ಬೆಂಗಳೂರು:ಅರಬ್ಬಿ ಸಮುದ್ರದಲ್ಲಿ ಉಂಟಾಗಿರುವ ವಾಯುಭಾರ ಕುಸಿತವೂ ಮುಂದಿನ 24 ಗಂಟೆಯಲ್ಲಿ ಚಂಡಮಾರುತವಾಗಿ ಪರಿವರ್ತನೆಗೊಳ್ಳಲಿದೆ. ಇದರ ಪರಿಣಾಮ ಕರಾವಳಿಯ ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಮಲೆನಾಡು ಜಿಲ್ಲೆಗಳಾದ ಚಿಕ್ಕಮಗಳೂರು, ಶಿವಮೊಗ್ಗ, ಕೊಡಗು ಮತ್ತು ಹಾಸನದಲ್ಲಿ ಮೇ 15ರಂದು ವ್ಯಾಪಕ ಮಳೆಯಾಗಲಿರುವ ಹಿನ್ನೆಲೆಯಲ್ಲಿ ರೆಡ್ ಅಲರ್ಟ್ ೋಷಿಸಲಾಗಿದೆ. ಈ ವೇಳೆ 20 ಸೆಂ.ಮೀ. ಮಳೆಯಾಗುವ ಸಾಧ್ಯತೆಯಿದೆ. ಅಲ್ಲದೆ, ಈ ಭಾಗಗಳಲ್ಲಿ ಮೇ 16ರಿಂದ ಎರಡು ದಿನ ಆರೆಂಜ್ ಹಾಗೂ ಮೇ 18,19ರಂದು ಯೆಲ್ಲೋ ಅಲರ್ಟ್ ೋಷಿಸಲಾಗಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಗದಗ, ಹಾವೇರಿಯಲ್ಲಿ ಮೇ 15, 17ರಂದು ಯೆಲ್ಲೋ ಅಲರ್ಟ್ ಇದ್ದರೆ, ಮೇ 16ರಂದು ಆರೆಂಜ್ ಅಲರ್ಟ್ ಇರಲಿದೆ. ದಕ್ಷಿಣ ಒಳನಾಡಿನ ಚಾಮರಾಜನಗರ, ಚಿತ್ರದುರ್ಗ, ದಾವಣೆಗೆರೆ, ಮೈಸೂರು, ರಾಮನಗರದಲ್ಲಿ ಮುಂದಿನ ಎರಡು ದಿನ ಗುಡುಗು ಮಿಂಚು ಸಹಿತ ಮಳೆಯಾಗಲಿದೆ. ಈ ಹಿನ್ನೆಲೆಯಲ್ಲಿ ಯೆಲ್ಲೋ ಅಲರ್ಟ್ ಎಚ್ಚರಿಕೆ ನೀಡಲಾಗಿದೆ. ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಕೋಲಾರದಲ್ಲಿ ಮೇ 17ರಂದು ಭಾರಿ ಮಳೆಯಾಗಲಿದೆ.
ಮೇ 16ಕ್ಕೆ ರಾಜ್ಯಕ್ಕೆ ಅಪ್ಪಳಿಸಲಿದೆ:ಅರಬ್ಬಿ ಸಮುದ್ರದಲ್ಲಿ ಈಗಾಗಲೇ ವಾಯುಭಾರ ಕುಸಿತವಾಗಿದೆ. ಮುಂದಿನ 24 ಗಂಟೆಯಲ್ಲಿ ಇದರ ತೀವ್ರತೆ ಮತ್ತಷ್ಟು ಹೆಚ್ಚಾಗುವುದರಿಂದ ಚಂಡಮಾರತವಾಗಿ ಪರಿವರ್ತನೆಗೊಂಡು ಮೇ 16ರಂದು ರಾಜ್ಯಕ್ಕೆ ಅಪ್ಪಳಿಸಲಿದೆ. ಮೇ 18ರಂದು ಗುಜರಾತ್ ಕರಾವಳಿ ಕಡೆಗೆ ಚಲಿಸಲಿದೆ ಎಂದು ಇಲಾಖೆ ನಿರ್ದೇಶಕ ಸಿ.ಎಸ್.ಪಾಟೀಲ್ ಮಾಹಿತಿ ನೀಡಿದರು.
ಎಮರ್ಜೆನ್ಸಿ ಇದೆ, ಅರ್ಜೆಂಟಾಗಿ ಸೆಕ್ಸ್‌ಗೆ ಹೋಗ್ಬೇಕು, ಇ- ಪಾಸ್‌ ಕೊಡಿ ಎಂದು ಅರ್ಜಿ: ಮುಂದಾದದ್ದೇ ರೋಚಕ…

70 ಹೆಚ್ಚುವರಿ ಸಹಾಯವಾಣಿ- ಇನ್ನುಮುಂದೆ ಕರೆ ಮಾಡಿ ಕಾಯುವ ಅಗತ್ಯವಿಲ್ಲ ಎಂದ ಸಚಿವ ಲಿಂಬಾವಳಿ

ಗಂಡಿಗಿಂತ ಮೊದ್ಲು ಹುಡುಗಿ ಅವನ ಸಂಬಳ ನೋಡೋದ್ರಿಂದ ಇಷ್ಟೆಲ್ಲಾ ಸಮಸ್ಯೆಯಾಗ್ತಿರೋದು

ತಮ್ಮಂದಿರಿಗಾಗಿ ಅಣ್ಣ ಬಹಳ ಖರ್ಚು ಮಾಡಿದರೆ ಅವರ ಆಸ್ತಿಯ ಭಾಗ ಆತ ಇಟ್ಟುಕೊಳ್ಳಬಹುದೆ?

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:19 − eleven =
Remember me
