೆ.
ಬೆಳ್ಳಾರೆ ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರ್​ ಹತ್ಯೆ ಪ್ರಕರಣ: ಪ್ರಮುಖ ಆರೋಪಿ ಬಂಧನ

ಹಂತಕರಿಂದ ಪ್ರವೀಣ್​​ ಕನಸು ನುಚ್ಚುನೂರು: ಕನಸು ಸಾಕಾರಕ್ಕೆ ಸಿದ್ಧತೆ ನಡೆಯುತ್ತಿದ್ದ ಸ್ಥಳದಲ್ಲೇ ಅಂತ್ಯಸಂಸ್ಕಾರ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:two + 3 =
Remember me
