ಬೆಳಗಾವಿ:ರಮೇಶ್​ ಜಾರಕಿಹೊಳಿ ಅವರ ಲೈಂಗಿಕ ಹಗರಣದ ಕುರಿತು ಸುದ್ದಿಯಾಗುತ್ತಿದ್ದಂತೆಯೇ ಗೋಕಾಕ್​ನಲ್ಲಿ ಇದಾಗಲೇ ಅವರ ಅಭಿಮಾನಿಗಳಿಂದ ಭಾರಿ ಪ್ರತಿಭಟನೆ, ಆತ್ಮಹತ್ಯೆಗೆ ಯತ್ನ ಎಲ್ಲವೂ ನಡೆದಿದೆ. ಈ ಘಟನೆ ಬೆಳಕಿಗೆ ಬಂದ ಮೊದಲ ದಿನವೇ ಅಭಿಮಾನಿಯೊಬ್ಬ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದೂ ನಡೆದಿದೆ.
ಇಂದು ಅದೇ ಮಾದರಿಯಲ್ಲಿ ಇನ್ನೋರ್ವ ಅಭಿಮಾನಿ ಬೆಂಕಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ್ದು, ಅವರ ಸ್ಥಿತಿ ಚಿಂತಾಜನಕವಾಗಿದೆ. ಗೋಕಾಕ್‍ನ ಬಸವೇಶ್ವರ ವೃತ್ತದಲ್ಲಿ ಪ್ರತಿಭಟನೆ ನಡೆಸುತ್ತಿದ್ದ ಸಂದರ್ಭದಲ್ಲಿ ಗಣಪತಿ ಅವರು ಬೆಂಕಿಯಿದ್ದ ಟೈಯರ್ ಮೇಲೆ ಜಿಗಿದು ಆತ್ಮಹತ್ಯೆ ಮಾಡಿಕೊಳ್ಳಲು ಯತ್ನಿಸಿದ್ದಾರೆ.
ಗೋಕಾಕ್ ನಗರದ ಚಿನವಾರ ಗಲ್ಲಿಯ ನಿವಾಸಿಯಾಗಿರುವ ಗಣಪತಿ ರಜಪೂತ (55) ಎಂಬ ವ್ಯಕ್ತಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಸದ್ಯ ಇವರ ಸ್ಥಿತಿ ಚಿಂತಾಜನಕವಾಗಿದೆ. ನಮ್ಮ ಸಾಹುಕಾರ್ ಅಂಥವನಲ್ಲ, ಅಂಥ ತಪ್ಪು ಮಾಡಲ್ಲ. ತಪ್ಪು ಮಾಡುವುದು ಹೇಗೆ ಎಂಬುದು ಗೊತ್ತು ಕೂಡ ಇಲ್ಲ. ಈ ಕಲ್ಲಳ್ಳಿ ಯಾರಿವನು, ಈ ಪ್ರಕರಣ ಸಿಬಿಐ ತನಿಖೆ ಆಗಲೇ ಬೇಕು. ನಾನು ಸತ್ತು ಹೋಗಬೇಕು ಎನ್ನುತ್ತಲೇ ಬೆಂಕಿಗೆ ಜಿಗಿದಿದ್ದಾರೆ.
ಸ್ಥಳೀಯರು ಕೂಡಲೇ ಅವರನ್ನು ಪೊಲೀಸರ ಸಹಾಯದಿಂದ ಆಸ್ಪತ್ರೆಗೆ ದಾಖಲು ಮಾಡಿದ್ದಾರೆ. ಆಸ್ಪತ್ರೆಯಲ್ಲಿ ಕೂಡ ಇದನ್ನೇ ಗಣಪತಿ ಕನವರಿಸುತ್ತಿದ್ದರು ಎನ್ನಲಾಗಿದೆ. ಈ ಸಂಬಂಧ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಜಾರಕಿಹೊಳಿ ಸೆಕ್ಸ್​ ಸಿಡಿ‌ ಪ್ರಕರಣ 5 ಕೋಟಿ ರೂಪಾಯಿಗೆ ಡೀಲ್​!

ಜಾರಕಿಹೊಳಿ ಸೆಕ್ಸ್​ ಸಿಡಿ ರಿಲೀಸ್​ಗೂ ಮುನ್ನ ದಿನೇಶ್ ಕಲ್ಲಹಳ್ಳಿ ಲಾಡ್ಜ್​ಗೆ ಹೋಗಿದ್ದೇಕೆ? ಸಿಸಿ ಕ್ಯಾಮರಾದಲ್ಲಿ ಸೆರೆ

ಜಾರಕಿಹೊಳಿ ಸೆಕ್ಸ್​ ಸಿಡಿ ಪ್ರಕರಣ: ಹಲವು ಅನುಮಾನ ಹುಟ್ಟಿಸಿದೆ ಡಾ.ಸುಧಾಕರ್​ ಹೇಳಿಕೆ

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:three × 5 =
Remember me
