ಬೆಂಗಳೂರು:ಕ್ಷಣ ಕ್ಷಣಕ್ಕೂ ಕರೊನಾ ವೈರಸ್‌ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಈ ಬಾರಿ ಸಾರ್ವಜನಿಕ ಗಣೇಶೋತ್ಸವಕ್ಕೆ ಸರ್ಕಾರ ನಿರ್ಬಂಧ ವಿಧಿಸಿತ್ತು.ಆದರೆ ಮುಂಬೈ ಸೇರಿದಂತೆ ಕೆಲವು ರಾಜ್ಯಗಳಲ್ಲಿ ಕೆಲವೊಂದು ಷರತ್ತುಗಳನ್ನು ವಿಧಿಸುವ ಮೂಲಕ ಉತ್ಸವಕ್ಕೆ ಅವಕಾಶ ನೀಡಿರುವಾಗ ರಾಜ್ಯದಲ್ಲಿ ಏಕಿಲ್ಲ ಎಂಬ ಬಗ್ಗೆ ಅಪಾರ ಟೀಕೆ ವ್ಯಕ್ತವಾಗಿತ್ತು.
ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪನವರು, ಗಣೇಶ ಭಕ್ತರ ಕೋರಿಕೆಗೆ ಮಣಿದು, ಸಾರ್ವಜನಿಕ ಉತ್ಸವಕ್ಕೆ ಹಸಿರು ನಿಶಾನೆ ತೋರಿದ್ದಾರೆ.ಗಣೇಶೋತ್ಸವಕ್ಕೆ ಸಂಬಂಧಪಟ್ಟಂತೆ ಪರಿಷ್ಕೃತ ಮಾರ್ಗಸೂಚಿಯನ್ನು ಬಿಡುಗಡೆಗೊಳಿಸಿದ್ದು, ಸಾರ್ವಜನಿಕ ಗಣೇಶೋತ್ಸವಕ್ಕೆ ಷರತ್ತುಬದ್ಧ ಅನುಮತಿಯನ್ನು ನೀಡಲಾಗಿದೆ.
ಇದನ್ನೂ ಓದಿ:ಬಾರ್‌ಗಳಿಗೆ ಅನುಮತಿ ಇದೆ, ಗಣೇಶನಿಗೆ ಯಾಕಿಲ್ಲ? ಸರ್ಕಾರಕ್ಕೆ ಮುತಾಲಿಕ್‌ 24 ಗಂಟೆ ಗಡುವು!
ಈ ಬಗ್ಗೆ ಟ್ವೀಟ್‌ ಮಾಡಿರುವ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ, ಕರೊನಾ ಪರಿಸ್ಥಿತಿ ಹಿನ್ನೆಲೆ ಜನರ ಧಾರ್ಮಿಕ ಭಾವನೆಗಳಿಗೆ ಸ್ಪಂದಿಸಿ, ಸಾಂಪ್ರದಾಯಿಕ ಗಣೇಶೋತ್ಸವ ಆಚರಣೆಗೆ ಧಕ್ಕೆ ಬಾರದಂತೆ ಸರಕಾರ ಮಾರ್ಗಸೂಚಿಗಳನ್ನು ರೂಪಿಸಿದೆ. ಕರೊನಾ ಹರಡುವಿಕೆ ನಿಯಂತ್ರಣ ಪ್ರತಿಯೊಬ್ಬರ ಜವಾಬ್ದಾರಿಯಾಗಿದ್ದು, ಪರಿಷ್ಕೃತ ಮಾರ್ಗಸೂಚಿಗಳನ್ವಯ ಪರಿಸರಸ್ನೇಹಿ ಗಣೇಶೋತ್ಸವ ಆಚರಿಸಬೇಕು ಎಂದು ಮನವಿ ಮಾಡಿದ್ದಾರೆ.
