ಬೆಂಗಳೂರು:ಹಿಜಾಬ್‌ ಗಲಾಟೆಯಿಂದಾಗಿ ಬಂದಾಗಿದ್ದ ಶಾಲಾ- ಕಾಲೇಜುಗಳನ್ನು ನಾಳೆ ಬುಧವಾರದಿಂದ (ಫೆ.16) ಆಚರಿಸಲು ಸರ್ಕಾರ ನಿರ್ಧರಿಸಿದೆ. ಈ ಕುರಿತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ನೇತೃತ್ವದಲ್ಲಿ ನಡೆದಿರುವ ಸಭೆಯಲ್ಲಿ ಮಹತ್ವದ ನಿರ್ಧಾರ ತೆಗೆದುಕೊಳ್ಳಲಾಗಿದೆ.
ಹಲವು ಕಾಲೇಜುಗಳು ಕೆಲ ದಿನಗಳಿಂದ ಆನ್‌ಲೈನ್‌ ತರಗತಿಗಳನ್ನು ಆರಂಭಿಸಿದ್ದವು. ಇದೀಗ 16ರಿಂದ ಪುನಃ ಆಫ್‌ಲೈನ್ ತರಗತಿ ನಡೆಸಲು ಅನುಮತಿ ನೀಡಲಾಗಿದೆ.
ಈ ಕುರಿತು ಸಭೆಯ ಬಳಿಕ ಮಾತನಾಡಿದ ಗೃಹ ಸಚಿವ ಆರಗ ಜ್ಞಾನೇಂದ್ರ, ಪಾಲಕರು ಕಾಲೇಜು ಆರಂಭಕ್ಕೆ ಉತ್ಸುಕರಾಗಿದ್ದಾರೆ. ಯಾರೇ ಆಗಲಿ ಹೈಕೋರ್ಟ್​ ಆದೇಶ ಉಲ್ಲಂಘಿಸುವಂತಿಲ್ಲ, ಆದೇಶ ಪಾಲಿಸಬೇಕು. ಘಟನೆ ಸಂಬಂಧ ಮಾಹಿತಿ ಕಲೆಹಾಕಲಾಗುತ್ತಿದೆ ಎಂದು ತಿಳಿಸಿದರು. ಪಾಲಕರು, ವಿದ್ಯಾರ್ಥಿಗಳಿಗೆ ಯಾವುದೇ ತೊಂದರೆ ಆಗದಂತೆ ಎಚ್ಚರಿಕೆ ವಹಿಸುತ್ತೇವೆ. ಪೊಲೀಸ್ ಇಲಾಖೆ ಇದಕ್ಕೆ ಬೇಕಾದ ಬಂದೋಬಸ್ತ್ ಕೈಗೊಳ್ಳಲಿದೆ ಎಂದರು.
ಸಭೆಯಲ್ಲಿ ಶಿಕ್ಷಣ ಸಚಿವ ಬಿ.ಸಿ‌.ನಾಗೇಶ್, ಉನ್ನತ ಶಿಕ್ಷಣ ಸಚಿವ ಡಾ. ಅಶ್ವತ್ಥ ನಾರಾಯಣ, ಡಿಜಿ ಐಜಿಪಿ ಪ್ರವೀಣ್ ಸೂದ್ ಸೇರಿ ಶಿಕ್ಷಣ ಇಲಾಖೆ ಅಧಿಕಾರಿಗಳು ಭಾಗಿಯಾಗಿದ್ದರು.
VIDEO: ‘ಅಲ್ಲಾಹು ಅಕ್ಬರ್‌’: ಘಟನೆ ಪೂರ್ವನಿಯೋಜಿತ ಎಂದ ಪಾಕಿಸ್ತಾನದ ಚಾನೆಲ್‌! ಶಾಕಿಂಗ್‌ ವಿಡಿಯೋ ಇಲ್ಲಿದೆ…

VIDEO: ‘ಐದು ವರ್ಷದಿಂದ ನೋಡ್ತಿದ್ದೇನೆ, ಯಾರೂ ಹಿಜಾಬ್‌ ಹಾಕ್ತಿರಲಿಲ್ಲ- ಮೊದ್ಲು ಭಾಷೆ ಭಾಷೆ ಅಂದ್ರು, ಈಗ ನೋಡಿದ್ರೆ ಹೀಗೆ…’

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:4 × 2 =
Remember me
