ಬೆಂಗಳೂರು:ರಾಜ್ಯಾದ್ಯಂತ ಇಂದಿನಿಂದ (ಜೂನ‌ 9) ಪಿಯುಸಿ ತರಗತಿಗಳು ಆರಂಭವಾಗಲಿವೆ. ಸರ್ಕಾರದ ನಿಯಮ, ಹೈಕೋರ್ಟ್‌ ಆದೇಶಗಳ ಹೊರತಾಗಿಯೂ ತರಗತಿಗಳಲ್ಲಿ ಹಿಜಾಬ್‌ ಧರಿಸಿ ಗಲಾಟೆ ಮಾಡುತ್ತಿರುವವರು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಈ ವರ್ಷದ ಶೈಕ್ಷಣಿಕ ವರ್ಷದ ಪ್ರಾರಂಭದಲ್ಲಿಯೇ ರಾಜ್ಯ ಶಿಕ್ಷಣ ಇಲಾಖೆ ಸಮವಸ್ತ್ರ ಧರಿಸುವಿಕೆ ಕಡ್ಡಾಯಗೊಳಿಸಿ ಆದೇಶ ಹೊರಡಿಸಿದೆ. ವಿದ್ಯಾರ್ಥಿಗಳು ಹಿಜಾಬ್ ಧರಿಸಿ ತರಗತಿಗಳಿಗೆ ಆಗಮಿಸಲು ಅವಕಾಶ ಇರುವುದಿಲ್ಲ ಎಂದು ಸರ್ಕಾರ ಮಾರ್ಗಸೂಚಿಯಲ್ಲಿ ಸ್ಪಷ್ಟವಾಗಿ ಹೇಳಿದೆ.
ಕಾಲೇಜಿನ ಅಭಿವೃದ್ಧಿ ಸಮಿತಿ ಸೂಚಿಸಿದ ಸಮವಸ್ತ್ರವನ್ನೇ ಧರಿಸಬೇಕು. ಒಂದು ವೇಳೆ ಕಾಲೇಜು ಅಭಿವೃದ್ಧಿ ಮಂಡಳಿ ಅಥವಾ ಆಡಳಿತ ವರ್ಗ ಸಮವಸ್ತ್ರ ಕಡ್ಡಾಯಗೊಳಿಸದಿದ್ದರೆ ವಿದ್ಯಾರ್ಥಿಗಳು ಸಮಾನತೆ ಮತ್ತು ಏಕತೆ ಕಾಪಾಡುವಂತಹ ಉಡುಪು ಧರಿಸಬೇಕು. ಸಾರ್ವಜನಿಕ ವ್ಯವಸ್ಥೆಗೆ ಧಕ್ಕೆಯಾಗುವಂತಹ ಬಟ್ಟೆ ಧರಿಸಲು ಅವಕಾಶವಿಲ್ಲ ಎಂದು ಇದಾಗಲೇ ಸಾರ್ವಜನಿಕ ಶಿಕ್ಷಣ ಇಲಾಖೆ ಪಿಯು ಕಾಲೇಜು ಆಡಳಿತ ಮಂಡಳಿಗೆ ಹೊರಡಿಸಿದ ಮಾರ್ಗಸೂಚಿಯಲ್ಲಿ ಸ್ಪಷ್ಟಪಡಿಸಿದೆ.
ಹಿಜಾಬ್ ವಿವಾದದ ಕುರಿತ ವಿಚಾರಣೆ ಸುಪ್ರಿಂ ಕೋರ್ಟ್​ನಲ್ಲಿ ಬಾಕಿಯಿದ್ದು, ರಾಜ್ಯ ಸರ್ಕಾರವು ಹೈಕೋರ್ಟ್ ತೀರ್ಪಿನ ಪ್ರಕಾರ ಹಿಜಾಬ್​ನಂತಹ ಉಡುಪು ಧರಿಸಲು ಅವಕಾಶ ನೀಡದೇ, ಸಮವಸ್ತ್ರ ಧಾರಣೆ ಕಡ್ಡಾಯಗೊಳಿಸಿ ಮಾರ್ಗಸೂಚಿ ರೂಪಿಸಿದೆ.ಇನ್ನು ಪಿಯು ಕಾಲೇಜುಗಳಿಗೆ ಶೈಕ್ಷಣಿಕ ವೇಳಾಪಟ್ಟಿಯನ್ನ ಸಹ ಸಾರ್ವಜನಿಕ ಶಿಕ್ಷಣ ಇಲಾಖೆ ನಿಗದಿಪಡಿಸಿದೆ.
ಜೂನ್ 9 ರಿಂದ ಸೆಪ್ಟೆಂಬರ್ 30 ರವರೆಗೆ ಕಾಲೇಜು ಕಾರ್ಯನಿರ್ವಹಿಸಲಿದೆ. ಅಕ್ಟೋಬರ್ 1 ರಿಂದ 12 ರವರೆಗೆ ಮಧ್ಯಂತರ ರಜೆ ಘೋಷಿಸಲಾಗಿದೆ. ಅಕ್ಟೋಬರ್ 13 ರಿಂದ ಮಾರ್ಚ್ 31 ರವರೆಗೆ ಶೈಕ್ಷಣಿಕ ವರ್ಷದ ಎರಡನೇ ಅವಧಿ. ಏಪ್ರಿಲ್ ಒಂದರಿಂದ ಬೇಸಿಗೆ ರಜೆ ಎಂದು ಸದ್ಯ ನೀಡಿರುವ ಮಾರ್ಗಸೂಚಿಯಲ್ಲಿ ಪ್ರಕಟಿಸಲಾಗಿದೆ.
‘ದಿ ಕಶ್ಮೀರ್ ಫೈಲ್ಸ್’ ಬಳಿಕ ಮತ್ತೊಂದು ಕರಾಳ ಅಧ್ಯಾಯದ ಸತ್ಯ ದರ್ಶನ! ನಿರ್ದೇಶಕ ಏನು ಹೇಳಿದ್ದಾರೆ ಕೇಳಿ…
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:sixteen + 18 =
Remember me