ಕೊರೋನಾ ಸಾಂಕ್ರಾಮಿಕ ಹಿನ್ನೆಲೆಯಲ್ಲಿ ಜನರ ಧಾರ್ಮಿಕ ಭಾವನೆಗಳಿಗೆ ಸ್ಪಂದಿಸಿ, ಸಾಂಪ್ರದಾಯಿಕ ಗಣೇಶೋತ್ಸವ ಆಚರಣೆಗೆ ಧಕ್ಕೆ ಬಾರದಂತೆ ಸರ್ಕಾರ ಮಾರ್ಗಸೂಚಿಗಳನ್ನು ರೂಪಿಸಿದೆ.
ಕೊರೋನಾ ಹರಡುವಿಕೆ ನಿಯಂತ್ರಣ ಪ್ರತಿಯೊಬ್ಬರ ಜವಾಬ್ದಾರಿಯಾಗಿದ್ದು ಪರಿಷ್ಕೃತ ಮಾರ್ಗಸೂಚಿಗಳನ್ವಯ ಪರಿಸರಸ್ನೇಹಿ ಗಣೇಶೋತ್ಸವ ಆಚರಿಸಲು ಮತ್ತೊಮ್ಮೆ ವಿನಯಪೂರ್ವಕ ವಿನಂತಿpic.twitter.com/lf8U1sV0Sw
— CM of Karnataka (@CMofKarnataka)August 18, 2020

ಪರಿಷ್ಕೃತ ಮಾರ್ಗಸೂಚಿಯಲ್ಲಿ ಇವೆಲ್ಲವೂ ಇದೆ:* ಈ ಬಾರಿ ಗಣೇಶ ಚತುರ್ಥಿಯನ್ನು ಸರಳವಾಗಿ ಭಕ್ತಿ ಪೂರ್ವಕವಾಗಿ ದೇವಸ್ಥಾನದೊಳಗೆ, ತಮ್ಮ ಮನೆಗಳಲ್ಲಿ ಅಥವಾ ಸರಕಾರಿ, ಖಾಸಗಿ, ಸಾರ್ವಜನಿಕ ಬಯಲು ಪ್ರದೇಶಗಳಲ್ಲಿ ಕನಿಷ್ಠ ಸಂಖ್ಯೆಯೊಂದಿಗೆ ಆಚರಿಸಬಹುದು.* ಸಾರ್ವಜನಿಕ ಸ್ಥಳಗಳಲ್ಲಿ ಗಣೇಶ ಮೂರ್ತಿ 4 ಅಡಿ ಎತ್ತರ ಮೀರದಂತೆ ಹಾಗೂ ಮನೆಯೊಳಗೆ 2 ಅಡಿ ಮೀರದಂತೆ ಪ್ರತಿಷ್ಠಾಪಿಸಬೇಕು.* ಗಣೇಶ ಮೂರ್ತಿ ಪ್ರತಿಷ್ಠಾಪನೆಗೆ ಗಣೇಶೋತ್ಸವ ಮಂಡಳಿ ಅಥವಾ ಸಮಿತಿಗಳು ಸ್ಥಳೀಯ ಆಡಳಿತದಿಂದ ಪೂರ್ವಾನುಮತಿ ಕಡ್ಡಾಯ. ಒಂದು ವಾರ್ಡ್‌ ಅಥವಾ ಗ್ರಾಮಕ್ಕೆ ಒಂದೇ ಸಾರ್ವಜನಿಕ ಗಣೇಶ ಮೂರ್ತಿ ಪ್ರತಿಷ್ಠಾಪನೆಗೆ ಮನವಿ.
ಎಟಿಎಂನಲ್ಲಿ ಹಣ ತೆಗೆಯುವಿರಾ? ಮೊದಲು ‘ದಂಡ’ದ ಹೊಸ ನಿಯಮ ತಿಳಿದುಕೊಳ್ಳಿ…

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:19 − 13 =
Remember me
