ಚಾಮರಾಜನಗರ: ಮುಂದಿನ ಬಾರಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದರೆ ಆಕ್ಸಿಜನ್ ದುರಂತದಲ್ಲಿ‌ ಮೃತಪಟ್ಟವರ ಕುಟುಂಬದಲ್ಲಿ ತಲಾ ಒಬ್ಬರಿಗೆ ಸರ್ಕಾರಿ ಕೆಲಸ ನೀಡಲಾಗುವುದೆಂದು ಪಕ್ಷದ ನಾಯಕ ರಾಹುಲ್ ಗಾಂಧಿ ಭರವಸೆ ನೀಡಿದ್ದಾರೆ ಎಂದು ಶಾಸಕ ಪ್ರಿಯಾಂಕ್ ಖರ್ಗೆ ತಿಳಿಸಿದರು.
ಗುಂಡ್ಲುಪೇಟೆಯ ಶನೈಶ್ವರ ‌ದೇವಸ್ಥಾನದ ಬಳಿ ಶುಕ್ರವಾರ ಆಯೋಜಿಸಿದ್ದ ಸಂವಾದದಲ್ಲಿ ಆಕ್ಸಿಜನ್ ದುರಂತದ ಸಂತ್ರಸ್ತರಿಗೆ ಆಶ್ವಾಸನೆ ನೀಡಲಾಯಿತು. ಈ ವೇಳೆ ಸಂತ್ರಸ್ತರು ಅಳಲು ತೋಡಿಕೊಂಡರು. ನಾವು ಸೂಕ್ತ ಪರಿಹಾರ ಕೊಡಿಸುವುದಕ್ಕೆ ಬೆಂಬಲ ನೀಡುತ್ತೇವೆ ಎಂದರು.
(ಚಾಮರಾಜನಗರ ವೈದ್ಯಕೀಯ ವಿಜ್ಞಾನ ಸಂಸ್ಥೆಯಲ್ಲಿ ಆಮ್ಲಜನಕ ಕೊರತೆಯಿಂದ ಕಳೆದ ಮೇ 2 ರ ಮಧ್ಯರಾತ್ರಿ ಸಂಭವಿಸಿದ ದುರಂತದಲ್ಲಿ 24 ಮಂದಿ ಮೃತಪಟ್ಟಿದ್ದರು)
ಸೋಲಿಗರ ಬುಡಕಟ್ಟು ಅಭಿವೃದ್ಧಿ ಸಂಘದವರುಅರಣ್ಯ ಹಕ್ಕು ಕಾಯ್ದೆಯಡಿ ಬಂಡೀಪುರದಲ್ಲಿ ಅರಣ್ಯ ಕಿರು ಉತ್ಪನ್ನ ಸಂಗ್ರಹಣೆಗೆ ಅವಕಾಶ ಮಾಡಿಕೊಡಬೇಕೆಂದು ಕೇಳಿಕೊಂಡರು. ಮಲೆ‌ ಮಹದೇಶ್ವರ ವನ್ಯಜೀವಿ ಧಾಮವನ್ನು ಹುಲಿ‌‌ಸಂರಕ್ಷಿತಾರಣ್ಯ ಪ್ರದೇಶ ಮಾಡಿದರೆ ಜನರಿಗೆ ತೊಂದರೆಯಾಗಲಿದೆ ಎಂದರು. ಸೋಲಿಗರಿಗೆ ರಾಜಕೀಯ ಪ್ರಾತಿನಿಧ್ಯ ಬೇಕು ಎಂದು ಮನವಿ ಮಾಡಿದರು. ಸೋಲಿಗರಿಗೆ ನೀಡುವ ಪೌಷ್ಠಿಕ ಆಹಾರ ಯೋಜನೆ ಸಮರ್ಪಕವಾಗಿ ನಡೆಯುತ್ತಿಲ್ಲ ಹೇಳಿದರು.
ಇದಕ್ಕೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಮಾತನಾಡಿ, ಸೋಲಿಗರ ಸಮಸ್ಯೆಗಳನ್ನು ಬಗೆಹರಿಸಲು ಸರ್ಕಾರಕ್ಕೆ ಒತ್ತಾಯಿಸಲಾಗಿ‌ ತಿಳಿಸಿದ್ದಾರೆ ಎಂದು ಪ್ರಿಯಾಂಕ್ ಖರ್ಗೆ ವಿವರಿಸಿದರು.
ಸಂವಾದದಲ್ಲಿ ಭಾಗವಹಿಸಿದ್ದ ಎಚ್.ಡಿ.ಕೋಟೆಯ ಜೇನುಕುರುಬರು ರಾಹುಲ್‌ಗಾಂಧಿಗೆ‌ ಜೇನು‌ ತುಪ್ಪ ಕೊಟ್ಟರು.
80ರ ಖರ್ಗೆಗೆ ಒಲಿಯತ್ತಾ ಎಐಸಿಸಿ ಪಟ್ಟ? ಭಿನ್ನಮತಿಯರೂ ಸೇರಿ 30 ಮಂದಿ ಸಹಿಯೊಂದಿಗೆ ನಾಮಪತ್ರ ಸಲ್ಲಿಕೆ
ಮೋಹನ್ ಭಾಗವತ್​ರನ್ನು ‘ರಾಷ್ಟ್ರಪಿತ’, ‘ರಾಷ್ಟ್ರ ಋಷಿ’ ಎಂದು ಬಣ್ಣಿಸಿದ್ದ ಇಲ್ಯಾಸಿಗೆ ಜೀವ ಬೆದರಿಕೆ!
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
ಅನೇಕ ಜನರು ತಮ್ಮ ಭವಿಷ್ಯವನ್ನು ತಿಳಿದುಕೊಳ್ಳಲು ತುಂಬಾ ಆಸಕ್ತಿ ಹೊಂದಿರುತ್ತಾರೆ. ಮುಂದಿನ ದಿನಗಳಲ್ಲಿ ನಮ್ಮ ಜೀವನದಲ್ಲಿ…
Sign in to your account
Please enter an answer in digits:eight + 9 =
Remember me
