ಮೈಸೂರು:ಪಿಎಸ್​ಐ ನೇಮಕಾತಿಗೆ ಕುರಿತು ನಡೆದ ಪರೀಕ್ಷೆಯಲ್ಲಿ ಅಕ್ರಮ ಎಸಗಿರುವ ಆರೋಪ ಹೊತ್ತ ಮೈಸೂರಿನ ಎನ್.ಆರ್.ಸಂಚಾರ ವಿಭಾಗದ ಇನ್​ಸ್ಪೆಕ್ಟರ್ ಅಶ್ವಿನಿ ಅನಂತಪೂರ ಅವರನ್ನು ಅಮಾನತು ಮಾಡಲಾಗಿದೆ.
ಇಲಾಖಾ ತನಿಖೆ ಕಾಯ್ದಿರಿಸಿ ಅಮಾನತು ಆದೇಶ ಹೊರಡಿಸಲಾಗಿದೆ. ಈ ಕುರಿತು ನಗರ ಪೊಲೀಸ್ ಆಯುಕ್ತ ಡಾ.ಚಂದ್ರಗುಪ್ತ ಆದೇಶ ಹೊರಡಿಸಿದ್ದಾರೆ.
ಎಫ್‌ಡಿಎ ಅಕ್ರಮದಲ್ಲಿ ಭಾಗಿಯಾಗಿರುವ ಬಗ್ಗೆ ಆಡಿಯೋ, ವಾಟ್ಸ್​ಆ್ಯಪ್​ ಸಂದೇಹ ಮತ್ತು ಹಣ ವರ್ಗಾವಣೆ ದಾಖಲೆಗಳು ಬಹಿರಂಗವಾಗಿರುವ ಹಿನ್ನೆಲೆಯಲ್ಲಿ ಈ ಆದೇಶ ಹೊರಡಿಸಲಾಗಿದೆ.
ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ ಸುದ್ದಿಗೋಷ್ಠಿ ನಡೆಸಿ ಈ ಕುರಿತು ಆರೋಪ ಮಾಡಿದ್ದರು. ಕೆಪಿಎಸ್​ಸಿ ವತಿಯಿಂದ ನಡೆದಿದ್ದ ಪ್ರಥಮ ದರ್ಜೆ ಸಹಾಯಕರ ಪರೀಕ್ಷೆಗೆ ಅಭ್ಯರ್ಥಿ ಜತೆ ಡೀಲ್ ಮಾಡಿದ್ದಾರೆ ಎಂದು ಲಕ್ಷ್ಮಣ್ ದಾಖಲೆಗಳ ಸಮೇತ ಆರೋಪ ಮಾಡಿದ್ದರು.
ಬಾಗಲಕೋಟೆಯ ಸಂಗಮೇಶ್ ಝಳಕಿ ಜತೆ ಹಣದ ವ್ಯವಹಾರದ ಬಗ್ಗೆ ಸಂಭಾಷಣೆ ನಡೆಸಿರೊ ಆಡಿಯೋ ಹಾಗೂ ಇತರ ದಾಖಲೆಗಳನ್ನು ಲಕ್ಷ್ಮಣ್ ಬಹಿರಂಗಗೊಳಿಸಿದ್ದರು. ಪ್ರಕರಣವನ್ನು ಪರಿಗಣಿಸಿದ ನಗರ ಪೊಲೀಸ್ ಆಯುಕ್ತರು ವಿಚಾರಣೆ ಬಾಕಿ ಇರಿಸಿ ತಕ್ಷಣ ಜಾರಿಗೆ ಬರುವಂತೆ ಅಮಾನತು ಮಾಡಿ ಆದೇಶ ಹೊರಡಿಸಿದ್ದಾರೆ.(ದಿಗ್ವಿಜಯ ನ್ಯೂಸ್​)
ನನ್ನ ಸ್ನೇಹಿತೆಯಾಗಿರು ಎನ್ನುತ್ತಿದ್ದರು, ಅದೇನೆಂದು ಅರ್ಥವಾದಾಗ ಶಾಕ್​ ಆದೆ: ನಟಿ ತೆರೆದಿಟ್ಟ ಕರಾಳ ಅನುಭವ
VIDEO: ಸಚಿವರ ಕೊರಳಿಗೆ ಹೋಗೋ ಮೊದ್ಲೇ ಕಾರ್ಯಕರ್ತರ ಹೊಟ್ಟೆ ಸೇರಿದ ಸೇಬು! ವಿಡಿಯೋ ವೈರಲ್
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
ಅನೇಕ ಜನರು ತಮ್ಮ ಭವಿಷ್ಯವನ್ನು ತಿಳಿದುಕೊಳ್ಳಲು ತುಂಬಾ ಆಸಕ್ತಿ ಹೊಂದಿರುತ್ತಾರೆ. ಮುಂದಿನ ದಿನಗಳಲ್ಲಿ ನಮ್ಮ ಜೀವನದಲ್ಲಿ…
Sign in to your account
Please enter an answer in digits:16 + seven =
Remember me
