ಕಲಬುರಗಿ:545 ಪಿಎಸ್‌ಐ ಹುದ್ದೆಗಳ ನೇಮಕಾತಿ ಪರೀಕ್ಷೆಯಲ್ಲಿ ನಡೆದ ಗೋಲ್‌ಮಾಲ್‌ ಪ್ರಕರಣಕ್ಕೆ ಸಂಬಂಧಿಸಿದಂತೆ ಕುತೂಹಲ ಎನಿಸುವ ಒಂದೊಂದೇ ಮಾಹಿತಿಗಳು ಬಹಿರಂಗಗೊಳ್ಳುತ್ತಿವೆ. ದೊಡ್ಡ ದೊಡ್ಡ ಅಧಿಕಾರಿಗಳು ಇದರಲ್ಲಿ ಭಾಗಿಯಾಗಿರುವ ಶಂಕೆ ತನಿಖಾಧಿಕಾರಿಗಳಿಗೆ ಮೂಡುತ್ತಿದ್ದು, ಇದಾಗಲೇ ಹಲವರ ಬಂಧನವೂ ಆಗಿದ್ದು, ವಿಚಾರಣೆ ನಡೆಯುತ್ತಿದೆ.
ಈ ಮಧ್ಯೆ, ಅಕ್ರಮ ನಡೆಸುತ್ತಿದ್ದವರಿಗೇ ಬ್ಲ್ಯಾಕ್‌ಮೇಲ್ ಮಾಡಿ ಪ್ರಕರಣ ಮುಚ್ಚಿಹಾಕುವ ಪ್ರಯತ್ನದ ಆರೋಪದ ಮೇಲೆ ಸಿಐಡಿ ಅಧಿಕಾರಿಗಳು ಡಿವೈಎಸ್ಪಿ ಮಲ್ಲಿಕಾರ್ಜುನ ಸಾಲಿ ಅವರನ್ನು ಬಂಧಿಸಿದ್ದಾರೆ. ರಾಯಚೂರು ಜಿಲ್ಲೆಯ ಲಿಂಗಸುಗೂರು ಡಿವೈಎಸ್ಪಿ ಆಗಿರುವ ಇವರು ಅಕ್ರಮದ ಕಿಂಗ್‌ಪಿನ‌ಗಳಿಂದ ಲಂಚ ಪಡೆದಿರುವ ಆರೋಪ ಎದುರಿಸುತ್ತಿದ್ದಾರೆ.
ಜ್ಞಾನಜೋತಿ ಇಂಗ್ಲಿಷ್ ಮಾಧ್ಯಮ ಶಾಲೆಯಲ್ಲಿ ಪಿಎಸ್ಐ ಪರೀಕ್ಷೆ ವೇಳೆ ಅಕ್ರಮದ ಮಾಹಿತಿ ಪಡೆದಿದ್ದ ಸಾಲಿ ಅವರು ಅಕ್ರಮ ಎಸಗಿದವರಿಂದ 10 ಲಕ್ಷ ರೂಪಾಯಿ ಲಂಚ ಪಡೆದು ಕೇಸನ್ನು ಮುಚ್ಚಿಹಾಕಲು ಪ್ರಯತ್ನಿಸಿದ್ದಾರೆ ಎನ್ನಲಾಗಿದೆ. ಪಿಎಸ್ಐ ಪರೀಕ್ಷೆ ಮುಗಿದ ಕೆಲ ದಿನದಲ್ಲಿ ಇವರಿಗೆ ಅಕ್ರಮದ ಕುರಿತು ಮಾಹಿತಿ ಸಿಕ್ಕಿತ್ತು. ಎಲೆಕ್ಟ್ರಾನಿಕ್ ಬ್ಲೂಟೂತ್ ಡಿವೈಸ್ ಮೂಲಕ ಪರೀಕ್ಷಾ ಅಕ್ರಮ ಮಾಡಿರೋ ಬಗ್ಗೆ ಮಾಹಿತಿ ಪಡೆದಿದ್ದ ಸಾಲಿ ಅವರು, ಅಕ್ರಮದ ಬಗ್ಗೆ ಶಾಲೆಯ ಕಾರ್ಯದರ್ಶಿ ದಿವ್ಯಾ ಹಾಗರಗಿ, ಹೆಡ್ ಮಾಸ್ಟರ್ ಕಾಶಿನಾಥಗೆ ಬೆದರಿಕೆ ಹಾಕಿದ್ದರು ಎನ್ನಲಾಗಿದೆ.
ಕೊನೆಗೆ ಹತ್ತು ಲಕ್ಷ ಹಣ ನೀಡಿದರೆ ಈ ಅಕ್ರಮದ ಬಗ್ಗೆ ಬಾಯಿ ಬಿಡುವುದಿಲ್ಲ ಎಂದು ಬೇಡಿಕೆಯೊಡ್ಡಿದ್ದರು, ಇಲ್ಲದಿದ್ದರೆ ಮಾಹಿತಿ ಲೀಕ್ ಮಾಡೋ ಬೆದರಿಕೆ ಹಾಕಿದ್ದರು ಎನ್ನಲಾಗಿದೆ. ಇದಕ್ಕೆ ಹೆದರಿ ದಿವ್ಯಾ ಹಾಗೂ ಕಾಶಿನಾಥ ಹತ್ತು ಲಕ್ಷ ಹಣ ನೀಡಿದ್ದರು ಎನ್ನಲಾಗಿದ್ದು, ಈ ಕುರಿತು ಬಂಧನದಲ್ಲಿರುವ ದಿವ್ಯಾ ಮತ್ತು ಕಾಶಿನಾಥ್ ವಿಚಾರಣೆ ವೇಳೆ ಬಾಯಿ ಬಿಟ್ಟಿದ್ದಾರೆ!
ಹಣ ಪಡೆದಿರೋ ಬಗ್ಗೆ ಇದಾಗಲೇ ಸಿಐಡಿ ಅಧಿಕಾರಿಗಳು ಮಾಹಿತಿ ‌ಸಂಗ್ರಹಿಸಿದ್ದರು. ಅದರ ಆಧಾರದ ಮೇಲೆ ವಿಚಾರಣೆ ನಡೆಯುತ್ತಿದೆ. ಇದಕ್ಕೆ ಸಂಬಂಧಿಸಿದಂತೆ ಮಲ್ಲಿಕಾರ್ಜುನ ಸಾಲಿ ಅವರನ್ನು ಬಂಧಿಸಲಾಗಿದೆ. ಇವರು ಪಿಎಸ್ಐ ಪರೀಕ್ಷೆ ನಡೆದ ಸಮಯದಲ್ಲಿ, ಆಳಂದ ಡಿವೈಎಸ್ಪಿಯಾಗಿದ್ದರು.
545 ಪಿಎಸ್‌ಐ ಹುದ್ದೆಗಳ ಪರೀಕ್ಷೆಯಲ್ಲಿ ಗೋಲ್‌ಮಾಲ್‌: ಇಲ್ಲೀವರೆಗೆ ಸಿಕ್ಕಿಬಿದ್ದವರು ಇವರೇ ನೋಡಿ…
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:5 + seven =
Remember me
