ಬೆಂಗಳೂರು:ಇದೇ ತಿಂಗಳು ನಡೆಯಬೇಕಿದ್ದ ಪಿಯುಸಿ ಹಾಗೂ ಮುಂದಿನ ತಿಂಗಳು 21ರಿಂದ ನಡೆಯಬೇಕಿದ್ದ ಎಸ್‌ಎಸ್‌ಎಲ್‌ಸಿ ಪರೀಕ್ಷೆಯನ್ನು ಕರೊನಾ ಕಾರಣದಿಂದಾಗಿ ರಾಜ್ಯ ಸರ್ಕಾರ ಇದಾಗಲೇ ಮುಂದೂಡಿ ಆದೇಶಿಸಿದೆ.
ಆದರೆ ಇದರ ನಡುವೆಯೇ ಈ ಪರೀಕ್ಷೆಗಳಿಗೆ ಸಂಬಂಧಿಸಿದಂತೆ ಹಲವಾರು ಸಂದೇಶಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿವೆ. ಈ ಬಗ್ಗೆ ಶಿಕ್ಷಣ ಸಚಿವ ಸುರೇಶ್‌ ಕುಮಾರ್‌ ಅವರಿಗೂ ಹಲವಾರು ಕರೆಗಳು ಬರುತ್ತಿರುವ ಹಿನ್ನೆಲೆಯಲ್ಲಿ ಅವರು ಮಾಧ್ಯಮಗಳ ಮೂಲಕ ಸ್ಪಷ್ಟನೆ ಕೊಟ್ಟಿದ್ದಾರೆ.
ಅದೇನೆಂದರೆ, ಕೋವಿಡ್ ತೀವ್ರ‌ ಪ್ರಸರಣದ‌ ಹಿನ್ನೆಲೆಯಲ್ಲಿ ಎಸ್.ಎಸ್.ಎಲ್.ಸಿ-ದ್ವಿತೀಯ ಪಿಯು‌ ಪರೀಕ್ಷೆಗಳನ್ನು ಮುಂದೂಡಲಾಗಿದೆಯೇ ಹೊರತು ರದ್ದು ‌ಪಡಿಸುವ ಬಗ್ಗೆ ಸದ್ಯಕ್ಕೆ ಯಾವುದೇ ತೀರ್ಮಾನ ತೆಗೆದುಕೊಂಡಿಲ್ಲ.
ಈಗ ಹರಿದಾಡುತ್ತಿರುವ ಸುದ್ದಿಗಳಲ್ಲಿ ಯಾವುದೇ ಹುರುಳು ಇಲ್ಲ. ವಿದ್ಯಾರ್ಥಿಗಳ ಭವಿಷ್ಯ ಹಾಗೂ ಯೋಗಕ್ಷೇಮವನ್ನು ಗಮನದಲ್ಲಿರಿಸಿ ಮುಂದಿನ ದಿನಗಳಲ್ಲಿ ಅವರ ಒಳಿತಿಗೆ ಪೂರಕವಾದ ನಿರ್ಣಯ ತೆಗೆದುಕೊಳ್ಳಲಾಗುವುದು. ಯಾವುದೇ ಕಾರಣಕ್ಕೂ ವಿಚಲಿತರಾಗದೇ‌ ವಿದ್ಯಾರ್ಥಿಗಳು‌ ಓದಿನಲ್ಲಿ ತೊಡಗಿಸಿಕೊಳ್ಳಬೇಕು ಎಂದು ಅವರು ಮನವಿ ಮಾಡಿದ್ದಾರೆ.
‘ಲವ್‌ ಯು ಜಿಂದಗಿ’ ಎಂದು ಹೇಳುತ್ತಲೇ ಜೀವ ತೊರೆದ ಯುವತಿ: ಬದುಕು ಕಸಿದ ಕರೊನಾ

ಸೋಂಕಿತ ಬಾಲಕನಿಗೆ ಮರವೇ ಐಸೋಲೇಷನ್‌ ಸೆಂಟರ್‌! ಮನೆಯಲ್ಲಿಲ್ಲ ಜಾಗ, 11 ದಿನಗಳಿಂದ ಇಲ್ಲಿಯೇ ವಾಸ

ಪ್ರಧಾನಿ ವಿರುದ್ಧದ ಪೋಸ್ಟರ್‌ನ ಕಿಂಗ್‌ಪಿನ್‌ ತನಿಖೆ ಬೆನ್ನಲ್ಲೇ ‘ನನ್ನನ್ನೂ ಬಂಧಿಸಿ’ ಎಂದ ರಾಹುಲ್‌ ಗಾಂಧಿ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:2 × three =
Remember me
